ಕೊಡಗು, ಚಿಕ್ಕಮಗಳೂರು ಸೇರಿ ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಾಗಲಕೋಟೆ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯನಗರದಲ್ಲಿ ಮಳೆಯಾಗಲಿದೆ.
ಪುತ್ತೂರು, ನಾಪೋಕ್ಲು, ಉಪ್ಪಿನಂಗಡಿ, ಪಣಂಬೂರು, ಮಾಣಿ, ಕೃಷ್ಣರಾಜಪೇಟೆ, ಕನಕಪುರ, ತಿಪಟೂರು, ಹಿರೇಕೆರೂರು, ಆಗುಂಬೆ, ಕಳಸ, ಮೂಡಿಗೆರೆ, ಕೊಟ್ಟಿಗೆಹಾರ, ಕೊಪ್ಪ, ಬೇಲೂರು, ಬೆಳ್ಳೂರು, ಭದ್ರಾವತಿ, ಗೇರುಸೊಪ್ಪ, ಬನವಾಸಿ, ಬೆಳ್ತಂಗಡಿ, ಧರ್ಮಸ್ಥಳ, ಕದ್ರಾ, ಗುತ್ತಲ್, ಹಿಡಕಲ್, ಚನ್ನರಾಯಪಟ್ಟಣ, ಎಚ್ಡಿ ಕೋಟೆ, ಕುಶಾಲನಗರ, ಕುಣಿಗಲ್, ತ್ಯಾಗರ್ತಿ, ಗುಂಡ್ಲುಪೇಟೆಯಲ್ಲಿ ಮಳೆಯಾಗಿದೆ.
ಕಾರವಾರದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 18.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಎಚ್ಎಎಲ್ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Rains: ಕರ್ನಾಟಕದ ಈ 15 ಜಿಲ್ಲೆಗಳಲ್ಲಿ ಅಕ್ಟೋಬರ್ 10ರವರೆಗೂ ಧಾರಾಕಾರ ಮಳೆ
ಹೊನ್ನಾವರದಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬೀದರ್ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕಲಬುರಗಿಯಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ