AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದಾದ್ಯಂತ ಕಡಿಮೆಯಾದ ಮಳೆ, ಬಹುತೇಕ ಕಡೆ ಒಣಹವೆ

ಕರ್ನಾಟಕದಾದ್ಯಂತ ಮುಂಗಾರು ಆರ್ಭಟ ಕಡಿಮೆಯಾಗಿದ್ದು, ಬಿಸಿಲಿನ ಆಗಮನವಾಗಿದೆ. ಕರಾವಳಿ ಸೇರಿದಂತೆ ಕೆಲವೇ ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

Karnataka Rains: ಕರ್ನಾಟಕದಾದ್ಯಂತ ಕಡಿಮೆಯಾದ ಮಳೆ, ಬಹುತೇಕ ಕಡೆ ಒಣಹವೆ
ಮಳೆImage Credit source: Financial Express
ನಯನಾ ರಾಜೀವ್
|

Updated on: Sep 15, 2024 | 8:01 AM

Share

ಕರ್ನಾಟಕದ ಕರಾವಳಿ ಹಾಗೂ ಕೆಲವು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಕಡೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ.

ಕುಮಟಾ, ಮಂಗಳೂರು, ಶಿರಾಲಿ, ಕಾರವಾರ, ಪಣಂಬೂರು, ಲೋಂಡಾ, ಪೊನ್ನಂಪೇಟೆ, ಶೃಂಗೇರಿಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಎಚ್​ಎಎಲ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದಾದ್ಯಂತ ಕಡಿಮೆಯಾಗುತ್ತಿದೆ ಮುಂಗಾರು ಅಬ್ಬರ

ಹೊನ್ನಾವರದಲ್ಲಿ30.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.3ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 31.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 27.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ