Karnataka Rains: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ

ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.ಹಾಸನ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Karnataka Rains: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ
ಮಳೆ
Image Credit source: PTI

Updated on: Aug 20, 2025 | 7:25 AM

ಬೆಂಗಳೂರು, ಆಗಸ್ಟ್​ 20: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಆಗಸ್ಟ್​ 22ರವರೆಗೂ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಣೇಶ ಚತುರ್ಥಿ ಸಂದರ್ಭದಲ್ಲಿ ಮಳೆ ಕೊಂಚ ಬಿಡುವು ಕೊಡುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಹಾಸನ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಕ್ಯಾಸಲ್​ರಾಕ್, ಮಂಕಿ, ಕೊಟ್ಟಿಗೆಹಾರ, ಆಗುಂಬೆ, ಸಿದ್ದಾಪುರ, ಲೋಂಡಾ, ಕುಂದಾಪುರ, ಕೋಟಾ, ಕದ್ರಾ, ಜಯಪುರ, ನಿಪ್ಪಾಣಿ, ಕೊಪ್ಪ, ಉಡುಪಿ, ಶೃಂಗೇರಿ, ಕಿತ್ತೂರು, ಕಮ್ಮರಡಿ, ಜೋಯ್ಡಾ, ಹಳಿಯಾಳ, ಗೇರುಸೊಪ್ಪ, ಬಾಳೆಹೊನ್ನೂರಿನಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಮುಂದಿನ 2 ದಿನ ಕರ್ನಾಟಕದ ಈ ಜಿಲ್ಲೆಗಳಲ್ಲಿ ವಿಪರೀತ ಮಳೆ, ರೆಡ್ ಅಲರ್ಟ್​

ಯಲ್ಲಾಪುರ, ಶಿರಾಲಿ, ಮೂಡುಬಿದಿರೆ, ಖಾನಾಪುರ, ಕಾರವಾರ, ಕಳಸ, ಸಂಕೇಶ್ವರ, ಕುಮಟಾ, ಕಾರವಾರ, ಕಾರ್ಕಳ, ಹೊನ್ನಾವರ, ಧರ್ಮಸ್ಥಳ, ಚಿಕ್ಕೋಡಿ, ಪುತ್ತೂರು, ಕಲಘಟಗಿ, ಹುಕ್ಕೇರಿ, ಗೋಕರ್ಣ, ಚಿಟಗುಪ್ಪ, ಭಾಗಮಂಡಲ, ಬೆಳ್ತಂಗಡಿ, ಬಂಟವಾಳ, ಮಾಣಿ, ಕಿರವತ್ತಿ, ಹುಂಚದಕಟ್ಟೆಯಲ್ಲಿ ಕೂಡ ಮಳೆಯಾಗಿದೆ.

ಬೆಳಗಾವಿ, ಉಪ್ಪಿನಂಗಡಿ, ಎನ್​ಆರ್​ಪುರ, ಮುಲ್ಕಿ, ಮುದ್ದೇಬಿಹಾಳ, ಕುಂದಗೋಳ, ಮಹಾಲಿಂಗಪುರ, ತರೀಕೆರೆ, ಆನವಟ್ಟಿ, ಧಾರವಾಡ, ಸೇಡಂ, ರಾಯಚೂರು, ಶಾಹಪುರ, ಪೊನ್ನಂಪೇಟೆ, ನೆಲೋಗಿ, ಮುಂಡಗೋಡು, ಮಾನ್ವಿ, ನಲ್ವತವಾಡ, ಕೆಂಭಾವಿ, ಹುಣಸಗಿ, ಎಚ್​​ಡಿ ಕೋಟೆ, ಚಿತ್ತಾಪುರ, ಭದ್ರಾವತಿ, ಬಸವನ ಬಾಗೇವಾಡಿ, ಅಥಣಿ, ಅಣ್ಣಿಗೆರೆ, ಅರಕಲಗೋಡು, ಆಲಮಟ್ಟಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಇಂದು ಮೋಡಕವಿದ ವಾತಾವರಣವಿದ್ದರೂ, ಬಿಸಿಲೂ ಕೂಡ ಇದೆ. ಮಂಗಳವಾರ ಮಳೆಯಾಗಿಲ್ಲ. ಎಚ್​ಎಎಲ್​ನಲ್ಲಿ 24.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 24.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​​ನಲ್ಲಿ 24.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 25.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 25.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 27.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​​ಪೋರ್ಟ್​​ನಲ್ಲಿ 22.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​​ನಲ್ಲಿ 25.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 24.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 22.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 24.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 24.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 22.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us