AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಶಿವಮೊಗ್ಗ, ಹಾಸನ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ಮಳೆ ಜೋರು

ಕರ್ನಾಟಕದ ಬಹುತೇಕ ಕಡೆಗಳಲ್ಲಿ ಮಳೆಯಾಗುತ್ತಿದೆ, ಇಂದಿನಿಂದ ಜೂನ್​ 10ರವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains: ಶಿವಮೊಗ್ಗ, ಹಾಸನ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ಮಳೆ ಜೋರು
ಮಳೆImage Credit source: Scroll.in
ನಯನಾ ರಾಜೀವ್
|

Updated on: Jun 06, 2024 | 7:30 AM

Share

ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಿದ್ದು ಕೆಲವೆಡೆ ಉತ್ತಮ ಮಳೆಯಾಗುತ್ತಿದೆ. ಜೂನ್​ 6ರಿಂದ 10ರವರೆಗೆ ಹಲವು ಜಿಲ್ಲೆಗಳಲ್ಲಿ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ.

ಇನ್ನುಳಿದಂತೆ ವಿಜಯನಗರ, ತುಮಕೂರು,ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ, ಯಾದಗಿರಿ, ಹಾವೇರಿ, ಧಾರವಾಡ, ಬೀದರ್​ನಲ್ಲಿ ಕೂಡ ಮಳೆಯಾಗಲಿದೆ.

ಕಮಲಾಪುರ, ಸೇಡಬಾಳ, ಶಿರಹಟ್ಟಿ, ದೊಡ್ಡಬಳ್ಳಾಪುರ, ಚಿಕ್ಕೋಡಿ, ಕಲಬುರಗಿ, ಮಹಾಗೋವಾ, ಚಿಂತಾಮಣಿ, ಕೋಲಾರ, ಲಕ್ಷ್ಮೇಶ್ವರ, ರಬಕವಿ, ಸಂಕೇಶ್ವರ, ಶಿಗ್ಗಾಂವ್, ಹುಕ್ಕೇರಿ, ಭಾಲ್ಕಿ, ಅಫಜಲ್​ಪುರ, ಹುಕ್ಕೇರಿ, ಮಹಾಲಿಂಗಪುರ, ಬಾಗಲಕೋಟೆ, ಆಗುಂಬೆ, ಹೊನಕೆರೆ, ಹೊಸಕೋಟೆ, ಗೌರಿಬಿಸನೂರಿನಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಜೂನ್​ 9ರವರೆಗೆ ಮಳೆ

ಕಲಬುರಗಿಯಲ್ಲಿ 37.4 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಬುಧವಾರ ಸಂಜೆ ಮಳೆಯಾಗಿದೆ. ಇಂದು ಕೂಡ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆ ಮಳೆಯಾಗುವ ನಿರೀಕ್ಷೆ ಇದೆ.

ಎಚ್​ಎಎಲ್​ನಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 31.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 35.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 35.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 34.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 37.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು!
ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು!
ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​