AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ 11ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಸೆ.2ರವರೆಗೆ ಭಾರಿ ಮಳೆ, ಆರೆಂಜ್​, ಯೆಲ್ಲೋ ಅಲರ್ಟ್​

ಕರ್ನಾಟಕದ ಕರಾವಳಿಯಲ್ಲಿ ಮತ್ತೆ ಮಳೆ ಶುರುವಾಗಿದೆ, ಸೆಪ್ಟೆಂಬರ್ 2ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಹಾಸನ, ವಿಜಯಪುರ, ಯಾದಗಿರಿ, ಕಲಬುರಗಿ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರ್ನಾಟಕದ 11ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಸೆ.2ರವರೆಗೆ ಭಾರಿ ಮಳೆ, ಆರೆಂಜ್​, ಯೆಲ್ಲೋ ಅಲರ್ಟ್​
ಮಳೆ
ನಯನಾ ರಾಜೀವ್
|

Updated on: Aug 27, 2024 | 7:35 AM

Share

ಕರ್ನಾಟಕದಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್ 2ರವರೆಗೂ ಮಳೆ ಮುಂದುವರೆಯಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಹಾಸನ, ವಿಜಯಪುರ, ಯಾದಗಿರಿ, ಕಲಬುರಗಿ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೀದರ್, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ಮಳೆಯಾಗಲಿದೆ.

ಕದ್ರಾ, ಕ್ಯಾಸಲ್​ರಾಕ್, ಲೋಂಡಾ, ಭಾಗಮಂಡಲ, ಯಲ್ಲಾಪುರ, ಹುಂಚದಕಟ್ಟೆ, ಮೂಡಿಗೆರೆ, ಸಿದ್ದಾಪುರ, ಗೇರುಸೊಪ್ಪ, ಬೆಳಗಾವಿ, ಅಂಕೋಲಾ, ಧರ್ಮಸ್ಥಳ, ಮಂಕಿ, ನಿಪ್ಪಾಣಿ, ಕಮ್ಮರಡಿ, ಆಗುಂಬೆ, ಲಿಂಗನಮಕ್ಕಿ, ಕುಮಟಾ, ಬೆಳ್ತಂಗಡಿ, ಮಾಣಿ, ಜೋಯಿಡಾ, ಕಿರವತ್ತಿ, ಸುಳ್ಯ, ಸಂಕೇಶ್ವರ, ಹೊನ್ನಾವರ, ಬನವಾಸಿ, ಗೋಕರ್ಣ, ಹಳಿಯಾಳ, ಚಿಕ್ಕೋಡಿ, ಸೇಡಬಾಳ, ಕಳಸ, ಕೊಪ್ಪ, ಭದ್ರಾವತಿ, ಶೃಂಗೇರಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಭಾರಿ ಮಳೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಎಚ್​ಎಎಲ್​ನಲ್ಲಿ 28.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 28.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 29.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 27.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 27.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?