Karnataka Rains: ಕರ್ನಾಟಕದ ಬಹುತೇಕ ಕಡೆ ಇಂದಿನಿಂದ ಮುಂಗಾರು ದುರ್ಬಲ, ಕರಾವಳಿಯಲ್ಲಿ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿಯಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದ್ದು, ಉಳಿದೆಡೆ ಮುಂಗಾರು ದುರ್ಬಲವಾಗಲಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

Karnataka Rains: ಕರ್ನಾಟಕದ ಬಹುತೇಕ ಕಡೆ ಇಂದಿನಿಂದ ಮುಂಗಾರು ದುರ್ಬಲ, ಕರಾವಳಿಯಲ್ಲಿ ಮಳೆ ಸಾಧ್ಯತೆ
ಮಳೆ
Image Credit source: PTI

Updated on: Jul 11, 2025 | 7:17 AM

ಬೆಂಗಳೂರು, ಜುಲೈ 11: ಕರ್ನಾಟಕದ ಬಹುತೇಕ ಕಡೆ ಇಂದಿನಿಂದ ಮುಂಗಾರು ದುರ್ಬಲಗೊಳ್ಳಲಿದ್ದು, ಕರಾವಳಿಯಲ್ಲಿ ಮಳೆ(Rain) ಮುಂದುವರೆಯುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ಕದ್ರಾ, ಕ್ಯಾಸಲ್​ರಾಕ್, ಶೃಂಗೇರಿ, ಆಗುಂಬೆ, ಮೂಡುಬಿದಿರೆ, ಕಾರ್ಕಳ, ಉಡುಪಿ, ಮಾಣಿ, ಧರ್ಮಸ್ಥಳ, ಕಮ್ಮರಡಿ, ಭಾಗಮಂಡಲ, ಕುಂದಾಪುರ, ಶಕ್ತಿನಗರ, ಬೆಳ್ತಂಗಡಿ, ಕೋಟಾ, ಸುಳ್ಯ, ಮಂಕಿ, ಜೋಯ್ಡಾ, ಸಿದ್ದಾಪುರ, ಬಂಟವಾಳ, ಮಂಗಳೂರು, ಕುಷ್ಟಗಿ, ಜಯಪುರ, ಸೋಮವಾರಪೇಟೆ, ಕೊಪ್ಪ, ಬಾಳೆಹೊನ್ನೂರು, ಕಳಸ, ನಾಪೋಕ್ಲು, ಲೋಂಡಾ, ಪುತ್ತೂರು, ಮುಲ್ಕಿ, ಕುಮಟಾ, ಬನವಾಸಿ, ಯಲ್ಲಾಪುರ, ಆಳಂದ, ಕೊಟ್ಟಿಗೆಹಾರ, ತ್ಯಾಗರ್ತಿ, ಎನ್​ಆರ್​ಪುರದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಗುರುವಾರ ಅಲ್ಲಲ್ಲಿ ಸಾಧಾರಣ ಮಳೆಯಾಗಿದೆ. ಎಚ್​​ಎಎಲ್​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​, ಉಳಿದೆಡೆ ಸಾಧಾರಣ ಮಳೆ

ಹೊನ್ನಾವರದಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​ಪೋರ್ಟ್​​ನಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 34.4 ಡಿಗ್ರಿ ಸೆಲ್ಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us