Karnataka Rains: ಬೆಂಗಳೂರಿನಲ್ಲಿ ಆ.19ರವರೆಗೂ ಮಳೆ, 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕರ್ನಾಟಕದಾದ್ಯಂತ ಒಂದು ವಾರ ಭಾರಿ ಮಳೆಯಾಗುವ ನಿರೀಕ್ಷೆ ಇದೆ. 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ಶೀವಮೊಗ್ಗ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಳಕಲ್, ಗಂಗಾವತಿ, ಗಬ್ಬೂರು, ತಾವರಗೇರಾ, ಸಿದ್ದಾಪುರ, ಶೋರಾಪುರ, ಸೈದಾಪುರ, ಕಿಬ್ಬನಹಳ್ಳಿ, ಕದ್ರಾ, ಹುನಗುಂದ, ಗುಬ್ಬಿ, ದಾವಣಗೆರೆ, ಭದ್ರಾವತಿ, ಆಳಂದ, ಶಿರಾಲಿ, ಶಕ್ತಿನಗರ, ಮಂಕಿ, ಕುಮಟಾ, ಜೇವರ್ಗಿ, ಗುಳೇಗೋಡು, ಗೋಕರ್ಣ, ಗಂಗಾಪುರ, ಚಿತ್ತಾಪುರ, ಚಿಟಗುಪ್ಪದಲ್ಲಿ ಮಳೆಯಾಗಿದೆ.

ಬೆಂಗಳೂರು, ಆಗಸ್ಟ್ 13: ಬೆಂಗಳೂರು ಸೇರಿದಂತೆ ಕರ್ನಾಟಕದ ಸಾಕಷ್ಟು ಕಡೆಗಳಲ್ಲಿ ಒಂದು ವಾರಗಳ ಕಾಲ ಭಾರಿ ಮಳೆ(Rain)ಯಾಗಲಿದೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ 19ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 19ರಿಂದ ಕರಾವಳಿಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ.
ವಿಜಯನಗರ, ಶೀವಮೊಗ್ಗ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಳಕಲ್, ಗಂಗಾವತಿ, ಗಬ್ಬೂರು, ತಾವರಗೇರಾ, ಸಿದ್ದಾಪುರ, ಶೋರಾಪುರ, ಸೈದಾಪುರ, ಕಿಬ್ಬನಹಳ್ಳಿ, ಕದ್ರಾ, ಹುನಗುಂದ, ಗುಬ್ಬಿ, ದಾವಣಗೆರೆ, ಭದ್ರಾವತಿ, ಆಳಂದ, ಶಿರಾಲಿ, ಶಕ್ತಿನಗರ, ಮಂಕಿ, ಕುಮಟಾ, ಜೇವರ್ಗಿ, ಗುಳೇಗೋಡು, ಗೋಕರ್ಣ, ಗಂಗಾಪುರ, ಚಿತ್ತಾಪುರ, ಚಿಟಗುಪ್ಪದಲ್ಲಿ ಮಳೆಯಾಗಿದೆ.
ಮತ್ತಷ್ಟು ಓದಿ: Karnataka Rains: ಬೆಂಗಳೂರು ಸೇರಿ ಕರ್ನಾಟಕದ 17 ಜಿಲ್ಲೆಗಳಲ್ಲಿ ಆಗಸ್ಟ್ 17ರವರೆಗೂ ಭಾರಿ ಮಳೆ
ಚಿಂಚೋಳಿ, ಕ್ಯಾಸಲ್ರಾಕ್, ಬೀದರ್, ಭಾಲ್ಕಿ, ಬರಗೂರು, ಆಗುಂಬೆ, ಯಲಬುರ್ಗಾ, ಉಡುಪಿ, ಶೃಂಗೇರಿ, ಸಿರಾ, ಸಿಂಧನೂರು, ಸಿಂದಗಿ, ನೆಲೋಗಿ, ಮುನಿರಾಬಾದ್, ಮಂಠಾಳ, ಮಾಣಿ, ಕುಷ್ಟಗಿ, ಕುಂದಾಪುರ, ಕೊಟ್ಟಿಗೆಹಾರ, ಕಲಬುರಗಿ, ಕಮ್ಮರಡಿ, ಹೊನ್ನಾವರ, ಗೇರುಸೊಪ್ಪ, ಧರ್ಮಸ್ಥಳ, ಬೆಳ್ತಂಗಡಿ, ಬನವಾಸಿ, ಅಂಕೋಲಾ, ಅಫ್ಝಲ್ಪುರದಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ನಿತ್ಯವೂ ಮಳೆಯಾಗುತ್ತಿದೆ, ಇಂದು ಕೂಡ ಮೋಡಕವಿದ ವಾತಾವರಣವಿದ್ದು, ಬೆಳಗ್ಗೆಯಿಂದಲೇ ತುಂತುರು ಮಳೆ ಶುರುವಾಗಿದೆ. ಗಾಳಿಯು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಚಲಿಸುತ್ತಿದೆ. ಎಚ್ಎಎಲ್ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 23.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 27.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿ ಏರ್ಪೋರ್ಟ್ನಲ್ಲಿ 28.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:24 am, Wed, 13 August 25




