Karnataka Rains: ಇಂದಿನಿಂದ ಕರ್ನಾಟಕದಾದ್ಯಂತ ಮುಂಗಾರು ದುರ್ಬಲ, ಅಲ್ಲಲ್ಲಿ ಸಾಧಾರಣ ಮಳೆ

ಕರ್ನಾಟಕದಾದ್ಯಂತ ಮುಂಗಾರು ದುರ್ಬಲವಾಗಿದೆ. ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ ಮಳೆಯಾಗಲಿದೆ ಎಂದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ.

Karnataka Rains: ಇಂದಿನಿಂದ ಕರ್ನಾಟಕದಾದ್ಯಂತ ಮುಂಗಾರು ದುರ್ಬಲ, ಅಲ್ಲಲ್ಲಿ ಸಾಧಾರಣ ಮಳೆ
ಮಳೆ
Image Credit source: PTI

Updated on: Jul 30, 2025 | 7:33 AM

ಬೆಂಗಳೂರು, ಜುಲೈ 30: ಕಳೆದ ಒಂದು ತಿಂಗಳಿಂದ ಸುರಿಯುತ್ತಿದ್ದ ಮಳೆ(Rain) ಇಂದಿನಿಂದ ಕೊಂಚ ಬಿಡುವು ಪಡೆಯಲಿದೆ. ಇಂದಿನಿಂದ ಕರ್ನಾಟಕದಾದ್ಯಂತ ಮುಂಗಾರು ದುರ್ಬಲವಾಗಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸ್ವಲ್ಪ ಹೆಚ್ಚಿನ ಮಳೆಯಾಗಲಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಕ್ಯಾಸಲ್​​ರಾಕ್, ಬೆಳ್ತಂಗಡಿ, ಕಮ್ಮರಡಿ, ಆಗುಂಬೆ, ಜಯಪುರ, ಶೃಂಗೇರಿ, ಬಾಳೆಹೊನ್ನೂರು, ಎನ್​​ಆರ್​ಪುರ, ಭಾಗಮಂಡಲ, ಸಿದ್ದಾಪುರ, ಜೋಯ್ಡಾ, ಕುಂದಾಪುರ, ಧರ್ಮಸ್ಥಳ, ಉಪ್ಪಿನಂಗಡಿ, ಕದ್ರಾ, ಮೂಡುಬಿದಿರೆ, ಖಾನಾಪುರ, ಕೋಟಾ, ಗೇರುಸೊಪ್ಪ, ಸುಳ್ಯ, ಕಾರ್ಕಳ, ಬಂಟವಾಳ, ಮಾಣಿ, ಹೊನ್ನಾವರ, ಸೋಮವಾರಪೇಟೆ, ಕುಶಾಲನಗರ, ಕಳಸ, ನಾಪೋಕ್ಲು, ಅಜ್ಜಂಪುರ, ಕೊಟ್ಟಿಗೆಹಾರ, ಬಂಡೀಪುರ, ತ್ಯಾಗರ್ತಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ. ಎಚ್​​ಎಎಲ್​​ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​​ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ, ಶಿವಮೊಗ್ಗ, ಕೊಡಗು ಸೇರಿ 7 ಜಿಲ್ಲೆಗಳಲ್ಲಿ ವರುಣನ ಆರ್ಭಟ, ಆ.3ರವರೆಗೆ ಮಳೆ

ಬೆಳಗಾವಿ ಏರ್​​ಪೋರ್ಟ್​​ನಲ್ಲಿ 25.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us