ಬಿಜೆಪಿ ಅವಧಿಯ ರೈತ ವಿರೋಧಿ ನೀತಿಗಳನ್ನು ವಾಪಸ್ ಪಡೆಯಲು ರೈತ ಸಂಘ ಆಗ್ರಹ: ಜೂ. 15ರಿಂದ ಪ್ರತಿಭಟನೆ ತೀರ್ಮಾನ

ಈ ಹಿಂದಿನ ಬಿಜೆಪಿ ಸರ್ಕಾರ ಅವಧಿಯಲ್ಲಿನ ರೈತ ವಿರೋಧ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ರಾಜ್ಯ ರೈತ ಸಂಘ ಆಗ್ರಹಿಸಿದ್ದು, ಈ ಬಗ್ಗೆ ಜೂನ್ 15ರಿಂದ ಧರಣಿ ಮಾಡಲು ತೀರ್ಮಾನಿಸಿದೆ.

ಬಿಜೆಪಿ ಅವಧಿಯ ರೈತ ವಿರೋಧಿ ನೀತಿಗಳನ್ನು ವಾಪಸ್ ಪಡೆಯಲು ರೈತ ಸಂಘ ಆಗ್ರಹ: ಜೂ. 15ರಿಂದ ಪ್ರತಿಭಟನೆ ತೀರ್ಮಾನ
ಸಾಂದರ್ಭಿಕ ಚಿತ್ರ
Follow us
ರಮೇಶ್ ಬಿ. ಜವಳಗೇರಾ
|

Updated on: Jun 12, 2023 | 10:40 AM

ಮೈಸೂರು: ಈ ಹಿಂದೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ‘ರೈತ ವಿರೋಧಿ ನೀತಿಗಳು ಮತ್ತು ಕಾರ್ಯಕ್ರಮಗಳನ್ನು’ ಹಿಂಪಡೆಯಬೇಕು ಎಂದು ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರಕ್ಕೆ ಕರ್ನಾಟಕ ರಾಜ್ಯ ರೈತ ಸಂಘ (ಕೆಆರ್‌ಆರ್‌ಎಸ್) ಆಗ್ರಹಿಸಿದೆ. ಅಲ್ಲದೇ ರೈತ ವಿರೋಧಿ ಕಾರ್ಯಕ್ರಮಗಳನ್ನು ಕೈಬಿಡಬೇಕೆಂದು ಜೂನ್ 15 ರಿಂದ ರಾಜ್ಯಾದ್ಯಂತ ‘ರೈತಾಗ್ರಹ ಧರಣಿ’ ಆರಂಭಿಸಲು ನಿರ್ಧರಿಸಿದೆ.

ಈ ಬಗ್ಗೆ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕೆಆರ್‌ಆರ್‌ಎಸ್ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ರೈತರ ಹಿತಾಸಕ್ತಿಗೆ ವಿರುದ್ಧವಾಗಿ ಬಿಜೆಪಿ ಸರ್ಕಾರವು ಭೂ ಸುಧಾರಣಾ ತಿದ್ದುಪಡಿ ಕಾಯ್ದೆ 2020, ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ಕಾಯ್ದೆ 2020, ಜಾನುವಾರು ಸಂರಕ್ಷಣೆ ಕಾಯ್ದೆ 2020 ಅನ್ನು ಜಾರಿಗೆ ತಂದಿದೆ. ಇವುಗಳನ್ನು ಕೂಡಲೇ ಸಿದ್ದರಾಮಯ್ಯನವರ ಸರ್ಕಾರ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ರಾಜ್ಯ ಸರ್ಕಾರ ರೈತ ಮತ್ತು ಬಡವರ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಜೂನ್ 15 ರಂದು ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಎದುರು ರೈತರ ಧರಣಿ ನಡೆಯಲಿದ್ದು, ಸರ್ಕಾರ ರೈತರ ಪರವಾದ ನೀತಿ ಮತ್ತು ಕಾರ್ಯಕ್ರಮಗಳನ್ನು ನೀಡಬೇಕೆಂದು ಎಂದು ತಿಳಿಸಿದರು.

ಕಾರ್ಪೊರೇಟ್‌ಗಳಿಗೆ ಸಹಾಯ ಮಾಡಲು ಬಿಜೆಪಿ ಸರ್ಕಾರವು ಮೂರು ಕೃಷಿ ಸಂಬಂಧಿತ ಕಾಯ್ದೆಗಳನ್ನು ಜಾರಿಗೆ ತಂದಿತ್ತು. ಅಧಿಕಾರಕ್ಕೆ ಬಂದ ನಂತರ ಈ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿತ್ತು. ಈಗ ಕಾಂಗ್ರೆಸ್ ಸರ್ಕಾರ ತನ್ನ ಭರವಸೆಗಳನ್ನು ಈಡೇರಿಸಬೇಕು ಎಂದು ಹೇಳಿದರು.

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ