Karnataka Weather: ಕರ್ನಾಟಕದ ಕರಾವಳಿಯಲ್ಲಿ ಮಳೆ, ಉಳಿದೆಡೆ ಒಣಹವೆ

ಕರ್ನಾಟಕದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಒಣಹವೆ ಇರಲಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಸಾಧಾರಣ ಮಳೆಯಾಗಲಿದೆ.

Karnataka Weather: ಕರ್ನಾಟಕದ ಕರಾವಳಿಯಲ್ಲಿ ಮಳೆ, ಉಳಿದೆಡೆ ಒಣಹವೆ
ಮಳೆ
Image Credit source: PTI

Updated on: Oct 01, 2025 | 7:18 AM

ಬೆಂಗಳೂರು, ಅಕ್ಟೋಬರ್ 01: ಕರ್ನಾಟಕದಾದ್ಯಂತ ಮಳೆ(Rain) ಬಿಡುವು ಪಡೆದಿದೆ. ಕರಾವಳಿಯ ಕೆಲವು ಕಡೆಗಳಲ್ಲಿ ಮಳೆಯಾಗಿದ್ದು, ಉಳಿದೆಲ್ಲಾ ಕಡೆ ಒಣಹವೆ ಮುಂದುವರೆದಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಹೆಚ್ಚಿನ ಮಳೆಯಾಗಲಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಒಣಹವೆ ಇರಲಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಸಾಧಾರಣ ಮಳೆಯಾಗಲಿದೆ.

ಮಾನ್ವಿ, ಕ್ಯಾಸಲ್​ರಾಕ್, ಆಗುಂಬೆ, ಸೈದಾಪುರ, ಅಂಕೋಲಾ, ಗೇರುಸೊಪ್ಪ, ಲೋಂಡಾ, ಧರ್ಮಸ್ಥಳ, ಹೊನ್ನಾವರ, ಕದ್ರಾ, ಕಮ್ಮರಡಿ, ಕಾರವಾರ, ಸಂಕೇಶ್ವರ, ಸೋಮವಾರಪೇಟೆ, ಯಲ್ಲಾಪುರದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಶುಭ್ರ ಆಕಾಶವಿದೆ, ಎಚ್​​ಎಎಲ್​ನಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಇಂದಿನಿಂದ ಅ. 4ರವರೆಗೆ ಕರ್ನಾಟಕದಲ್ಲಿ ಮಳೆ; ಕರಾವಳಿಯಲ್ಲಿ ಚಂಡಮಾರುತದ ಭೀತಿ

ಹೊನ್ನಾವರದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​​ಪೋರ್ಟ್​​ನಲ್ಲಿ 24.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಕಲಬುರಗಿಯಲ್ಲಿ 31.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

 

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us