Karnataka Rains: ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್​ 28ರವರೆಗೂ ಧಾರಾಕಾರ ಮಳೆ, ಯೆಲ್ಲೋ ಅಲರ್ಟ್​

ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ, ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್​ 28ರವರೆಗೂ ಧಾರಾಕಾರ ಮಳೆ, ಯೆಲ್ಲೋ ಅಲರ್ಟ್​
ಮಳೆ
Image Credit source: Daijiworld

Updated on: Aug 22, 2024 | 7:43 AM

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್​ 28ರವರೆಗೂ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ. ತ್ಯಾಗರ್ತಿ, ನಾಯಕನಹಟ್ಟಿ, ಬರಗೂರು, ಹೊನ್ನಾಳಿ, ರಾಯಲ್ಪಾಡು, ಆಗುಂಬೆ, ಹಾಸನ, ಚನ್ನಗಿರಿ, ದೊಡ್ಡಬಳ್ಳಾಪುರ, ಮಧುಗಿರಿ, ಚಿತ್ರದುರ್ಗ, ಹಿರಿಯೂರು, ಕುಣಿಗಲ್, ಗುಂಡ್ಲುಪೇಟೆ, ಚಿಂತಾಮಣಿ, ಕೋಲಾರ, ಶಿಗ್ಗಾಂವ್, ಅಜ್ಜಂಪುರ, ಗುಬ್ಬಿ, ಕೊಟ್ಟೂರು, ಮುಂಡರಗಿ, ಕೂಡ್ಲಿಗಿ, ಸೇಡಬಾಳ, ಸಂಡೂರು, ಕಳಸ, ಹಡಗಲಿ, ಜಯಪುರ, ತಿಪಟೂರು, ನಾಪೋಕ್ಲು, ಬಳ್ಳಾರಿ, ಹರಪನಹಳ್ಳಿ, ದಾವಣಗೆರೆ, ಹಗರಿಬೊಮ್ಮನಹಳ್ಳಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ 23 ಜಿಲ್ಲೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​, ಆಗಸ್ಟ್​ 27ರವರೆಗೂ ವರ್ಷಧಾರೆ

ಹೊನ್ನಾವರದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.3ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us