AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕೊಡಗು, ಚಿಕ್ಕಮಗಳೂರು ಸೇರಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆ

ಕರ್ನಾಟಕದ ವಿವಿಧೆಡೆ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು, ಚಿಕ್ಕಮಗಳೂರು ಸೇರಿ ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕೊಡಗು, ಚಿಕ್ಕಮಗಳೂರು ಸೇರಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆ
ಮಳೆImage Credit source: PTI
ನಯನಾ ರಾಜೀವ್
|

Updated on: Oct 08, 2024 | 7:39 AM

Share

ಕೊಡಗು, ಚಿಕ್ಕಮಗಳೂರು ಸೇರಿ ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬಾಗಲಕೋಟೆ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯನಗರದಲ್ಲಿ ಮಳೆಯಾಗಲಿದೆ.

ಪುತ್ತೂರು, ನಾಪೋಕ್ಲು, ಉಪ್ಪಿನಂಗಡಿ, ಪಣಂಬೂರು, ಮಾಣಿ, ಕೃಷ್ಣರಾಜಪೇಟೆ, ಕನಕಪುರ, ತಿಪಟೂರು, ಹಿರೇಕೆರೂರು, ಆಗುಂಬೆ, ಕಳಸ, ಮೂಡಿಗೆರೆ, ಕೊಟ್ಟಿಗೆಹಾರ, ಕೊಪ್ಪ, ಬೇಲೂರು, ಬೆಳ್ಳೂರು, ಭದ್ರಾವತಿ, ಗೇರುಸೊಪ್ಪ, ಬನವಾಸಿ, ಬೆಳ್ತಂಗಡಿ, ಧರ್ಮಸ್ಥಳ, ಕದ್ರಾ, ಗುತ್ತಲ್, ಹಿಡಕಲ್, ಚನ್ನರಾಯಪಟ್ಟಣ, ಎಚ್​ಡಿ ಕೋಟೆ, ಕುಶಾಲನಗರ, ಕುಣಿಗಲ್, ತ್ಯಾಗರ್ತಿ, ಗುಂಡ್ಲುಪೇಟೆಯಲ್ಲಿ ಮಳೆಯಾಗಿದೆ.

ಕಾರವಾರದಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 18.4 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಎಚ್​ಎಎಲ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಈ 15 ಜಿಲ್ಲೆಗಳಲ್ಲಿ ಅಕ್ಟೋಬರ್ 10ರವರೆಗೂ ಧಾರಾಕಾರ ಮಳೆ

ಹೊನ್ನಾವರದಲ್ಲಿ 31.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.3ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ 33.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್