AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕು, ಈ ಜಿಲ್ಲೆಗೆ ರೆಡ್​ ಅಲರ್ಟ್, ಶಾಲಾ-ಕಾಲೇಜುಗಳಿಗೆ ಇಂದು ರಜೆ

ಕರ್ನಾಟಕದಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವು ನದಿಗಳು ಉಕ್ಕಿ ಹರಿಯುತ್ತಿವೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮುಂತಾದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕೆಲ ತಾಲೂಕಿನಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

Karnataka Rains: ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕು, ಈ ಜಿಲ್ಲೆಗೆ ರೆಡ್​ ಅಲರ್ಟ್, ಶಾಲಾ-ಕಾಲೇಜುಗಳಿಗೆ ಇಂದು ರಜೆ
ಮಳೆ
ಗಂಗಾಧರ​ ಬ. ಸಾಬೋಜಿ
|

Updated on:Jul 19, 2025 | 9:13 AM

Share

ಬೆಂಗಳೂರು, ಜುಲೈ 19: ಕರ್ನಾಟಕದಲ್ಲಿ ಮುಂಗಾರು ಮಳೆ (rain) ಮತ್ತೆ ಚುರುಕುಗೊಂಡಿದೆ. ಹಲವು ನದಿಗಳು ಉಕ್ಕಿ ಹರಿಯುತ್ತಿವೆ. ಹಲವು ಜಿಲ್ಲೆಗಳಲ್ಲಿ ವರುಣ ಅವಾಂತರ ಕೂಡ ಸೃಷ್ಟಿಸಿದ್ದಾನೆ. ಇಂದು ಕೂಡ ಹಲವು ಜಿಲ್ಲೆಗಳಲ್ಲಿ ಮಳೆ ಆಗುವುದಾಗಿ ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ಕೊಡಗಿನಲ್ಲಿ (Kodagu) ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್​ ಅಲರ್ಟ್ ಘೋಷಿಸಿದರೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ 5 ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜೊತೆಗೆ ಕೆಲ ಜಿಲ್ಲೆಗಳಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು ಜಿಲ್ಲೆಗಳಲ್ಲಿ 40-50ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ಇನ್ನುಳಿದ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಹಿನ್ನಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Karnataka Rains: ಕೊಡಗು ಸೇರಿ ಕರ್ನಾಟಕದ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್​, ಜು.24ರವರೆಗೂ ಹುಚ್ಚು ಮಳೆ

ಇದನ್ನೂ ಓದಿ
Image
ಕೊಡಗು ಸೇರಿ ಕರ್ನಾಟಕದ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್
Image
ಕರ್ನಾಟಕದಾದ್ಯಂತ ವರುಣನ ಆರ್ಭಟ ಜೋರು, ಕೊಡಗು, ಹಾಸನದಲ್ಲಿ ಭಾರಿ ಮಳೆ
Image
ಮಳೆಯಾರ್ಭಟ: ಜು.17ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Image
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜು.17ರ ಬಳಿಕ ಮತ್ತಷ್ಟು ಹೆಚ್ಚಲಿದೆ ಮಳೆ

ಬೆಂಗಳೂರಿನ ಮೋಡ ಕವಿದ ವಾತಾವರಣ ಇದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. 30-40 ಕಿ.ಮೀ ನೊಂದಿಗೆ ನಿರಂತರ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಟ ಮತ್ತು ಕನಿಷ್ಟ ತಾಪಮಾನ ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಮತ್ತು 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

5 ದಿನ ಆರೆಂಜ್ ಅಲರ್ಟ್

ಮಲೆನಾಡು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭಾರಿ‌ ಮಳೆ ಮುನ್ಸೂಚನೆ ಹಿನ್ನಲೆ ಭಾರತೀಯ ಹವಾಮಾನ ಇಲಾಖೆ ಚಿಕ್ಕಮಗಳೂರು ಜಿಲ್ಲೆಯಲ್ಲಿ 5 ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ-ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್​ನಲ್ಲಿ ದಟ್ಟ ಮಂಜು, ವಾಹನ ಸವಾರರು ಪರದಾಡುವಂತಾಗಿದೆ. ಜಲಪಾತ ಬಳಿ ತೆರಳದಂತೆ ಪ್ರವಾಸಿಗರಿಗೆ ಪೊಲೀಸರು ಸೂಚನೆ ನೀಡಿದ್ದಾರೆ.

ಶಾಲಾ-ಕಾಲೇಜುಗಳಿಗೆ ಇಂದು ರಜೆ

ಮಂಗಳೂರು ತಾಲೂಕಿನಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನಲೆ ಮಂಗಳೂರು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಜೊತೆಗೆ ನದಿ, ಸಮುದ್ರ ತೀರ ಪ್ರದೇಶಕ್ಕೆ ತೆರಳದಂತೆ ಮೀನುಗಾರರಿಗೆ ಮಂಗಳೂರು ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: Karnataka Rains: ಕರ್ನಾಟಕದಾದ್ಯಂತ ವರುಣನ ಆರ್ಭಟ ಜೋರು, ಕೊಡಗು, ಹಾಸನದಲ್ಲಿ ಭಾರಿ ಮಳೆ ಸಾಧ್ಯತೆ

ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಅಂಗನವಾಡಿಯಿಂದ ಪ್ರೌಢ ಶಾಲೆವರೆಗೆ ರಜೆ ಘೋಷಿಸಿ ಬಂಟ್ವಾಳ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಉಳ್ಳಾಲ ತಾಲೂಕು ವ್ಯಾಪ್ತಿಯ ಶಾಲೆಗಳಿಗೂ ತಹಶೀಲ್ದಾರ್ ರಜೆ ಘೋಷಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 8:07 am, Sat, 19 July 25