Karnataka Rains: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಜೂನ್​ 9ರವರೆಗೆ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲು ಜೂನ್ 9ರವರೆಗೆ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ತುಮಕೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಜೂನ್​ 9ರವರೆಗೆ ಮಳೆ
ಮುಂಗಾರು
Image Credit source: National Geographic Society

Updated on: Jun 05, 2024 | 7:34 AM

ಕರ್ನಾಟಕದಲ್ಲಿ ಮುಂಗಾರು(Monsoon) ಚುರುಕುಗೊಳ್ಳುತ್ತಿದ್ದು ಇಂದು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ತುಮಕೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು ಜೂನ್​ 9ರವರೆಗೆ ಮಳೆಯಾಗಲಿದೆ.

ಶಿರಾಲಿಯಲ್ಲಿ 35.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಪುತ್ತೂರು, ಶಿರಹಟ್ಟಿ, ಉಪ್ಪಿನಂಗಡಿ, ಗುಂಡ್ಲುಪೇಟೆ, ಗೋಕರ್ಣ, ಚನ್ನಪಟ್ಟಣದಲ್ಲಿ ಮಳೆಯಾಗಿದೆ. ಕುಮಟಾ, ಹರಪನಹಳ್ಳಿ, ಕದ್ರಾ, ಧರ್ಮಸ್ಥಳ, ಮಾಣಿ, ಕಾರವಾರ, ಕುಂದಗೋಳ, ಬೆಳ್ಳಟ್ಟಿ, ಸೋಮವಾರಪೇಟೆ, ಅಂಕೋಲಾ, ಹೊನ್ನಾವರ, ಹಾರಂಗಿ, ಎಚ್​ಡಿ ಕೋಟೆ, ಹುಂಚದಕಟ್ಟೆ, ಕಳಸ, ಬೆಳ್ತಂಗಡಿ, ಸಿದ್ದಾಪುರ, ಸವಣೂರು, ಶಿಗ್ಗಾಂವ್​, ಪೊನ್ನಂಪೇಟೆ, ನಾಪೋಕ್ಲು, ಭಾಗಮಂಡಲ, ಮೈಸೂರಿನಲ್ಲಿ ಮಳೆಯಾಗಿದೆ.

ಇಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಮತ್ತಷ್ಟು ಓದಿ: Karnataka Rains: ಇಂದು ಬೆಂಗಳೂರು, ಚಿಕ್ಕಮಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಭಾರಿ ಮಳೆ, ಯೆಲ್ಲೋ ಅಲರ್ಟ್​

ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಾಗಲಕೋಟೆಯಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ35.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ 26.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us