Karnataka Rains: ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಸೆ.7ರವರೆಗೆ ಮಳೆ

ಕರ್ನಾಟಕದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಬಳ್ಳಾಪುರದಲ್ಲಿ ಮಳೆಯಾಗಲಿದೆ. ಸೇಡಂ, ಕಲಬುರಗಿ, ಕಮಲಾಪುರ, ಚಿತ್ತಾಪುರ, ಪಣಂಬೂರು, ಚಿಂಚೋಳಿ, ಜೇವರ್ಗಿ, ಬೀದರ್, ಗೇರುಸೊಪ್ಪ, ಬೀದರ್, ಸೈದಾಪುರ, ಚಿಟಗುಪ್ಪ, ಔರಾದ್, ಆಗುಂಬೆ, ಲಿಂಗನಮಕ್ಕಿ, ಶಿರಾಲಿ, ಸುಳ್ಯ, ಸಿದ್ದಾಪುರ, ಮಂಠಾಳದಲ್ಲಿ ಮಳೆಯಾಗಿದೆ.

Karnataka Rains: ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಸೆ.7ರವರೆಗೆ ಮಳೆ
ಮಳೆ
Image Credit source: Jagaranjosh.com

Updated on: Sep 02, 2024 | 7:34 AM

ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸುರಿಯಲಿದೆ.

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಬಳ್ಳಾಪುರದಲ್ಲಿ ಮಳೆಯಾಗಲಿದೆ.

ಸೇಡಂ, ಕಲಬುರಗಿ, ಕಮಲಾಪುರ, ಚಿತ್ತಾಪುರ, ಪಣಂಬೂರು, ಚಿಂಚೋಳಿ, ಜೇವರ್ಗಿ, ಬೀದರ್, ಗೇರುಸೊಪ್ಪ, ಬೀದರ್, ಸೈದಾಪುರ, ಚಿಟಗುಪ್ಪ, ಔರಾದ್, ಆಗುಂಬೆ, ಲಿಂಗನಮಕ್ಕಿ, ಶಿರಾಲಿ, ಸುಳ್ಯ, ಸಿದ್ದಾಪುರ, ಮಂಠಾಳದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರಗಳ ಕಾಲ ಭಾರಿ ಮಳೆ

ಸಿದ್ದಾಪುರ, ಖಜೂರಿ, ಹುಮನಾಬಾದ್, ಉಪ್ಪಿನಂಗಡಿ, ನಾಪೋಕ್ಲು, ರಾಯಚೂರು, ಉಡುಪಿ, ಗೋಕರ್ಣ, ಕುಂದಾಪುರ, ಕೋಟ, ಬೆಳ್ತಂಗಡಿ, ದೇವದುರ್ಗ, ಸೇಡಬಾಳ, ಮುದ್ದೇಬಿಹಾಳ, ಇಳಕಲ್, ಹುಂಚದಕಟ್ಟೆ, ತಿಪಟೂರು, ಕೊಪ್ಪ, ಕಮ್ಮರಡಿ, ಯುಗಟಿ, ಬರಗೂರಿನಲ್ಲಿ ಮಳೆಯಾಗಿದೆ.

ಎಚ್​ಎಎಲ್​ನಲ್ಲಿ 26.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 25.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 26.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 19.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 27.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 25.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 27.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 26.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 26.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us