Karnataka Rains: ಇಂದಿನಿಂದ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಜೋರು, ಯೆಲ್ಲೋ ಅಲರ್ಟ್​ ಘೋಷಣೆ

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆಯ ಆರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains: ಇಂದಿನಿಂದ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಜೋರು, ಯೆಲ್ಲೋ ಅಲರ್ಟ್​ ಘೋಷಣೆ
ಮಳೆ
Image Credit source: English Jagaran

Updated on: Aug 04, 2023 | 7:22 AM

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆಯ ಆರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕ್ಯಾಸಲ್​ರಾಕ್, ಯಲ್ಲಾಪುರ, ಲೋಂಡಾ, ಕೊಲ್ಲೂರು, ಕದ್ರಾ, ಜೋಯ್ಡಾ, ಮುಂಡಗೋಡ, ಗುಂಜಿ, ಕಮ್ಮರಡಿ, ತಾಳಗುಪ್ಪ, ಸಕಲೇಶಪುರದಲ್ಲಿ ಮಳೆಯಾಗಿದೆ. ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: ಹವಾಮಾನ ವರದಿ: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್​ 3 ರಿಂದ ಮತ್ತೆ ವರುಣನ ಆರ್ಭಟ ಶುರು

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ನೈಋತ್ಯ ಮುಂಗಾರು ರಾಜ್ಯಾದ್ಯಂತ ದುರ್ಬಲವಾಗಿತ್ತು.

ಎಚ್​ಎಎಲ್​ನಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:36 am, Thu, 3 August 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us