AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಸೆಪ್ಟೆಂಬರ್ 21ರಿಂದ ಕರ್ನಾಟಕದಾದ್ಯಂತ ಮತ್ತೆ ಮಳೆ ಶುರು

ಕರ್ನಾಟಕದಾದ್ಯಂತ ಐದು ದಿನಗಳ ಬಳಿಕ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗದಲ್ಲಿ ಒಣಹವೆ ಇರಲಿದೆ.

Karnataka Rains: ಸೆಪ್ಟೆಂಬರ್ 21ರಿಂದ ಕರ್ನಾಟಕದಾದ್ಯಂತ ಮತ್ತೆ ಮಳೆ ಶುರು
ಮಳೆImage Credit source: Belagavi info
ನಯನಾ ರಾಜೀವ್
|

Updated on: Sep 17, 2024 | 7:40 AM

Share

ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸೆಪ್ಟೆಂಬರ್ 21ರ ಬಳಿಕ ಮತ್ತೆ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗದಲ್ಲಿ ಒಣಹವೆ ಇರಲಿದೆ. ಕಾರವಾರ, ಶಿರಾಲಿ, ಸಿದ್ದಾಪುರ, ಕುಮಟಾ, ಕುಂದಾಪುರ, ಮಂಕಿ, ಗೋಕರ್ಣ, ತರೀಕೆರೆಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್​ಎಎಲ್​ನಲ್ಲಿ 30.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 30.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Karnataka Rains: ಕರ್ನಾಟಕದ ಕೆಲವೆಡೆ ಸಾಧಾರಣ ಮಳೆ, ತಾಪಮಾನ ಹೆಚ್ಚಳ

ಬೀದರ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಧಾರವಾಡದಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 27.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 32.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ32.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!