Karnataka Weather: ಏಪ್ರಿಲ್ 13ರವರೆಗೂ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಕರ್ನಾಟಕದ ವಿವಿಧ ಭಾಗಗಳಲ್ಲಿ ಈ ವಾರ ಪೂರ್ತಿ ಮಳೆಯಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಂಡಮಾರುತ ಪರಿಚಲನೆಯು ತಮಿಳುನಾಡು ಹಾಗೂ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ತರಿಸಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Karnataka Weather: ಏಪ್ರಿಲ್ 13ರವರೆಗೂ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
ಮಳೆ
Image Credit source: PTI

Updated on: Apr 07, 2025 | 7:19 AM

ಬೆಂಗಳೂರು, ಏಪ್ರಿಲ್ 07: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 13ರವರೆಗೂ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಎಲ್ಲೆಲ್ಲಿ ಮಳೆಯಾಗಿದೆ?
ಕೃಷ್ಣರಾಜಪೇಟೆ, ಆಗುಂಬೆ, ಪುತ್ತೂರು, ಬೆಳ್ತಂಗಡಿ, ಕಮ್ಮರಡಿ, ಕಳಸ, ನಾಪೋಕ್ಲು, ಕಾರ್ಕಳ, ಯಲ್ಲಾಪುರ, ಮಸ್ಕಿ, ಲಿಂಗಸುಗೂರು, ಕಕ್ಕೇರಿ, ಮುದ್ದೇಬಿಹಾಳ, ನಾಗಮಂಗಲ, ಅಜ್ಜಂಪುರ, ಹೊನ್ನಾಳಿ, ಸಿದ್ದಾಪುರ, ಬನವಾಸಿ, ಉಪ್ಪಿನಂಗಡಿ, ಬಬಲೇಶ್ವರ, ಕೂಡಲಸಂಗಮ, ಹುಂಚದಕಟ್ಟೆ, ಎಚ್​ಡಿ ಕೋಟೆ, ಟಿಜಿ ಹಳ್ಳಿಯಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 38.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರು ಹವಾಮಾನ ಹೇಗಿದೆ?

ಇದನ್ನೂ ಓದಿ
ಹಿಂಗಾರು ಮಳೆ ಜೋರು, ರಾಜಕೀಯ ಬಗ್ಗೆಯೂ ಬೊಂಬೆ ಯುಗಾದಿ ಭವಿಷ್ಯ!
ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಮಳೆ
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಳ; ಹವಾಮಾನ ಇಲಾಖೆ
ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದೆ, ಎಚ್​ಎಎಲ್​ನಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಬೆಂಗಳೂರು ಸೇರಿ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆ

ಹೊನ್ನಾವರದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 38.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us