Karnataka Rains: ಕರ್ನಾಟಕದಲ್ಲಿ ಜೂನ್​ 2ರವರೆಗೂ ಭಾರಿ ಮಳೆ, 5 ಜಿಲ್ಲೆಗಳಿಗೆ ರೆಡ್ ಅಲರ್ಟ್​

ಕರ್ನಾಟಕದ ಮುಂದಿನ ಮೂರು ದಿನ ಭಾರಿ ಮಳೆಯಾಗಲಿದ್ದು, ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಧಾರಾಕಾರ ಮಳೆಯಾಗಲಿದ್ದು ರೆಡ್ ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ಮೈಸೂರು, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​, ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರ್ನಾಟಕದಲ್ಲಿ ಜೂನ್​ 2ರವರೆಗೂ ಭಾರಿ ಮಳೆ, 5 ಜಿಲ್ಲೆಗಳಿಗೆ ರೆಡ್ ಅಲರ್ಟ್​
ಮಳೆ
Image Credit source: PTI

Updated on: May 30, 2025 | 7:23 AM

ಬೆಂಗಳೂರು, ಮೇ 30: ಕರ್ನಾಟಕದಲ್ಲಿ ಜೂನ್​ 2ರವರೆಗೂ ಭಾರಿ ಮಳೆ(Rain) ಮುಂದುವರೆಯಲಿದ್ದು, 5 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಕಳೆದ ಒಂದು ವಾರದಿಂದ ಕರ್ನಾಟಕದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಿ ಅವಾಂತರ ಸೃಷ್ಟಿಯಾಗಿದೆ. ಬೆಂಗಳೂರಿನಲ್ಲಿ ಕಳೆದ ವಾರದ ಆರಂಭದಲ್ಲಿ ಎರಡು ದಿನ ಮಳೆಯಾಗಿದ್ದು, ಈಗ ಆಗೊಮ್ಮೆ, ಈಗೊಮ್ಮೆ ಸಾಧಾರಣ ಮಳೆಯಾಗುತ್ತಿದೆ.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಧಾರಾಕಾರ ಮಳೆಯಾಗಲಿದ್ದು ರೆಡ್ ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ಮೈಸೂರು, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​, ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಮಂಕಿ, ಉಪ್ಪಿನಂಗಡಿ, ಭಾಗಮಂಡಲ, ಕಾರವಾರ, ಆಗುಂಬೆ, ಗೇರುಸೊಪ್ಪ, ಬಂಟವಾಳ, ಮಾಣಿ, ಪುತ್ತೂರು, ಹೊನ್ನಾವರ, ಕುಂದಾಪುರ, ಪಣಂಬೂರು, ಸಿದ್ದಾಪುರ, ನಾಪೋಕ್ಲು, ಕೊಟ್ಟಿಗೆಹಾರ, ಗೋಕರ್ಣ, ಕದ್ರಾ, ಮಂಗಳೂರು, ಕುಮಟಾ, ಸುಳ್ಯ, ಕಾರ್ಕಳ, ಗೋಕರ್ಣದಲ್ಲಿ ಮಳೆಯಾಗಿದೆ.

ಇದನ್ನೂ ಓದಿ
ಕರ್ನಾಟಕ, ಕೇರಳ, ತಮಿಳುನಾಡು, ಮಹಾರಾಷ್ಟ್ರದಲ್ಲಿ ಜೂನ್ 2ರವರೆಗೆ ಮಳೆಯ ಅಬ್ಬರ
ಬೆಳಗಾವಿ: ಹಳ್ಳದಲ್ಲಿ ಎತ್ತಿನ ಗಾಡಿ ಮಗುಚಿ ಬಿದ್ದು ಇಬ್ಬರು ಮಕ್ಕಳು ಸಾವು
ಭಾರಿ ಮಳೆಯಿಂದ ಕರ್ನಾಟಕದ ಈ ಎರಡು ಕಡೆ ಅರಣ್ಯ ಸಫಾರಿ ರದ್ದು
ಅವೈಜ್ಞಾನಿಕವಾಗಿ ಸವಾರರನ್ನು ತಡೆಯಬೇಡಿ: ಪೊಲೀಸರಿಗೆ ಪರಮೇಶ್ವರ್ ಎಚ್ಚರಿಕೆ

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯ ಮುನ್ಸೂಚನೆ

ಕೊಪ್ಪ, ಶೃಂಗೇರಿ, ಮಂಗಳೂರು, ಧರ್ಮಸ್ಥಳ, ಮುಲ್ಕಿ, ಗುರುಮಿಟ್ಕಲ್, ಯಾದಗಿರಿ, ಬೆಳ್ತಂಗಡಿ, ಸೈದಾಪುರ, ಕಳಸ, ಜಯಪುರ, ರಾಯಚೂರು, ನೆಲೋಗಿ, ಯಡ್ರಾಮಿ, ಎನ್​ಆರ್​​ಪುರ, ಕಮಲಾಪುರ, ಕ್ಯಾಸಲ್​ರಾಕ್, ಗಬ್ಬೂರು, ಬಂಡೀಪುರ, ಭದ್ರಾವತಿ, ತರೀಕೆರೆ, ವಿಜಯಪುರ, ಅಫ್ಜಲ್​ಪುರ, ಇಂಡಿ, ಗಂಗಾಪುರ, ಎಚ್​ಡಿ ಕೋಟೆ, ಕೆಂಭಾವಿ, ಶಿವಮೊಗ್ಗ, ಕೋಣನೂರು, ಸರಗೂರು, ಅರಕಲಗೂಡು, ಗುಂಡ್ಲುಪೇಟೆಯಲ್ಲಿ ಮಳೆಯಾಗಿದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 24.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 26.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 24.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

​ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us