
ಬೆಂಗಳೂರು, ಜುಲೈ 29: ಕರ್ನಾಟಕದಲ್ಲಿ ಮಳೆಯ (Karnataka Rain Updates) ಅಬ್ಬರ ಕೊಂಚ ಕಡಿಮೆಯಾಗಿದ್ದು, ಇನ್ನೂ 1 ವಾರ ಹೆಚ್ಚಿನ ಮಳೆಯಾಗುವುದಿಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ರಾಜ್ಯದ ಇತರ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. ಕರಾವಳಿ ಜಿಲ್ಲೆಗಳಿಗೆ ಇಂದು (ಜುಲೈ 29) ಮತ್ತು ನಾಳೆ (ಜುಲೈ 30) ಹಳದಿ ಅಲರ್ಟ್ (Yellow Alert) ನೀಡಲಾಗಿದೆ. ಮಲೆನಾಡಿನಲ್ಲೂ ಮಳೆ ಕಡಿಮೆಯಾಗಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡದಲ್ಲಿ ಮಳೆರಾಯ ಕೊಂಚ ಬಿಡುವು ಪಡೆದಿದ್ದಾನೆ. ಇತ್ತ ಬೆಂಗಳೂರಿನಲ್ಲಿ ಕೂಡ ವರುಣನ ಆರ್ಭಟ ಕಡಿಮೆಯಾಗಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಇನ್ನೆರಡು ದಿನ ಹಳದಿ ಅಲರ್ಟ್ ನೀಡಲಾಗಿದೆ. ಆಗಸ್ಟ್ ಮೊದಲ ವಾರ ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಅತಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೋಮವಾರ ಕರಾವಳಿಯ ಬಹುತೇಕ ಕಡೆ, ದಕ್ಷಿಣ ಒಳನಾಡಿನ ಮತ್ತು ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ. ಪ್ರಮುಖವಾಗಿ ಶಿವಮೊಗ್ಗ ಜಿಲ್ಲೆಯ ಆಗುಂಬೆ 6, ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್‌ರಾಕ್ 5, ಉಡುಪಿ ಜಿಲ್ಲೆಯ ಸಿದ್ದಾಪುರ, ಉತ್ತರ ಕನ್ನಡ ಜಿಲ್ಲೆಯ ಗೇರುಸೊಪ್ಪದಲ್ಲಿ ತಲಾ 4 ಸೆಂ.ಮೀ. ಮಳೆಯಾಗಿದೆ.
ಇದನ್ನೂ ಓದಿ: ಮಳೆ ಅವಾಂತರ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ
ಹಾಸನ, ಕೊಡಗು, ವಿಜಯಪುರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ,ಗದಗ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಇಂದು ಸಾಧಾರಣ ಮಳೆಯಾಗಲಿದೆ.
ಇನ್ನು, ಉತ್ತರಾಖಂಡ, ಹಿಮಾಚಲ ಪ್ರದೇಶ, ಮಹಾರಾಷ್ಟ್ರ, ಕೇರಳ ಮತ್ತು ದೆಹಲಿ ಸೇರಿದಂತೆ ಕೆಲವು ರಾಜ್ಯಗಳಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಆರೆಂಜ್ ಮತ್ತು ಹಳದಿ ಅಲರ್ಟ್ ನೀಡಿದ್ದು, ಗುಡುಗು, ಮಿಂಚು ಮತ್ತು ದಿಢೀರ್ ಪ್ರವಾಹದ ಸಾಧ್ಯತೆಯ ಬಗ್ಗೆ ಎಚ್ಚರಿಕೆ ನೀಡಿದೆ. ಕೇರಳದಲ್ಲಿ, ನಿರಂತರ ಭಾರೀ ಮಳೆ ಮತ್ತು ಬಿರುಗಾಳಿಯು ಸಾಮಾನ್ಯ ಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ನದಿಗಳು ಮತ್ತು ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಏರಿದೆ, ಮರಗಳು ಬಿದ್ದ ಕಾರಣ ಮನೆಗಳಿಗೆ ಹಾನಿಯಾಗಿದೆ ಮತ್ತು ರಾಜ್ಯದ ಹಲವು ಭಾಗಗಳಲ್ಲಿ ವಿದ್ಯುತ್ ಸರಬರಾಜು ಅಸ್ತವ್ಯಸ್ತವಾಗಿದೆ.
ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಭಾರೀ ಮಳೆಗೆ ಧರೆಗುರುಳಿದ ಮರಗಳು: ರಸ್ತೆ ಸಂಪೂರ್ಣ ಬಂದ್
ರಾಜಸ್ಥಾನ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಗುಜರಾತ್, ಮಹಾರಾಷ್ಟ್ರ, ಮಧ್ಯಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ದಕ್ಷಿಣ ಒಳನಾಡು ಕರ್ನಾಟಕ, ಉತ್ತರಾಖಂಡ ಮತ್ತು ಪಶ್ಚಿಮ ಉತ್ತರ ಪ್ರದೇಶ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಬಿಹಾರ, ಛತ್ತೀಸ್‌ಗಢ, ಹರಿಯಾಣ, ಚಂಡೀಗಢ, ದೆಹಲಿ, ಹಿಮಾಚಲ ಪ್ರದೇಶ, ಜಾರ್ಖಂಡ್, ಕೇರಳ, ಮಾಹೆ, ಕೊಂಕಣ ಮತ್ತು ಗೋವಾ, ಸೌರಾಷ್ಟ್ರ ಮತ್ತು ಕಚ್, ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಪಶ್ಚಿಮ ರಾಜಸ್ಥಾನದ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಛತ್ತೀಸ್‌ಗಢ, ಕರಾವಳಿ ಆಂಧ್ರಪ್ರದೇಶ, ಗುಜರಾತ್, ಹಿಮಾಚಲ ಪ್ರದೇಶ, ಮಧ್ಯಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ರಾಜಸ್ಥಾನ, ತಮಿಳುನಾಡು, ಪುದುಚೇರಿ, ಕಾರೈಕಲ್, ಉತ್ತರಾಖಂಡ ಮತ್ತು ಪಶ್ಚಿಮ ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ