Karnataka Rains: ಬೆಂಗಳೂರು ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದಲ್ಲಿ ಮತ್ತೆ ಮಳೆ ಶುರುವಾಗಿದೆ, ಬೆಂಗಳೂರಿ ಸೇರಿ ರಾಜ್ಯದ 25ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Karnataka Rains: ಬೆಂಗಳೂರು ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ
ಮಳೆ
Image Credit source: PTI

Updated on: Nov 13, 2024 | 7:33 AM

ಕರ್ನಾಟಕದ ವಿವಿಧೆಡೆ ಇಂದಿನಿಂದ ಮತ್ತೆ ಮಳೆ ಶುರುವಾಗಿದೆ, ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿಯಿಂದಲೇ ತುಂತುರು ಮಳೆ ಇತ್ತು. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕಾರವಾರದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಬೀದರ್​ನಲ್ಲಿ 15.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಣ್ಣ ಪ್ರಮಾಣದ ಮಳೆಯಾಗುತ್ತಿದೆ. ಎಚ್​ಎಎಲ್​ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: ಕರ್ನಾಟಕದ ಈ 5 ಜಿಲ್ಲೆಗಳಲ್ಲಿ ಧಾರಾಕಾರ ಮಳೆ, ಯೆಲ್ಲೋ ಅಲರ್ಟ್​

ಕಾರವಾರದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಗದಗದಲ್ಲಿ 29.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 32.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us