AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಅ.1ರವರೆಗೂ ಭಾರಿ ಮಳೆ

ಕರ್ನಾಟಕದಾದ್ಯಂತ ಅಕ್ಟೋಬರ್​ ಮೊದಲ ವಾರದವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾವೇರಿ, ಗದಗದಲ್ಲಿ ಕೂಡ ಮಳೆಯಾಗಲಿದೆ.

Karnataka Weather: ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಅ.1ರವರೆಗೂ ಭಾರಿ ಮಳೆ
ಮಳೆ Image Credit source: PTI
ನಯನಾ ರಾಜೀವ್
|

Updated on: Sep 25, 2025 | 7:20 AM

Share

ಬೆಂಗಳೂರು, ಸೆಪ್ಟೆಂಬರ್ 25: ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಅಕ್ಟೋಬರ್ 1ರವರೆಗೂ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾವೇರಿ, ಗದಗದಲ್ಲಿ ಕೂಡ ಮಳೆಯಾಗಲಿದೆ.

ಕುಮಟಾ, ಗದಗ, ಅಣ್ಣಿಗೆರೆ, ಔರಾದ್, ಉಡುಪಿ, ಗೋಕರ್ಣ, ಹಗರಿಬೊಮ್ಮನಹಳ್ಳಿ, ಕುಂದಾಪುರ, ಪರಶುರಾಂಪುರ, ಅಂಕೋಲಾ, ಬಾದಾಮಿ, ಕ್ಯಾಸಲ್​​ರಾಕ್, ಚಿಂಚೋಳಿ, ಚಿತ್ರದುರ್ಗ, ಧಾರವಾಡ, ಗೇರುಸೊಪ್ಪ, ಕಳಸ, ಕಾರವಾರ, ಕೋಟಾ, ಕೊಟ್ಟಿಗೆಹಾರ, ಕೃಷ್ಣರಾಜಸಾಗರ, ಕುರ್ಡಿ, ಮಂಗಳೂರು, ಮಂಠಾಳ, ಮುಂಡಗೋಡು, ಮುನಿರಾಬಾದ್, ನಾಯಕನಹಟ್ಟಿ, ಶಿರಹಟ್ಟಿ, ಸಿದ್ದಾಪುರ, ಸಿಂದಗಿ, ಸೋಮವಾರಪೇಟೆ, ವಿಜಯಪುರದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಬೆಂಗಳೂರು ಸೇರಿ, ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಂದು ವಾರ ಮಳೆ, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಂಗಳೂರಿನಲ್ಲಿ ಬುಧವಾರ ಸಂಜೆ ಮಳೆಯಾಗಿದೆ. ಇಂದೂ ಕೂಡ ಮೋಡಕವಿದ ವಾತಾವರಣವಿದೆ. ಎಚ್​ಎಎಲ್​ನಲ್ಲಿ 27.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​​ನಲ್ಲಿ 28.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​ಪೋರ್ಟ್​​ನಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 27.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 27.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 26.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ, ಹಾವೇರಿಯಲ್ಲಿ 25.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!