Karnataka Rains: ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಎಷ್ಟು ದಿನ ಮುಂದುವರೆಯುತ್ತೆ ಮಹಾಮಳೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿ ಹೋಗಿವೆ, ಬಹುತೇಕ ಕಡೆ ಗುಡ್ಡ ಕುಸಿದಿದೆ, ಕೆಲವಡೆ ಮನೆಗಳಿಗೆ ನೀರು ನುಗ್ಗಿದೆ, ಇನ್ನೂ ಕೆಲವೆಡೆ ಮರಗಳು ಬಿದ್ದು ವಾಹನ ಸಂಚಾರ ಸ್ಥಗಿತಗೊಂಡಿವೆ. ಅನೇಕ ನದಿಗಳು ಉಕ್ಕಿ ಹರಿಯುತ್ತಿವೆ. ಹಾಗೆಯೇ ಮಳೆ ಕಡಿಮೆಯಾಗುವಂತೆ ಕಾಣುತ್ತಿಲ್ಲ, ಜುಲೈ 24ರ ಬಳಿಕ ಕ್ರಮೇಣವಾಗಿ ಮಳೆ ಕಡಿಮೆಯಾಗುವ ನಿರೀಕ್ಷೆ ಇದೆ.

Karnataka Rains: ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಎಷ್ಟು ದಿನ ಮುಂದುವರೆಯುತ್ತೆ ಮಹಾಮಳೆ
ಮಳೆ
Image Credit source: iStock

Updated on: Jul 20, 2024 | 7:55 AM

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಮುಂದುವರೆದಿದೆ. ಜುಲೈ 24ರವರೆಗೆ ಇದೇ ಪರಿಸ್ಥಿತಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗಕ್ಕೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಹಾಸನ, ಬೆಳಗಾವಿಗೆ ಆರೆಂಜ್ ಅಲರ್ಟ್​ ಇದೆ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಎಚ್​ಎಎಲ್​ನಲ್ಲಿ 27.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 25.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಜುಲೈ 24ರವರೆಗೆ ಕರ್ನಾಟಕದ ಈ ಜಿಲ್ಲೆಗಳಿಗೆ ಭಾರಿ ಮಳೆಯ ಎಚ್ಚರಿಕೆ

ಆಗುಂಬೆ, ಕ್ಯಾಸಲ್​ರಾಕ್, ಕಾರ್ಕಳ, ಗೇರುಸೊಪ್ಪ, ಕೊಟ್ಟಿಗೆಹಾರ, ಉಡುಪಿ, ಮಂಗಳೂರು ವಿಮಾನ ನಿಲ್ದಾಣ, ಸಿದ್ದಾಪುರ, ಅಂಕೋಲಾ, ಗೋಕರ್ಣ, ಕಳಸ, ಮೂರ್ನಾಡು, ನಾಪೋಕ್ಲು, ಕೊಲ್ಲೂರು, ಕದ್ರಾ, ಕೊಪ್ಪ, ಕೋಟ, ಧರ್ಮಸ್ಥಳ, ಕುಮಟಾ, ಲಿಂಗನಮಕ್ಕಿಯಲ್ಲಿ ಭಾರಿ ಮಳೆಯಾಗಿದೆ.

ಶಿರಾಲಿ, ಬೆಳ್ತಂಗಡಿ, ಕುಂದಾಪುರ, ಬನವಾಸಿ, ಸಿದ್ದಾಪುರ, ಜಯಪುರ, ಸೋಮವಾರಪೇಟೆ, ಕಾರವಾರ, ಮುಲ್ಕಿ, ಉಪ್ಪಿನಂಗಡಿ, ಸುಳ್ಯ, ಪುತ್ತೂರು, ಲೋಂಡಾ, ಕಮ್ಮರಡಿ, ಹುಂಚದಕಟ್ಟೆ, ಶೃಂಗೇರಿ, ಯಲ್ಲಾಪುರ, ತ್ಯಾಗರ್ತಿ, ಮಂಗಳೂರು, ಶೃಂಗೇರಿ, ಮಾಣಿ, ಪಣಂಬೂರು, ಮೂಡಿಗೆರೆಯಲ್ಲಿ ಮಳೆಯಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹಳಿಯಾಳ, ಎನ್​ಆರ್​ಪುರ, ಭದ್ರಾವತಿ, ಹುಣಸೂರು, ಹಿರೇಕೆರೂರು, ಬೆಳಗಾವಿ, ಕುಶಾಲನಗರ, ಕಿರವತ್ತಿ, ಅರಕಲಗೂಡು, ಮುಂಡಗೋಡ, ಚನ್ನಪಟ್ಟಣ, ಸಂಕೇಶ್ವರ, ಔರಾದ್, ಬೇಲೂರು, ಬಂಡೀಪುರ, ಕೃಷ್ಣರಾಜಸಾಗರ, ಚಿಂಚೋಳಿಯಲ್ಲಿ ಮಳೆಯಾಗಿದೆ.

ಅಜ್ಜಂಪುರ, ಶ್ರೀರಂಗಪಟ್ಟಣ, ರಾಮನಗರ, ಚನ್ನರಾಯಪಟ್ಟಣ, ಧಾರವಾಡ, ದಾವಣಗೆರೆ, ಹೊಸದುರ್ಗ, ಹರಪನಹಳ್ಳಿ, ಬೇಗೂರು, ನಾಗಮಂಗಲದಲ್ಲಿ ಮಳೆಯಾಗಿದೆ. ಹೊನ್ನಾವರದಲ್ಲಿ 27.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 27.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬಾಗಲಕೋಟೆಯಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 26.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 27.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ