Karnataka Rains: ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಇಂದಿನಿಂದ ಕಡಿಮೆಯಾಗಲಿದೆ ಮಳೆಯ ಪ್ರಮಾಣ

ಕರ್ನಾಟಕದಾದ್ಯಂತ ಕಳೆದ ಎರಡು ವಾರಗಳಿಂದ ಅನಾಹುತಗಳ ಸೃಷ್ಟಿಸುತ್ತಿದ್ದ ಮಳೆಯ ಆರ್ಭಟ ಭಾನುವಾರದಿಂದ ಸ್ವಲ್ಪ ಕಡಿಮೆಯಾಗಿದೆ. ಉತ್ತರ ಕನ್ನಡಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains: ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಇಂದಿನಿಂದ ಕಡಿಮೆಯಾಗಲಿದೆ ಮಳೆಯ ಪ್ರಮಾಣ
ಮಳೆ
Follow us
ನಯನಾ ರಾಜೀವ್
|

Updated on:Jul 29, 2024 | 7:42 AM

ಕರ್ನಾಟಕದಲ್ಲಿ ಕಳೆದ ಎರಡು ವಾರಗಳಿಂದ ಭಾರಿ ಮಳೆಯಾಗುತ್ತಿದ್ದು, ಇಂದಿನಿಂದ ಮಳೆ ಕೊಂಚ ಬಿಡುವು ಪಡೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಕ್ಯಾಸಲ್​ರಾಕ್, ಲೋಂಡಾ, ಕದ್ರಾ, ಯಲ್ಲಾಪುರ, ಸಿದ್ದಾಪುರ, ಬೆಳಗಾವಿ, ಕಮ್ಮರಡಿ, ಗೇರುಸೊಪ್ಪ, ಕಾರವಾರ, ಬನವಾಸಿ, ಗೋಕರ್ಣ, ಧರ್ಮಸ್ಥಳ, ಹಳಿಯಾಳ, ಬೆಳ್ತಂಗಡಿ, ಉಪ್ಪಿನಂಗಡಿ, ಔರಾದ್, ಶೃಂಗೇರಿ, ಸೋಮವಾರಪೇಟೆ, ಲಿಂಗನಮಕ್ಕಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್​ಎಎಲ್​ನಲ್ಲಿ 28.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ. ನಗರದಲ್ಲಿ 28.3ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಮೂರು ದಿನ ಭಾರಿ ಮಳೆ

ಹೊನ್ನಾವರದಲ್ಲಿ 29.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 26.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 26.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:41 am, Mon, 29 July 24

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ