Karnataka Rains: ಕರ್ನಾಟಕದ ಕರಾವಳಿಗೆ ಮತ್ತೆ ಮಳೆಯ ರೆಡ್ ಅಲರ್ಟ್​, ಮೂರು ದಿನ ಮಹಾಮಳೆ

ಕರ್ನಾಟಕದ ಕರಾವಳಿ, ಮಲೆನಾಡು, ಉತ್ತರ ಒಳನಾಡು ಸೇರಿದಂತೆ ಅನೇಕ ಕಡೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಕಳೆದ ಮೂರು ವಾರಗಳಿಂದ ಕರ್ನಾಟಕದಲ್ಲಿ ಭಾರಿ ಮಳೆಯಾಗುತ್ತಿದ್ದು ಅನಾಹುತಗಳನ್ನು ಸೃಷ್ಟಿಸುತ್ತಿದೆ.

Karnataka Rains: ಕರ್ನಾಟಕದ ಕರಾವಳಿಗೆ ಮತ್ತೆ ಮಳೆಯ ರೆಡ್ ಅಲರ್ಟ್​, ಮೂರು ದಿನ ಮಹಾಮಳೆ
ಮಳೆImage Credit source: Udayavani
Follow us
|

Updated on: Aug 02, 2024 | 7:36 AM

ಕರ್ನಾಟಕದ ಕರಾವಳಿಯಲ್ಲಿ ಮಳೆ ಮತ್ತಷ್ಟು ಹೆಚ್ಚಾಗಲಿದೆ ಎನ್ನುವ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಮುಂದಿನ ಮೂರು ದಿನ ಹೆಚ್ಚಿನ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕೊಡಗು, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲೂ ಮಳೆಯಾಗಲಿದೆ.

ಕಾರ್ಕಳ, ಅಂಕೋಲಾ, ಕ್ಯಾಸಲ್​ರಾಕ್, ಸಿದ್ದಾಪುರ, ಆಗುಂಬೆ, ಮುಲ್ಕಿ, ಕದ್ರಾ, ಧರ್ಮಸ್ಥಳ, ಬೆಳ್ತಂಗಡಿ, ಕುಂದಾಪುರ, ಗೋಕರ್ಣ, ಕುಮಟಾ, ಶಿರಾಲಿ, ಗೇರುಸೊಪ್ಪ, ಮಂಕಿ, ಕಾರವಾರ, ಉಪ್ಪಿನಂಗಡಿ, ಪುತ್ತೂರು, ಮಂಗಳೂರು, ಮಾಣಿ, ಕೋಟ, ಉಡುಪಿ, ಸುಳ್ಯ, ಲೋಂಡಾ, ಶೃಂಗೇರಿ, ಸಿದ್ದಾಪುರ, ಲಿಂಗನಮಕ್ಕಿ, ಕಳಸದಲ್ಲಿ ಭಾರಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದಾದ್ಯಂತ ಆಗಸ್ಟ್ 6ರವರೆಗೆ ಭಾರಿ ಮಳೆ

ಜೋಯಿಡಾ, ನಾಪೋಕ್ಲು, ಕೊಟ್ಟಿಗೆಹಾರ, ಹೆಸರಘಟ್ಟ, ಮಾಗಡಿ, ವಿರಾಜಪೇಟೆ, ಮೂರ್ನಾಡು, ಯಲ್ಲಾಪುರ, ಪೊನ್ನಂಪೇಟೆ, ಜಿಕೆವಿಕೆ, ಕಮ್ಮರಡಿ, ಕಿರವತ್ತಿ, ಹಳಿಯಾಳ, ಬನವಾಸಿ, ಹಾವೇರಿ, ಕುಣಿಗಲ್, ಹೊಸಕೋಟೆ, ಬೆಂಗಳೂರು ನಗರ, ಗುಬ್ಬಿ, ಬಾಳೆಹೊನ್ನೂರು, ಹುಣಸೂರು, ಧಾರವಾಡ, ಹುಂಚದಕಟ್ಟೆ, ಎನ್​ಆರ್​ಪುರ, ಕುಶಾಲನಗರ, ಎಚ್​ಡಿ ಕೋಟೆ, ಬೇಗೂರು, ಶ್ರವಣಬೆಳಗೊಳ, ನಂಜನಗೂಡು, ಮದ್ದೂರಿನಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಗುರುವಾರ ರಾತ್ರಿ ಮಳೆಯಾಗಿದೆ. ಎಚ್​ಎಎಲ್​ನಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.2ಡಿಗ್ರಿನ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 29.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.7ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 27.9ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ28.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 27.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ