Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.12ರಿಂದ ಭಾರಿ ಮಳೆ, ಆರೆಂಜ್ ಅಲರ್ಟ್​

ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಮಳೆ ಅನಾಹುತ ಸೃಷ್ಟಿಸಿತ್ತು. ಆದರೆ ಮುಂಗಾರು ಆರಂಭವಾದ ಬಳಿಕ ಕ್ಷೀಣಿಸಿತ್ತು. ಇದೀಗ ಜೂನ್ 12ರಿಂದ ಮುಂಗಾರು ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಧಾರವಾಡ,ವಿಜಯಪುರ, ಚಿಕ್ಕಬಳ್ಳಾಪುರ,ದಾವಣಗೆರೆ, ಕೊಡಗು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೀದರ್, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.12ರಿಂದ ಭಾರಿ ಮಳೆ, ಆರೆಂಜ್ ಅಲರ್ಟ್​
ಮಳೆ
Image Credit source: PTI

Updated on: Jun 08, 2025 | 7:26 AM

ಬೆಂಗಳೂರು, ಜೂನ್ 08: ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.12ರಿಂದ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಳಗಾವಿ, ಧಾರವಾಡ,ವಿಜಯಪುರ, ಚಿಕ್ಕಬಳ್ಳಾಪುರ,ದಾವಣಗೆರೆ, ಕೊಡಗು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೀದರ್, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕ್ಯಾಸಲ್​​ರಾಕ್,ಯಲಬುರ್ಗಾ, ಬೀದರ್, ವಿಜಯಪುರದಲ್ಲಿ ಮಳೆಯಾಗಿದೆ.ಎಚ್​​ಎಎಲ್​ನಲ್ಲಿ 30.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ
ಅಂಧರು ಬಟನ್ ಪ್ರೆಸ್ ಮಾಡಿದ್ರೆ ಸಾಕು, ಇದ್ದಲ್ಲಿಗೆ ಬರುತ್ತೆ ಬಿಎಂಟಿಸಿ ಬಸ್
ಮಲ್ಲಸಂದ್ರ ಬಳಿ ಚಿರತೆ ಪ್ರತ್ಯಕ್ಷ: ಭಯಭೀತರಾದ ಜನ, ಕ್ಯಾಮರಾ ಅಳವಡಿಕೆ
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ ಐದು ದಿನ ಮಳೆ
ವಿದ್ಯಾರ್ಥಿಗಳು KSRTC ಬಸ್ ಪಾಸ್ ವಿತರಣೆ ಆರಂಭ: ಅರ್ಜಿ ಸಲ್ಲಿಕೆ ಹೇಗೆ?

ಹೊನ್ನಾವರದಲ್ಲಿ 32.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,24.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದಾದ್ಯಂತ ಒಣಹವೆ, ಕೆಲವೇ ಕೆಲವು ಕಡೆ ಮಳೆ, ಜೂನ್ 10ರ ಬಳಿಕ ಮಳೆ ಹೆಚ್ಚಳ

ಬೆಳಗಾವಿಯಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಹಾವೇರಿಯಲ್ಲಿ32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us