AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರವರೆಗೆ ಧಾರಾಕಾರ ಮಳೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರವರೆಗೂ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ಬನವಾಸಿ, ಥೋಂಡೇಬಾವಿ, ನಲ್ವತವಾಡ, ಎನ್​​ಆರ್​ಪುರ,ಕಾರವಾರ, ಹೊಸಪೇಟೆ, ಹೊನ್ನಾಳಿ, ಗುಳೇಗೋಡು, ಭದ್ರಾವತಿ, ಚಿತ್ರದುರ್ಗ, ಯಡ್ರಾಮಿ, ತರೀಕೆರೆ, ಸಂಡೂರು, ಮುದಗಲ್​​ನಲ್ಲಿ ಮಳೆಯಾಗಿದೆ.

Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರವರೆಗೆ ಧಾರಾಕಾರ ಮಳೆ
ಮಳೆ Image Credit source: PTI
ನಯನಾ ರಾಜೀವ್
|

Updated on: Aug 30, 2025 | 7:27 AM

Share

ಬೆಂಗಳೂರು, ಆಗಸ್ಟ್​ 30: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರವರೆಗೂ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಬೀದರ್ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ. ಈ ಬಾರಿ ಮುಂಗಾರು ಆರಂಭವಾದಾಗಿನಿಂದ ಕರ್ನಾಟಕದಾದ್ಯಂತ ಮಳೆ ಚೆನ್ನಾಗಿ ಬಂದಿದೆ. ಮಧ್ಯೆ ಮಧ್ಯೆ ಒಂದೆರಡು ದಿನ ಬಿಡುವು ಕೊಟ್ಟರೂ ಉತ್ತಮ ಮಳೆಯಾಗಿದೆ.

ಎಲ್ಲೆಲ್ಲಿ ಮಳೆಯಾಗಿದೆ? ಮಂಕಿ, ಮುಲ್ಕಿ, ಶಕ್ತಿನಗರ, ಮಂಗಳೂರು, ಸುಳ್ಯ, ಉಡುಪಿ, ಸಿದ್ದಾಪುರ, ಮಾಣಿ, ಕೊಟ್ಟಿಗೆಹಾರ, ಭಾಗಮಂಡಲ, ಹೊನ್ನಾವರ, ಆಗುಂಬೆ, ಉಪ್ಪಿನಂಗಡಿ, ಮಂಗಳೂರು, ಕುಂದಾಪುರ, ಕಾರ್ಕಳ, ಗೇರುಸೊಪ್ಪ, ಬೆಳ್ತಂಗಡಿ, ಔರಾದ್, ಪುತ್ತೂರು, ನಾಪೋಕ್ಲು, ಮೂಡುಬಿದಿರೆ, ಕಳಸ, ಪೊನ್ನಂಪೇಟೆ, ಕುಮಟಾ, ಕೋಟಾ, ಗೋಕರ್ಣ, ಧರ್ಮಸ್ಥಳದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿಗೆ ರೆಡ್ ಅಲರ್ಟ್​, ಉತ್ತರ, ದಕ್ಷಿಣ ಒಳನಾಡಿನಲ್ಲೂ ಭಾರಿ ಮಳೆ

ಶೃಂಗೇರಿ, ಸೈದಾಪುರ, ಕಿಬ್ಬನಹಳ್ಳಿ, ಕಮ್ಮರಡಿ, ಜಯಪುರ, ಕ್ಯಾಸಲ್​​ರಾಕ್, ಬಾಳೆಹೊನ್ನೂರು, ಕೊಪ್ಪ, ಹುಂಚದಕಟ್ಟೆ, ಭಾಲ್ಕಿ, ಅಂಕೋಲಾ, ಅಫ್ಜಲ್​​ಪುರ, ಮಂಠಾಳ, ಕದ್ರಾ, ಮಿಡಿಗೇಶಿ, ಕದ್ರಾ, ಹಾರಂಗಿ, ಗಂಗಾಪುರ, ಭರಮಸಾಗರ, ಬನವಾಸಿ, ಥೋಂಡೇಬಾವಿ, ನಲ್ವತವಾಡ, ಎನ್​​ಆರ್​ಪುರ,ಕಾರವಾರ, ಹೊಸಪೇಟೆ, ಹೊನ್ನಾಳಿ, ಗುಳೇಗೋಡು, ಭದ್ರಾವತಿ, ಚಿತ್ರದುರ್ಗ, ಯಡ್ರಾಮಿ, ತರೀಕೆರೆ, ಸಂಡೂರು, ಮುದಗಲ್​​ನಲ್ಲಿ ಮಳೆಯಾಗಿದೆ.

ಮಾಗಡಿ. ಕೂಡಲಸಂಗಮ, ಕೊಟ್ಟೂರು, ಹುಣಸೂರು, ಹುನಗುಂದ, ಇಳಕಲ್, ಹೊಳಲ್ಕೆರೆ, ಹಗರಿಬೊಮ್ಮನಹಳ್ಳಿ, ಎಚ್​​ಡಿ ಕೋಟೆ, ಗದಗ, ಗೋಪಾಲ್​ನಗರ, ಚಿಂತಾಮಣಿ, ಬಾದಾಮಿ, ಅಣ್ಣಿಗೆರೆ, ಆಳಂದದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್​​ಎಎಲ್​​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​​ನಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 25.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 26.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​​ಪೋರ್ಟ್​​ನಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 23.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 21.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?