Karnataka Weather: ಬೆಂಗಳೂರು ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅ.11ರವರೆಗೂ ಮಳೆ

ಕರ್ನಾಟಕದಾದ್ಯಂತ ಅಕ್ಟೋಬರ್ 11ರವರೆಗೂ ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರದಲ್ಲಿ ಮಳೆಯಾಗಲಿದೆ.ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Karnataka Weather: ಬೆಂಗಳೂರು ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅ.11ರವರೆಗೂ ಮಳೆ
ಮಳೆ
Image Credit source: PTI

Updated on: Oct 05, 2025 | 8:00 AM

ಬೆಂಗಳೂರು, ಅಕ್ಟೋಬರ್ 05: ಈ ಬಾರಿ ಕರ್ನಾಟಕದಲ್ಲಿ ಮಳೆ(Rain) ಕಡಿಮೆಯಾಗುವ ಲಕ್ಷಣಗಳೇ ಇಲ್ಲ, ಒಂದು ದಿನ ಕಡಿಮೆ ಎನಿಸಿದರೂ ಮರುದಿನವೇ ಮತ್ತೆ ಹೆಚ್ಚಾಗುತ್ತಿದೆ. ಅಕ್ಟೋಬರ್ 11ರವರೆಗೂ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರದಲ್ಲಿ ಮಳೆಯಾಗಲಿದೆ.

ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಗೋಪಾಲನಗರ, ಎಂಎಂಹಿಲ್ಸ್​, ಭಾಗಮಂಡಲ, ಕೋಲಾರ, ಕುಂದಾಪುರ, ಮಾಗಡಿ, ಬೆಂಗಳೂರು, ಶಕ್ತಿನಗರ, ಉಡುಪಿಯಲ್ಲಿ ಮಳೆಯಾಗಿದೆ.

ಕೆಲವೆಡೆ ಮಳೆ ಬಾರದಿದ್ದರೂ ಮೋಡಕವಿದ ವಾತಾವರಣ ಮುಂದುವರೆಯಲಿದೆ. ಮೈಸೂರಿನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಬೆಳಗಾವಿ ಏರ್​ಪೋರ್ಟ್​​ನಲ್ಲಿ 18.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರು ಎಚ್​​ಎಎಲ್​ನಲ್ಲಿ30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಕರಾವಳಿಯಲ್ಲಿ ಮಳೆ, ಉಳಿದೆಡೆ ಒಣಹವೆ

ಹೊನ್ನಾವರದಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​​ನಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 32.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​ಪೋರ್​ಟ್​ನಲ್ಲಿ 28.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಚೂರಿನಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಶಕ್ತಿ ಚಂಡಮಾರುತವು ದುರ್ಬಲಗೊಳ್ಳಲಿದೆ, ಮುಂಬೈನಲ್ಲಿ ಚದುರಿದ ಮಳೆಯಾಗಲಿದೆ. ಮುಂಬೈನಲ್ಲಿ ಅಕ್ಟೋಬರ್ 8 ರವರೆಗೆ ಕೇವಲ ಮಳೆ ಅಥವಾ ತುಂತುರು ಮಳೆಯಾಗುವ ಮುನ್ಸೂಚನೆ ಇದೆ.

 

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:00 am, Sun, 5 October 25

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us