AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕೊಡಗು, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಇಂದು ಭಾರಿ ಮಳೆ, ಯೆಲ್ಲೋ ಅಲರ್ಟ್​

ಇಂದು ಕರ್ನಾಟಕದ ಕೆಲವೇ ಕೆಲವೇ ಕಡೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಇಂದು ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯ ಪ್ರಮಾಣ ಕಡಿಮೆ ಇರಲಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

Karnataka Rains: ಕೊಡಗು, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಇಂದು ಭಾರಿ ಮಳೆ, ಯೆಲ್ಲೋ ಅಲರ್ಟ್​
ಮಳೆ Image Credit source: PTI
ನಯನಾ ರಾಜೀವ್
|

Updated on: Jul 31, 2025 | 7:27 AM

Share

ಬೆಂಗಳೂರು, ಜುಲೈ 31: ಕರ್ನಾಟಕದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಕೂಡ ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಇಂದು ಭಾರಿ ಮಳೆ(Rain)ಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯ ಪ್ರಮಾಣ ಕಡಿಮೆ ಇರಲಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ಆಗುಂಬೆಯಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಸಿದ್ದಾಪುರ, ಶೃಂಗೇರಿ, ಜಯಪುರ, ಬಾಳೆಹೊನ್ನೂರು, ಕ್ಯಾಸಲ್​​ರಾಕ್, ಕಾರ್ಕಳ, ಕದ್ರಾ, ಬೆಳ್ತಂಗಡಿ, ಜೋಯ್ಡಾ, ಧರ್ಮಸ್ಥ, ಲೋಂಡಾ, ಸುಳ್ಯ, ಗೇರುಸೊಪ್ಪ, ಕಮ್ಮರಡಿ, ಸೋಮವಾರಪೇಟೆ, ಭಾಗಮಂಡಲ, ಬಂಟವಾಳ, ಮಂಗಳೂರು, ಕುಂದಾಪುರ, ಮಂಕಿ, ಉಪ್ಪಿನಂಗಡಿ, ಶಕ್ತಿನಗರ, ಕೊಟ್ಟಿಗೆಹಾರ, ಕುಶಾಲನಗರ, ಕಳಸ, ವಿರಾಜಪೇಟೆ, ಪೊನ್ನಂಪೇಟೆ, ಅರಕಲಗೂಡು, ಮುದ್ದೇಬಿಹಾಳದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು ಆಗಾಗ ತುಂತುರು ಮಳೆಯಾಗುತ್ತಿದೆ. ಎಚ್​ಎಎಲ್​ನಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​​ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ, ಶಿವಮೊಗ್ಗ, ಕೊಡಗು ಸೇರಿ 7 ಜಿಲ್ಲೆಗಳಲ್ಲಿ ವರುಣನ ಆರ್ಭಟ, ಆ.3ರವರೆಗೆ ಮಳೆ

ಹೊನ್ನಾವರದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​​ಪೋರ್ಟ್​​ನಲ್ಲಿ 25.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಹಾವೇರಿಯಲ್ಲಿ 25.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ