ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 13ರವರೆಗೂ ಭಾರಿ ಮಳೆ ಮುಂದುವರೆಯಲಿದೆ. ಆದರೆ ಕರಾವಳಿ ಮೊದಲಿಗಿಂತ ಮಳೆಯ ಅಬ್ಬರ ಸ್ವಲ್ಪ ಕಡಿಮೆಯಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗಲಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಕದ್ರಾ, ಕಾರವಾರ, ಶಿರಾಲಿ, ಶೋರಾಪುರ, ಬೀದರ್, ಕೆಂಭಾವಿ, ಅಡಕಿ, ಸೇಡಂ, ಮಂಗಳೂರು, ಮಂಕಿ, ಜೋಯಿಡಾ, ಸೈದಾಪುರ, ಬಿಳಗಿ, ಕಲಬುರಗಿ, ಚಿಂಚೋಳಿ, ಶಿಗ್ಗಾಂವ್, ಯಡ್ರಾಮಿ, ಬೆಳ್ಳೂರು, ಹರಪನಹಳ್ಳಿ, ಕೋಟ, ಕುಂದಾಪುರ, ಪಣಂಬೂರು, ಕಾರ್ಕಳ, ಉಡುಪಿ, ಕ್ಯಾಸಲ್ರಾಕ್, ಗೇರುಸೊಪ್ಪ, ಕಿರವತ್ತಿ, ಮುಂಡಗೋಡು, ಕುಮಟಾ, ಧರ್ಮಸ್ಥಳ, ಯಲ್ಲಾಪುರ, ವಿಜಯಪುರ, ಯಡವಾಡ, ಲಕ್ಷ್ಮೇಶ್ವರ, ಮುದ್ದೇಬಿಹಾಳ, ಸವಣೂರು, ತಾಳಿಕೋಟೆ, ಶಿವಮೊಗ್ಗ, ಮೂಡಿಗೆರೆ, ಎಚ್ಡಿ ಕೋಟೆಯಲ್ಲಿ ಮಳೆಯಾಗಿದೆ.
Karnataka Rains: ಕರ್ನಾಟಕದ ಕರಾವಳಿಯಲ್ಲಿ ಮತ್ತೆ ಹೆಚ್ಚಾಗಲಿದೆ ಮಳೆ
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ, ಎಚ್ಎಎಲ್ನಲ್ಲಿ 26.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 26.7 – ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 27.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
Karnataka Rains: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕಡಿಮೆ, ಸಾಧಾರಣ ಮಳೆ
ಬೀದರ್ನಲ್ಲಿ 26.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 24.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ