AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದಲ್ಲಿ ಇಂದಿನಿಂದ ಕಡಿಮೆಯಾಗಲಿದೆ ಮಳೆ ಅಬ್ಬರ

ಕರ್ನಾಟಕದಾದ್ಯಂತ ಮುಂಗಾರು ಇಂದಿನಿಂದ ಕೊಂಚ ಬಿಡುವು ಪಡೆಯಲಿದೆ, ಕರಾವಳಿಯಲ್ಲಿ ಮಳೆ ಹೆಚ್ಚಿದ್ದರೂ ಉಳಿದ ಜಿಲ್ಲೆಗಳಲ್ಲಿ ಕಡಿಮೆಯಾಗಲಿದೆ. ಜೂನ್ 25ರವರೆಗೆ ಸಾಧಾರಣ ಮಳೆ ಮುಂದುವರೆಯಲಿದೆ. ಉಪ್ಪಿನಂಗಡಿ, ಮೂಡುಬಿದಿರೆ, ಕ್ಯಾಸಲ್​​ರಾಕ್, ಕೊಟ್ಟಿಗೆಹಾರ, ಭಾಗಮಂಡಲ, ಕಾರ್ಕಳ, ಬೆಳ್ತಂಗಡಿ, ಲೋಂಡಾ, ಧರ್ಮಸ್ಥಳ, ಕಾರ್ಕಳ, ಕಳಸ, ಸುಳ್ಯ, ಕಮ್ಮರಡಿ, ಶೃಂಗೇರಿ, ನಾಪೋಕ್ಲು, ಬಂಟವಾಳ, ಸಿದ್ದಾಪುರ, ಪುತ್ತೂರು,ಮಾಣಿ, ಗೇರುಸೊಪ್ಪ, ಶಕ್ತಿನಗರ, ಮುಲ್ಕಿ, ಜಯಪುರ, ಸೋಮವಾರಪೇಟೆ, ಎನ್​ಆರ್​ಪುರ, ಭದ್ರಾವತಿ, ಅಂಕೋಲಾ, ಯಲ್ಲಾಪುರ, ಕುಮಟಾ, ಹಾರಂಗಿ, ಮಂಕಿ, ತರಿಕೆರೆ, ಅರಕಲಗೂಡು, ಹೊನ್ನಾಳಿ, ಶಿವಮೊಗ್ಗ, ಹಾವೇರಿ, ಬೆಳಗಾವಿಯಲ್ಲಿ ಮಳೆಯಾಗಿದೆ.

Karnataka Rains:  ಕರ್ನಾಟಕದಲ್ಲಿ ಇಂದಿನಿಂದ ಕಡಿಮೆಯಾಗಲಿದೆ ಮಳೆ ಅಬ್ಬರ
ಮಳೆ Image Credit source: PTI
ನಯನಾ ರಾಜೀವ್
|

Updated on: Jun 19, 2025 | 7:30 AM

Share

ಬೆಂಗಳೂರು, ಜೂನ್ 19: ಇಂದಿನಿಂದ ಕರ್ನಾಟಕದಾದ್ಯಂತ ಮಳೆ(Rain)ಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಜೂನ್ 25ರವರೆಗೆ ಸಾಧಾರಣ ಮಳೆಯಾಗಲಿದೆ.

ಉಪ್ಪಿನಂಗಡಿ, ಮೂಡುಬಿದಿರೆ, ಕ್ಯಾಸಲ್​​ರಾಕ್, ಕೊಟ್ಟಿಗೆಹಾರ, ಭಾಗಮಂಡಲ, ಕಾರ್ಕಳ, ಬೆಳ್ತಂಗಡಿ, ಲೋಂಡಾ, ಧರ್ಮಸ್ಥಳ, ಕಾರ್ಕಳ, ಕಳಸ, ಸುಳ್ಯ, ಕಮ್ಮರಡಿ, ಶೃಂಗೇರಿ, ನಾಪೋಕ್ಲು, ಬಂಟವಾಳ, ಸಿದ್ದಾಪುರ, ಪುತ್ತೂರು,ಮಾಣಿ, ಗೇರುಸೊಪ್ಪ, ಶಕ್ತಿನಗರ, ಮುಲ್ಕಿ, ಜಯಪುರ, ಸೋಮವಾರಪೇಟೆ, ಎನ್​ಆರ್​ಪುರ, ಭದ್ರಾವತಿ, ಅಂಕೋಲಾ, ಯಲ್ಲಾಪುರ, ಕುಮಟಾ, ಹಾರಂಗಿ, ಮಂಕಿ, ತರಿಕೆರೆ, ಅರಕಲಗೂಡು, ಹೊನ್ನಾಳಿ, ಶಿವಮೊಗ್ಗ, ಹಾವೇರಿ, ಬೆಳಗಾವಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಬುಧವಾರ ಕೆಲವೆಡೆ ಮಳೆಯಾಗಿದ್ದು, ಗುರುವಾರ ಮೋಡಕವಿದ ವಾತಾವರಣವಿದ್ದರೂ ಸ್ವಲ್ಪ ಬಿಸಿಲು ಕೂಡ ಇದೆ. ಎಚ್​​ಎಎಲ್​ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 27.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 27.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿಯಲ್ಲಿ ಮಳೆ ಜೋರು, ಉಳಿದೆಡೆ ಸಾಧಾರಣ ಮಳೆ

ಧಾರವಾಡದಲ್ಲಿ28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ