Karnataka Rains: ಬೆಂಗಳೂರು, ಕೊಡಗು ಸೇರಿದಂತೆ 9 ಜಿಲ್ಲೆಗಳಲ್ಲಿ ಜೂನ್​ 2 ರವರೆಗೆ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಣೆ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಬೆಂಗಳೂರು, ಕೊಡಗು ಸೇರಿದಂತೆ 9 ಜಿಲ್ಲೆಗಳಲ್ಲಿ ಜೂನ್​ 2 ರವರೆಗೆ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಣೆ
ಮಳೆ
Image Credit source: Indiatimes.com

Updated on: May 29, 2023 | 7:30 AM

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇನ್ನುಳಿದಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಮೈಸೂರು, ವಿಜಯನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶವು ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆ ಇದೆ.

ರಾಯಚೂರಿನಲ್ಲಿ 40.6 ಡಿಗ್ರಿ ಸೆಲ್ಸಿಯಸ್​ ಅತ್ಯಧಿಕ ಉಷ್ಣಾಂಶ ದಾಖಳಾಗಿದೆ, ಬೇಲೂರು, ಹುಣಸೂರು, ಕಳಸ, ಶಿರಾಲಿಯಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Rains: ಮೇ 30ರವರೆಗೆ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ

ಎಚ್​ಎಎಲ್​ನಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us