AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಮುಂದಿನ 2 ದಿನಗಳ ಕಾಲ ಕರ್ನಾಟಕದ ಉತ್ತರ ಒಳನಾಡಿನ 8 ಜಿಲ್ಲೆಗಳಲ್ಲಿ ಭಾರಿ ಮಳೆ

ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಳೆ ಚುರುಕಾಗಿದೆ, ದಕ್ಷಿಣ ಒಳನಾಡು ಹಾಗೂ ಕರಾವಳಿಯ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ವಿಜಯಪುರ, ಯಾದಗಿರಿಯಲ್ಲಿ ಹೆಚ್ಚು ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

Karnataka Rains: ಮುಂದಿನ 2 ದಿನಗಳ ಕಾಲ ಕರ್ನಾಟಕದ ಉತ್ತರ ಒಳನಾಡಿನ 8 ಜಿಲ್ಲೆಗಳಲ್ಲಿ ಭಾರಿ ಮಳೆ
ಮಳೆ Image Credit source: PTI
ನಯನಾ ರಾಜೀವ್
|

Updated on: Sep 14, 2025 | 7:55 AM

Share

ಬೆಂಗಳೂರು, ಸೆಪ್ಟೆಂಬರ್ 14: ಕರ್ನಾಟಕದ ಹಲವೆಡೆ ಮತ್ತೆ ಮಳೆ(Rain) ಹೆಚ್ಚಾಗಿದೆ. ಉತ್ತರ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದ್ದು, 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ಘೋಷಿಸಲಾಗಿದೆ.ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ವಿಜಯಪುರ, ಯಾದಗಿರಿಯಲ್ಲಿ ಹೆಚ್ಚು ಮಳೆಯಾಗಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ. ಧಾರವಾಡ, ಹುಬ್ಬಳ್ಳಿ, ಧಾರವಾಡ, ಕುಂದಗೋಳ, ವೈಎನ್ ಹೊಸಕೋಟೆ, ತಾಳಿಕೋಟೆ, ಸೈದಾಪುರ, ಹಿಡಕಲ್, ಗಂಗಾಪುರ, ಭಾಲ್ಕಿ, ಜೇವರ್ಗಿ, ಗೌರಿಬಿದನೂರು, ಗಬ್ಬೂರು, ಯಡ್ರಾಮಿ, ಶಿರಹಟ್ಟಿ, ಶಾಹಪುರ, ರಾಯಚೂರು, ನಿಪ್ಪಾಣಿ, ನಲ್ವತವಾಡ, ಮುನಿರಾಬಾದ್, ಮುದ್ದೇಬಿಹಾಳ, ಮಂಠಾಳ, ಕುರ್ಡಿ, ಕಲಘಟಗಿ, ಕಕ್ಕೇರಿ, ಹುಮ್ನಾಬಾದ್ನಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು, 8 ಜಿಲ್ಲೆಗಳಲ್ಲಿ ಮಳೆಯೋ ಮಳೆ

ಬೆಂಗಳೂರಿನ ಎಚ್​​ಎಎಲ್ನಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 31.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 31.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​​ಪೋರ್ಟ್​​ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 29.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 28.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?