Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮೇ 18ರವರೆಗೂ ಮಳೆ

ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಹಾಸಬ, ಕೊಡಗು, ಮೈಸೂರು,ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮೇ 18ರವರೆಗೂ ಮಳೆ
ಮಳೆ
Image Credit source: Economic Times

Updated on: May 12, 2024 | 8:04 AM

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೇ 18ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಹಾಸಬ, ಕೊಡಗು, ಮೈಸೂರು,ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ,ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರದಲ್ಲೂ ಮಳೆಯಾಗಲಿದೆ.

ಶ್ರೀರಂಗಪಟ್ಟಣದಲ್ಲಿ ಅತಿ ಹೆಚ್ಚು ಮಳೆಯಾಗಿದೆ, ಗುಬ್ಬಿ, ಮಂಡ್ಯ, ಕೃಷ್ಣರಾಜಸಾಗರ, ಕೆಆರ್​ನಗರ, ಹೆಸರಘಟ್ಟ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಸಂತೆಬೆನ್ನೂರು, ಕೃಷ್ಣರಾಜಪೇಟೆ, ಅರಕಲಗೂಡು, ಚಿಕ್ಕಮಗಳೂರು, ಮಾಗಡಿ, ಕುಶಾಲನಗರ, ಅಜ್ಜಂಪುರ, ಪಾವಗಡದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಎಚ್​ಎಎಲ್​ನಲ್ಲಿ 32.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.9ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.0 ಡಿಗ್ರಿ ಸೆಲ್ಸಿಯಸ್​, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ವಿಜಯಪುರ, ಚಿಕ್ಕಮಗಳೂರು, ಹುಬ್ಬಳ್ಳಿ ಸೇರಿ ಕರ್ನಾಟಕದ ಹಲವೆಡೆ ಮಳೆ

ರಾಯಚೂರಿನಲ್ಲಿ 39.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ವಿಜಯಪುರದಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 38.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 36.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹಾವೇರಿಯಲ್ಲಿ 37.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 38.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 28.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ 28.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 36.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us