Karnataka Rains: ಮೇ 29ರವರೆಗೆ ಕರ್ನಾಟಕದ 8ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​

ಕರ್ನಾಟಕದಲ್ಲಿ ಮುಂದಿನ ಒಂದು ವಾರದವರೆಗೆ ಮಳೆ ಮುಂದುವರೆಯಲಿದೆ, 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮೇ 31ಕ್ಕೆ ನೈಋತ್ಯ ಮುಂಗಾರು ಕೇರಳ ಪ್ರವೇಶಿಸಲಿದ್ದು ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Karnataka Rains: ಮೇ 29ರವರೆಗೆ ಕರ್ನಾಟಕದ 8ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​
ಮಳೆ
Image Credit source: Deccan Herald

Updated on: May 23, 2024 | 7:34 AM

ಮುಂದಿನ 6 ದಿನಗಳ ಕಾಲ ಕರ್ನಾಟಕದ 8ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.
ಅದೆಲ್ಲವನ್ನು ಹೊರತುಪಡಿಸಿ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಬೆಂಗಳೂರು, ಧರ್ಮಸ್ಥಳ, ಸುಳ್ಯ, ಶಿರಾಲಿ, ಹುಂಚದಕಟ್ಟೆ, ಬಂಡೀಪುರ, ಚಾಮರಾಜನಗರ, ಗೇರುಸೊಪ್ಪ, ಹಾರಂಗಿ, ತಾಳಗುಪ್ಪ, ಭಾಗಮಂಡಲ, ಮಾಗಡಿ, ಕುಣಿಗಲ್, ತುಮಕೂರು, ಗೋಕರ್ಣ, ಕೃಷ್ಣರಾಜಪೇಟೆ, ಪುತ್ತೂರು, ಕುಮಟಾ, ಕದ್ರಾ, ಯಲ್ಲಾಪುರ, ಮಾಣಿಯಲ್ಲಿ ಮಳೆಯಾಗಿದೆ.

ಬನವಾಸಿ, ಗುಂಡ್ಲುಪೇಟೆ, ಕೋಟ, ಮಂಗಳೂರು, ರಾಣೆಬೆನ್ನೂರು, ಸಿರಗುಪ್ಪ, ಹೆಬ್ಬೂರು, ಕಡೂರು, ಹೆಬ್ಬೂರಿನಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 40.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಬೆಳಗ್ಗೆ ಬಿಸಿಲಿರಲಿದ್ದು ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Rains: ಕೊಡಗು, ಬೆಂಗಳೂರು, ಕರಾವಳಿ ಜಿಲ್ಲೆಗಳಲ್ಲಿ ಮೇ 28ರವರೆಗೂ ಮಳೆ

ಎಚ್​ಎಎಲ್​ನಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 34.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 36.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಗದಗದಲ್ಲಿ 34.6 – ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿಕ್ಕಮಗಳೂರಿನಲ್ಲಿ 26.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 31.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us