AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ ಕರಾವಳಿ ಸೇರಿ ರಾಜ್ಯದ 7 ಜಿಲ್ಲೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರ್ನಾಟಕದ ಕರಾವಳಿ ಸೇರಿ ರಾಜ್ಯದ 7 ಜಿಲ್ಲೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​
ಮಳೆImage Credit source: PTI
ನಯನಾ ರಾಜೀವ್
|

Updated on: Oct 01, 2024 | 8:18 AM

Share

ಕರ್ನಾಟಕದ ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ಶಿವಮೊಗ್ಗ, ರಾಮನಗರ, ಕೋಲಾರ, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಕೂಡ ಮಳೆಯಾಗಲಿದೆ.

ನರಗುಂದ, ದಾವಣಗೆರೆ, ಧಾರವಾಡ, ಕಳಸ, ದಾವಣಗೆರೆ, ಮಾಣಿ, ಮಧುಗಿರಿ, ಹಿರಿಯೂರು, ಹರಪನಹಳ್ಳಿ, ಚಿತ್ರದುರ್ಗ, ಪಾವಗಡ, ಬರಗೂರು, ಗದಗ, ಗೇರುಸೊಪ್ಪ, ಮಿಡಿಗೇಶಿ, ಹಾರಂಗಿ, ಕುಡತಿನಿ, ಶ್ರವಣಬೆಳಗೊಳ, ಗುಬ್ಬಿ, ಧಾರವಾಡ, ಬಾದಾಮಿ, ಕುಂದಗೋಳ, ಹುಬ್ಬಳ್ಳಿ, ಸುಳ್ಯ, ಬೆಳ್ತಂಗಡಿ, ಕೂಡಲಸಂಗಮ, ಗಂಗಾವತಿ, ಹೆಬ್ಬೂರು, ಎಚ್​ಡಿ ಕೋಟೆ, ನಾಪೋಕ್ಲು, ಕುಣಿಗಲ್, ಹೊಸದುರ್ಗ, ಬಾಳೆಹೊನ್ನೂರು, ಪರಶುರಾಂಪುರದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣದಲ್ಲಿ ಎಚ್​ಎಎಲ್​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: ಕರ್ನಾಟಕದ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಕ್ಟೋಬರ್​ 6ರವರೆಗೂ ಮಳೆ

ಹೊನ್ನಾವರದಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾರವಾಡದಲ್ಲಿ 32.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 33.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 33.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ