AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಉತ್ತರ ಕರ್ನಾಟಕ ಭಾಗಗಳಲ್ಲಿ ಮಳೆ ಚುರುಕು, ಸೆ.24ರಿಂದ ರಾಜ್ಯಾದ್ಯಂತ ಹೆಚ್ಚಲಿದೆ ಮಳೆ

ಕರ್ನಾಟಕದಾದ್ಯಂತ ಇಂದು ಸಾಧಾರಣ ಮಳೆ(Rain)ಯಾಗಲಿದೆ. ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರದಲ್ಲಿ ಮಳೆಯಾಗಲಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಮಳೆಯಾಗಲಿದೆ.

Karnataka Rains: ಉತ್ತರ ಕರ್ನಾಟಕ ಭಾಗಗಳಲ್ಲಿ ಮಳೆ ಚುರುಕು, ಸೆ.24ರಿಂದ ರಾಜ್ಯಾದ್ಯಂತ ಹೆಚ್ಚಲಿದೆ ಮಳೆ
ಮಳೆ Image Credit source: PTI
ನಯನಾ ರಾಜೀವ್
|

Updated on: Sep 21, 2025 | 7:58 AM

Share

ಬೆಂಗಳೂರು, ಸೆಪ್ಟೆಂಬರ್ 21: ಕರ್ನಾಟಕದಾದ್ಯಂತ ಇಂದು ಸಾಧಾರಣ ಮಳೆ(Rain)ಯಾಗಲಿದೆ. ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರದಲ್ಲಿ ಮಳೆಯಾಗಲಿದೆ.

ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಮಳೆಯಾಗಲಿದೆ. ಗಾಣಗಾಪುರ, ಕೆರೂರು, ಮುಂಡಗೋಡು, ಬನವಾಸಿ, ಬೆಳ್ಳೂರು, ಕೋಟಾ, ಟಿಜಿ ಹಳ್ಳಿ, ಉಡುಪಿ, ಆಗುಂಬೆ, ಬೈಲಹೊಂಗಲ, ಬಂಡೀಪುರ, ಭಾಲ್ಕಿ, ಗೋಪಾಲನಗರ, ಗೋಕಾಕ್, ಕಿಬ್ಬನಹಳ್ಳಿ, ರೋಣ, ಸೈದಾಪುರ, ಉಪ್ಪಿನಂಗಡಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಇಂದು ಮೋಡಕವಿದ ವಾತಾವರಣವಿದ್ದರೂ, ಬಿಸಿಲು ಕೂಡ ಗೋಚರಿಸುತ್ತಿದೆ. ಎಚ್​​ಎಎಲ್​ನಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಬೆಂಗಳೂರು ಸೇರಿ ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸೆ.24ರವರೆಗೂ ಮಳೆ

ಹೊನ್ನಾವರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​​ನಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​​ಪೋರ್ಟ್​​ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 31.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!