Karnataka Weather: ಮುಂಗಾರು ಮುಗೀತು, ಚಂಡಮಾರುತವೂ ಹೋಯ್ತು, ಚಳಿ ಶುರು, ಕರ್ನಾಟಕದ ಕೆಲವೇ ಕೆಲವು ಕಡೆ ಮಳೆ

ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದೆ. ಉತ್ತರ ಒಳನಾಡಿನ ಕೆಲವು ಪ್ರದೇಶಗಳನ್ನು ಹೊರತುಪಡಿಸಿ ಉಳಿದೆಡೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಆಯ್ತು, ಚಂಡಮಾರುತ ಮುಗೀತು ಕರ್ನಾಟಕದಾದ್ಯಂತ ಬಿಸಿಲು ಆರಂಭವಾಗಿದೆ. ಜತೆಗೆ ತಂಪಾದ ಗಾಳಿ ಬೀಸುತ್ತಿದೆ. ಕೆಲವೇ ಕೆಲವು ಕಡೆಗಳಲ್ಲಿ ಹೊರತುಪಡಿಸಿ ಉಳಿದೆಲ್ಲಾ ಕಡೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರದಲ್ಲಿ ಮಳೆ(Rain)ಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

Karnataka Weather: ಮುಂಗಾರು ಮುಗೀತು, ಚಂಡಮಾರುತವೂ ಹೋಯ್ತು, ಚಳಿ ಶುರು, ಕರ್ನಾಟಕದ ಕೆಲವೇ ಕೆಲವು ಕಡೆ ಮಳೆ
ಮಳೆ
Image Credit source: PTI

Updated on: Oct 30, 2025 | 7:23 AM

ಬೆಂಗಳೂರು, ಅಕ್ಟೋಬರ್ 30: ಮುಂಗಾರು ಆಯ್ತು, ಚಂಡಮಾರುತ ಮುಗೀತು ಕರ್ನಾಟಕದಾದ್ಯಂತ ಬಿಸಿಲು ಆರಂಭವಾಗಿದೆ. ಜತೆಗೆ ತಂಪಾದ ಗಾಳಿ ಬೀಸುತ್ತಿದೆ. ಕೆಲವೇ ಕೆಲವು ಕಡೆಗಳಲ್ಲಿ ಹೊರತುಪಡಿಸಿ ಉಳಿದೆಲ್ಲಾ ಕಡೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರದಲ್ಲಿ ಮಳೆ(Rain)ಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಒಣಹವೆ ಇರಲಿದೆ.

ಭಾಲ್ಕಿ, ಔರಾದ್​ನಲ್ಲಿ ಹೆಚ್ಚು ಮಳೆಯಾಗಿದೆ. ಹುಮ್ನಾಬಾದ್, ಬೀದರ್, ಚಿಂಚೋಳಿ, ಕಮಲಾಪುರ, ತರೀಕೆರೆ, ಮೂಡುಬಿದಿರೆ, ಪೊನ್ನಂಪೇಟೆ, ಗೇರುಸೊಪ್ಪ, ಗುರುಮಿಟ್ಕಲ್, ಮಂಗಳೂರು, ಸೈದಾಪುರ, ಸೇಡಂ, ಉಪ್ಪಿನಂಗಡಿ, ವಿರಾಜಪೇಟೆಯಲ್ಲಿ ಮಳೆಯಾಗಿದೆ.

ಹೊನ್ನಾವರದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಬೆಳಗಾವಿ ಏರ್​ಪೋರ್ಟ್​​ನಲ್ಲಿ 17.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿದೆ. ಎಚ್​ಎಎಲ್​ನಲ್ಲಿ 24.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 24.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 24.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 25.8 ಡಿಗ್ರಿ ಸೆಲ್ಸಿಯಸ್ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಒದಿ: Karnataka Weather: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ, ಬೆಂಗಳೂರಿಗೂ ಮಳೆ ಮುನ್ಸೂಚನೆ

ಹೊನ್ನಾವರದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿಸ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಮಂಗಳೂರು ಏರ್​ಪೋರ್ಟ್​ನಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​ಪೋರ್ಟ್​ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ವಿಜಯಪುರದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ದಾಖಲಾಗಿದೆ.

ಗದಗದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 27.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us