AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಮುಂಗಾರು ಮುಗೀತು, ಚಂಡಮಾರುತವೂ ಹೋಯ್ತು, ಚಳಿ ಶುರು, ಕರ್ನಾಟಕದ ಕೆಲವೇ ಕೆಲವು ಕಡೆ ಮಳೆ

ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದೆ. ಉತ್ತರ ಒಳನಾಡಿನ ಕೆಲವು ಪ್ರದೇಶಗಳನ್ನು ಹೊರತುಪಡಿಸಿ ಉಳಿದೆಡೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಆಯ್ತು, ಚಂಡಮಾರುತ ಮುಗೀತು ಕರ್ನಾಟಕದಾದ್ಯಂತ ಬಿಸಿಲು ಆರಂಭವಾಗಿದೆ. ಜತೆಗೆ ತಂಪಾದ ಗಾಳಿ ಬೀಸುತ್ತಿದೆ. ಕೆಲವೇ ಕೆಲವು ಕಡೆಗಳಲ್ಲಿ ಹೊರತುಪಡಿಸಿ ಉಳಿದೆಲ್ಲಾ ಕಡೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರದಲ್ಲಿ ಮಳೆ(Rain)ಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

Karnataka Weather: ಮುಂಗಾರು ಮುಗೀತು, ಚಂಡಮಾರುತವೂ ಹೋಯ್ತು, ಚಳಿ ಶುರು, ಕರ್ನಾಟಕದ ಕೆಲವೇ ಕೆಲವು ಕಡೆ ಮಳೆ
ಮಳೆ Image Credit source: PTI
ನಯನಾ ರಾಜೀವ್
|

Updated on: Oct 30, 2025 | 7:23 AM

Share

ಬೆಂಗಳೂರು, ಅಕ್ಟೋಬರ್ 30: ಮುಂಗಾರು ಆಯ್ತು, ಚಂಡಮಾರುತ ಮುಗೀತು ಕರ್ನಾಟಕದಾದ್ಯಂತ ಬಿಸಿಲು ಆರಂಭವಾಗಿದೆ. ಜತೆಗೆ ತಂಪಾದ ಗಾಳಿ ಬೀಸುತ್ತಿದೆ. ಕೆಲವೇ ಕೆಲವು ಕಡೆಗಳಲ್ಲಿ ಹೊರತುಪಡಿಸಿ ಉಳಿದೆಲ್ಲಾ ಕಡೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರದಲ್ಲಿ ಮಳೆ(Rain)ಯಾಗಲಿದ್ದು ಯೆಲ್ಲೋ ಅಲರ್ಟ್ಘೋಷಿಸಲಾಗಿದೆ. ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಒಣಹವೆ ಇರಲಿದೆ.

ಭಾಲ್ಕಿ, ಔರಾದ್ನಲ್ಲಿ ಹೆಚ್ಚು ಮಳೆಯಾಗಿದೆ. ಹುಮ್ನಾಬಾದ್, ಬೀದರ್, ಚಿಂಚೋಳಿ, ಕಮಲಾಪುರ, ತರೀಕೆರೆ, ಮೂಡುಬಿದಿರೆ, ಪೊನ್ನಂಪೇಟೆ, ಗೇರುಸೊಪ್ಪ, ಗುರುಮಿಟ್ಕಲ್, ಮಂಗಳೂರು, ಸೈದಾಪುರ, ಸೇಡಂ, ಉಪ್ಪಿನಂಗಡಿ, ವಿರಾಜಪೇಟೆಯಲ್ಲಿ ಮಳೆಯಾಗಿದೆ.

ಹೊನ್ನಾವರದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಬೆಳಗಾವಿ ಏರ್ಪೋರ್ಟ್​​ನಲ್ಲಿ 17.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿದೆ. ಎಚ್ಎಎಲ್ನಲ್ಲಿ 24.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 24.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 24.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 25.8 ಡಿಗ್ರಿ ಸೆಲ್ಸಿಯಸ್ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಒದಿ: Karnataka Weather: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ, ಬೆಂಗಳೂರಿಗೂ ಮಳೆ ಮುನ್ಸೂಚನೆ

ಹೊನ್ನಾವರದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿಸ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಮಂಗಳೂರು ಏರ್ಪೋರ್ಟ್ನಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್ಪೋರ್ಟ್ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ವಿಜಯಪುರದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ದಾಖಲಾಗಿದೆ.

ಗದಗದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 27.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ