Karnataka Rains: ಆಗಸ್ಟ್​ 20ರಿಂದ ಕರ್ನಾಟಕದ ಈ ಜಿಲ್ಲೆಗಳಲ್ಲಿ ವಿಪರೀತ ಮಳೆ

ಕರ್ನಾಟಕದಲ್ಲಿ ಆಗಸ್ಟ್ 20ರಿಂದ ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ಹಾಸನ, ದಾವಣಗೆರೆ, ಚಾಮರಾಜನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಮಳೆಯಾಗಲಿದೆ.

Karnataka Rains: ಆಗಸ್ಟ್​ 20ರಿಂದ ಕರ್ನಾಟಕದ ಈ ಜಿಲ್ಲೆಗಳಲ್ಲಿ ವಿಪರೀತ ಮಳೆ
ಮಳೆ
Image Credit source: Jagaranjosh.com

Updated on: Aug 19, 2024 | 7:35 AM

ಕರ್ನಾಟಕದಾದ್ಯಂತ ಮಳೆಯು ನಾಳೆಯಿಂದ ಚುರುಕುಗೊಳ್ಳಲಿದೆ. ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಕೊಂಚ ಬಿಡುವು ಪಡೆದಿದ್ದು, ನಾಳೆಯಿಂದ ಮತ್ತೆ ಹೆಚ್ಚಳವಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ಹಾಸನ, ದಾವಣಗೆರೆ, ಚಾಮರಾಜನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಮಳೆಯಾಗಲಿದೆ.
ಬರಗೂರು, ಜೋಯಿಡಾ, ಸಿದ್ದಾಪುರ, ಕದ್ರಾ, ಗೌರಿಬಿದನೂರು, ತೊಂಡೇಭಾವಿ, ಕಾರ್ಕಳ, ಮಂಠಾಳ, ಹಿರಿಯೂರು, ಕುಣಿಗಲ್, ಚಿಕ್ಕಬಳ್ಳಾಪುರ, ಯಲ್ಲಾಪುರ, ಕೋಟ, ಕುಂದಾಪುರ, ಸಂಕೇಶ್ವರ, ಕಲಬುರಗಿ, ಎನ್​ಆರ್​ಪುರ, ಮಿಡಿಗೇಶಿ, ಸಿರಾ, ಹೊನ್ನಾಳಿ, ತಿಪಟೂರು, ಮುಂಡಗೋಡು, ಗೇರುಸೊಪ್ಪ, ಕಾರವಾರ, ಭಾಲ್ಕಿ, ಸಿಂಧನೂರು, ಔರಾದ್, ಚನ್ನಗಿರಿ, ಬೆಳ್ಳೂರು, ಮಧುಗಿರಿ, ಚಾಮರಾಜನಗರ, ಪಾವಗಡದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ನಿತ್ಯ ಸಂಜೆ ವೇಳೆ ಮಳೆಯಾಗುತ್ತಿದೆ. ಎಚ್​ಎಎಲ್​ನಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್, ಎರಡು ದಿನ ಭಾರಿ ಮಳೆ​

ಹೊನ್ನಾವರದಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us