Karnataka Weather: ಕರ್ನಾಟಕದಾದ್ಯಂತ ಇಂದಿನಿಂದ ಮಳೆಯ ಅಬ್ಬರ ಕೊಂಚ ಕಡಿಮೆ

ಕಳೆದ ಒಂದು ತಿಂಗಳಿನಿಂದ ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಅಬ್ಬರಿಸುತ್ತಿದ್ದ ವರುಣದೇವ ಸ್ವಲ್ಪ ಶಾಂತರೂಪ ತಾಳಿದ್ದಾನೆ. ಇಂದಿನಿಂದ ಕೊಂಚ ಮಳೆ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Weather: ಕರ್ನಾಟಕದಾದ್ಯಂತ ಇಂದಿನಿಂದ ಮಳೆಯ ಅಬ್ಬರ ಕೊಂಚ ಕಡಿಮೆ
ಮಳೆ
Image Credit source: News 18

Updated on: Aug 05, 2024 | 7:37 AM

ಕರ್ನಾಟಕದಾದ್ಯಂತ ಮಳೆಯ ಅಬ್ಬರ ಇಂದಿನಿಂದ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಆನವಟ್ಟಿ, ಆಗುಂಬೆ, ಕ್ಯಾಸಲ್​ರಾಕ್, ಗೇರುಸೊಪ್ಪ, ಕದ್ರಾ, ಕೋಟ, ಶೃಂಗೇರಿ, ಸಿದ್ದಾಪುರ, ಕುಮಟಾ, ಮುಲ್ಕಿ, ಮಾಣಿ, ಕಾರವಾರ, ಯಲ್ಲಾಪುರ, ಪುತ್ತೂರು, ಹೊನ್ನಾವರ, ಕೊಪ್ಪ, ಜಯಪುರ, ಧರ್ಮಸ್ಥಳ, ಸಿದ್ದಾಪುರ, ಕುಂದಾಪುರ, ಮಂಗಳೂರು, ಕಾರ್ಕಳ, ಬೆಳಗಾವಿ, ಗೋಕರ್ಣ, ಸುಳ್ಯ, ಹಳಿಯಾಳ, ಬೆಳ್ತಂಗಡಿಯಲ್ಲಿ ಮಳೆಯಾಗಿದೆ.

ಲೋಂಡಾ, ಬಾಳೆಹೊನ್ನೂರು, ಕಳಸ, ಭಾಗಮಂಡಲ, ತ್ಯಾಗರ್ತಿ, ಸೋಮವಾರಪೇಟೆ, ಹುಂಚದಕಟ್ಟೆ, ಹಿಡಿಯೂರು, ಕಿರವತ್ತಿ, ಹಾಸನ, ಹಾರಂಗಿ, ದೊಡ್ಡಬಳ್ಳಾಪುರ, ಕೊಟ್ಟಿಗೆಹಾರದಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದಾದ್ಯಂತ ಮುಂದುವರೆದ ಮಳೆ, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

ಎಚ್​ಎಎಲ್​ನಲ್ಲಿ 27.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.7ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ. ಕೆಐಎಎಲ್​ನಲ್ಲಿ 28.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹೊನ್ನಾವರದಲ್ಲಿ 27.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 27.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 28.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us