AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಮೇ 29ರವರೆಗೆ ಕರ್ನಾಟಕದ 8ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​

ಕರ್ನಾಟಕದಲ್ಲಿ ಮುಂದಿನ ಒಂದು ವಾರದವರೆಗೆ ಮಳೆ ಮುಂದುವರೆಯಲಿದೆ, 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮೇ 31ಕ್ಕೆ ನೈಋತ್ಯ ಮುಂಗಾರು ಕೇರಳ ಪ್ರವೇಶಿಸಲಿದ್ದು ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Karnataka Rains: ಮೇ 29ರವರೆಗೆ ಕರ್ನಾಟಕದ 8ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​
ಮಳೆImage Credit source: Deccan Herald
ನಯನಾ ರಾಜೀವ್
|

Updated on: May 23, 2024 | 7:34 AM

Share

ಮುಂದಿನ 6 ದಿನಗಳ ಕಾಲ ಕರ್ನಾಟಕದ 8ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಅದೆಲ್ಲವನ್ನು ಹೊರತುಪಡಿಸಿ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಬೆಂಗಳೂರು, ಧರ್ಮಸ್ಥಳ, ಸುಳ್ಯ, ಶಿರಾಲಿ, ಹುಂಚದಕಟ್ಟೆ, ಬಂಡೀಪುರ, ಚಾಮರಾಜನಗರ, ಗೇರುಸೊಪ್ಪ, ಹಾರಂಗಿ, ತಾಳಗುಪ್ಪ, ಭಾಗಮಂಡಲ, ಮಾಗಡಿ, ಕುಣಿಗಲ್, ತುಮಕೂರು, ಗೋಕರ್ಣ, ಕೃಷ್ಣರಾಜಪೇಟೆ, ಪುತ್ತೂರು, ಕುಮಟಾ, ಕದ್ರಾ, ಯಲ್ಲಾಪುರ, ಮಾಣಿಯಲ್ಲಿ ಮಳೆಯಾಗಿದೆ.

ಬನವಾಸಿ, ಗುಂಡ್ಲುಪೇಟೆ, ಕೋಟ, ಮಂಗಳೂರು, ರಾಣೆಬೆನ್ನೂರು, ಸಿರಗುಪ್ಪ, ಹೆಬ್ಬೂರು, ಕಡೂರು, ಹೆಬ್ಬೂರಿನಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 40.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಬೆಳಗ್ಗೆ ಬಿಸಿಲಿರಲಿದ್ದು ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Rains: ಕೊಡಗು, ಬೆಂಗಳೂರು, ಕರಾವಳಿ ಜಿಲ್ಲೆಗಳಲ್ಲಿ ಮೇ 28ರವರೆಗೂ ಮಳೆ

ಎಚ್​ಎಎಲ್​ನಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 34.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 36.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಗದಗದಲ್ಲಿ 34.6 – ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿಕ್ಕಮಗಳೂರಿನಲ್ಲಿ 26.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 31.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?