AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದಾದ್ಯಂತ ಕಡಿಮೆಯಾಗುತ್ತಿದೆ ಮುಂಗಾರು ಅಬ್ಬರ

ಕರ್ನಾಟಕದಲ್ಲಿ ಮಳೆಯ ಅಬ್ಬರ ಸ್ವಲ್ಪ ಕಡಿಮೆಯಾಗಿದೆ, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಉಳಿದೆಡೆ ಮಳೆಯ ಪ್ರಮಾಣ ಕಡಿಮೆ ಇರಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರದಲ್ಲಿ ಮಳೆಯಾಗಲಿದೆ.

Karnataka Rains: ಕರ್ನಾಟಕದಾದ್ಯಂತ ಕಡಿಮೆಯಾಗುತ್ತಿದೆ ಮುಂಗಾರು ಅಬ್ಬರ
ಮಳೆImage Credit source: The Hindu
ನಯನಾ ರಾಜೀವ್
|

Updated on: Sep 13, 2024 | 7:39 AM

Share

ಕಳೆದ ಎರಡು ದಿನಗಳಿಂದ ಕರ್ನಾಟಕದಾದ್ಯಂತ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಉಳಿದೆಡೆ ಮಳೆ ಕಡಿಮೆ ಇರಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರದಲ್ಲಿ ಮಳೆಯಾಗಲಿದೆ.

ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು,ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಮಳೆಯಾಗಲಿದೆ. ಗೇರುಸೊಪ್ಪ, ಮುಲ್ಕಿ, ಪಣಂಬೂರು, ಮಂಗಳೂರು, ಕಾರ್ಕಳ, ಕೋಟ, ಮಾಣಿ, ಧರ್ಮಸ್ಥಳ, ಕೊಲ್ಲೂರು, ಕುಂದಾಪುರ, ಮಂಗಳೂರು, ಬೆಳ್ತಂಗಡಿ, ಸಿದ್ದಾಪುರ, ಯಲ್ಲಾಪುರ, ಹೊನ್ನಾವರ, ಗೋಕರ್ಣ, ಶಿರಾಲಿ, ಹಾಸನ, ಭಾಗಮಂಡಲ, ಕೊಪ್ಪ, ಶೃಂಗೇರಿ, ಎನ್​ಆರ್​ಪುರ, ಜಯಪುರ, ಹುಂಚದಕಟ್ಟೆಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ನಿತ್ಯ ತುಂತುರು ಮಳೆಯಾಗುತ್ತಿದೆ. ಎಚ್​ಎಎಲ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ 10ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 18ರವರೆಗೆ ಮಳೆ

ಹೊನ್ನಾವರದಲ್ಲಿ 30.3ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.1ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?