Karnataka Rains: ರಾಜ್ಯದ ದಕ್ಷಿಣ ಒಳನಾಡಿನ 3 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ, ಜೂನ್ 1ರವರೆಗೂ ಭಾರಿ ಮಳೆ
ರಾಜ್ಯದ ದಕ್ಷಿಣ ಒಳನಾಡಿನ 3 ಜಿಲ್ಲೆಗಳಲ್ಲಿ ಜೂನ್ 1 ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ದಕ್ಷಿಣ ಒಳನಾಡಿನ 3 ಜಿಲ್ಲೆಗಳಲ್ಲಿ ಜೂನ್ 1 ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ರಾಯಚೂರಿನಲ್ಲಿ 39.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಅಂಕೋಲ, ದೇವರಹಿಪ್ಪರಗಿ, ಹೊನ್ನಾವರ, ಕೋಟದಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಸಂಜೆ ವೇಳೆಗೆ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ಮಳೆಯಾಗುವ ಸಾಧ್ಯತೆ ಇದೆ, ಎಚ್ಎಎಲ್ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Rains: ಮೇ 30ರವರೆಗೆ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ
ಮಲೆನಾಡಿನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಭಾರಿ ಗಾಳಿ ಬೀಸುತ್ತಿದೆ. ಮಳೆಯಾಗುವ ಸಂದರ್ಭದಲ್ಲಿ 30-40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು ಎಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ರಾಜ್ಯದ ಕರಾವಳಿ ಭಾಗದಲ್ಲಿ ಕೂಡ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಡುಪಿ, ಮಂಗಳೂರು ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಗುಡುಗು ಮುಂಸು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ