ಚುನಾವಣೆ ಇಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ, ಯಾರ್ಯಾರು?

ಕರ್ನಾಟಕ ವಿಧಾನಸಭೆಯಿಂದ 4 ಸ್ಥಾನಗಳ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಈಗಾಗಲೇ ಕಾಂಗ್ರೆಸ್​​​ನಿಂದ ಮೂವರು ಹಾಗೂ ಬಿಜೆಪಿಯಿಂದ ಒಬ್ಬರು ನಾಮಪತ್ರ ಸಲ್ಲಿಸಿದ್ದು, ಎಲ್ಲರ ನಾಮಪತ್ರಗಳು ಕ್ರಮಬದ್ಧವಾಗಿವೆ. ಆದ್ರೆ, ಭೋಜಣ್ಣ ಸೋಮಣ್ಣ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತವಾಗಿದೆ. ಹೀಗಾಗಿ ಚುನಾವಣೆ ಇಲ್ಲದೇ ನಾಲ್ವರು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧಿಕೃತವೊಂದೇ ಘೋಷಣೆಯೊಂದೆ ಬಾಕಿ ಇದೆ.

ಚುನಾವಣೆ ಇಲ್ಲದೇ ಕರ್ನಾಟಕದಿಂದ  ನಾಲ್ವರು ರಾಜ್ಯಸಭೆಗೆ  ಅವಿರೋಧವಾಗಿ ಆಯ್ಕೆ, ಯಾರ್ಯಾರು?
Vidhana Soudha

Updated on: Jun 09, 2026 | 4:15 PM

ಬೆಂಗಳೂರು, (ಜೂನ್ 09): ಕರ್ನಾಟಕ ರಾಜ್ಯಸಭೆಯ (Karnataka Rajyasabha) ನಾಲ್ಕು ಸ್ಥಾನಗಳಿಗೆ ಸ್ಪರ್ಧಿಸಿದ್ದ ಮೂವರು ಕಾಂಗ್ರೆಸ್ (Congress) ಅಭ್ಯರ್ಥಿಗಳು ಹಾಗೂ ಓರ್ವ ಬಿಜೆಪಿ (BJP) ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಮಲ್ಲಿಕಾರ್ಜುನ್ ಖರ್ಗೆ, ಪವನ್ ಖೇರಾ,ಮನ್ಸೂರ್ ಆಲಿ ಖಾನ್ ಹಾಗೂ ಬಿಜೆಪಿಯ ನಾಗರಾಜ್ ಅವರು ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದೆ. ರಾಜ್ಯಸಭೆ ಚುನಾವಣೆಗೆ ಸಲ್ಲಿಕೆಯಾಗಿದ್ದ ಎಲ್ಲಾ ನಾಮಪತ್ರಗಳನ್ನು ಇಂದು (ಜೂನ್ 09) ಚುನಾವಣಾಧಿ ಕಾರಿ ಕೆ.ಎಂ.ವಿಶಾಲಾಕ್ಷಿ ಅವರು ಪರಿಶೀಲನೆ ನಡೆಸಿದ್ದು, ನಾಲ್ವರ ನಾಪತ್ರಗಳು ಕ್ರಮಬದ್ಧವಾಗಿವೆ. ಆದ್ರೆ, ಪಕ್ಷೇತರವಾಗಿ ಸ್ಪರ್ಧೆ ಮಾಡಿದ್ದ ಭೋಜಣ್ಣ ಸೋಮಣ್ಣ ನಾಮಪತ್ರ ತಿರಸ್ಕೃತವಾಗಿದೆ. ಹೀಗಾಗಿ ಚುನಾವಣೆ ಇಲ್ಲದೇ ನಾಲ್ವರು ಅವಿರೋಧ ಆಯ್ಕೆಯಾಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

ಮುಖ್ಯಾಂಶಗಳು

  • ಕರ್ನಾಟಕದಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ
  • ಕಾಂಗ್ರೆಸ್​ನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆ
  • ನಾಲ್ವರು ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರ ಕ್ರಮಬದ್ಧವಾಗಿದೆ
  • ನಾಮಪತ್ರ ಪರಿಶೀಲನೆ ನಡೆಸಿದ್ದ ಚುನಾವಣಾಧಿಕಾರಿ ಕೆ.ಎಂ.ವಿಶಾಲಾಕ್ಷಿ
  • ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿಖಾನ್, ಪವನ್ ಖೇರಾ, ಬಿಜೆಪಿಯ ನಾಗರಾಜು ನಾಮಪತ್ರ ಸಲ್ಲಿಸಿದ್ದರು

ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆ ನಾಲ್ಕು ಸ್ಥಾನ ಹಾಗೂ ವಿಧಾನ ಪರಿಷತ್‌ನ ಏಳು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಅವಧಿ ಸೋಮವಾರ ಮುಕ್ತಾಯಗೊಂಡಿದ್ದು, ರಾಜ್ಯಸಭೆ ಚುನಾವಣೆಗೆ ನಾಲ್ಕು ಮಂದಿ ಹಾಗೂ ಪರಿಷತ್‌ ಚುನಾವಣೆಗೆ 8 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಇಂದು (ಜೂನ್‌ 09) ನಾಮಪತ್ರಗಳ ಪರಿಶೀಲನೆ ಪ್ರಕ್ರಿಯೆ ನಡೆದಿದ್ದು, ರಾಜ್ಯಸಭೆಗೆ ಪಕ್ಷೇತರ ಅಭ್ಯರ್ಥಿಯ ಸ್ಪರ್ಧಿಸಿದ್ದ ಭೋಜಣ್ಣ ಸೋಮಣ್ಣ ಅವರ ನಾಮಪತ್ರ ತಿರಸ್ಕೃತವಾಗಿದೆ. ಯಾವುದೇ ಅನುಮೋದಕರ ಸಹಿ ಇಲ್ಲದ ಕಾರಣ ಪಕ್ಷೇತರ ಅಭ್ಯರ್ಥಿ ಭೋಜಣ್ಣ ಸೋಮಣ್ಣ ಅವರ ನಾಮಪತ್ರವನ್ನು ಚುನಾವಣಾಧಿಕಾರಿ ಕೆ.ಎಂ.ವಿಶಾಲಾಕ್ಷಿ ಅವರು ತಿರಸ್ಕೃತ ಮಾಡಿದ್ದಾರೆ.

ಇದನ್ನೂ ಓದಿ: ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್​​ ಕೈತಪ್ಪಿದ್ದೇಕೆ?: ಅಸಲಿ ಸತ್ಯ ಬಹಿರಂಗಪಡಿಸಿದ ಕುಮಾರಸ್ವಾಮಿ

ನಾಲ್ವರು ಅವಿರೋಧವಾಗಿ ಆಯ್ಕೆ

ನಾಲ್ಕು ಸ್ಥಾನಗಳಿಗೆ ಕಾಂಗ್ರೆಸ್‌ನಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪವನ್‌ ಖೇರಾ, ಮನ್ಸೂರ್‌ ಅಲಿ ಖಾನ್‌ ಹಾಗೂ ಬಿಜೆಪಿಯಿಂದ ಪ್ರೊ.ಎಂ.ನಾಗರಾಜ್‌ ನಾಮಪತ್ರ ಸರಿಯಾಗಿದೆ. ಇನ್ನು ನಾಲ್ಕು ಸ್ಥಾನಗಳಿಗೆ ನಾಲ್ವರು ಅಭ್ಯರ್ಥಿಗಳಿದ್ದಾರೆ. ಹೀಗಾಗಿ ಯಾವುದೇ ಪ್ರತಿಸ್ಪರ್ಧಿಗಳಿಲ್ಲದಿದ್ದರಿಂದ ಮತದಾನ ನಡೆಯದೇ ನಾಲ್ವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆದ್ರೆ, ಜೂನ್ 11 ನಾಮಪತ್ರ ವಾಪಸ್‌ ಕೊನೆಯ ದಿನವಾಗಿದ್ದು, ಯಾರು ನಾಮಪತ್ರ ಪಡೆಯದಿದ್ದಲ್ಲಿ ಅಂದು ನಾಲ್ವರ ಆಯ್ಕೆಯನ್ನು ಅಧಿಕೃತವಾಗಿ ಘೋಷಣೆಯಾಗಲಿದೆ.

ಪರಿಷತ್‌ನ ಏಳು ಸ್ಥಾನಗಳಿಗೆ ಚುನಾವಣೆ

ಇನ್ನು ಪರಿಷತ್‌ನ ಏಳು ಸ್ಥಾನಗಳಿಗೆ ಕಾಂಗ್ರೆಸ್‌ನಿಂದ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ , ತಿಪ್ಪಣ್ಣಪ್ಪ ಕಮಕನೂರ, ಮಳವಳ್ಳಿ ಶಿವಣ್ಣ, ಪಿ.ವಿ.ಮೋಹನ್‌, ಕಾಂಗ್ರೆಸ್‌ನಿಂದ ಐದನೇ ಅಭ್ಯರ್ಥಿಯಾಗಿ ವಿನಯ್‌ ಕಾರ್ತಿಕ್‌ ನಾಮಪತ್ರ ಸಲ್ಲಿಸಿದರೆ, ಬಿಜೆಪಿಯಿಂದ ಲಿಂಗರಾಜ್‌ ಪಾಟೀಲ್‌, ರಘು ಕೌಟಿಲ್ಯ ಹಾಗೂ ಜೆಡಿಎಸ್‌ನಿಂದ ಗೋವಿಂದರಾಜು ಅವರು ನಾಮಪತ್ರ ಸಲ್ಲಿಸಿದ್ದು, ಜೂ. 11ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಯಾರೊಬ್ಬರೂ ನಾಮಪತ್ರ ಹಿಂಪಡೆಯದಿದ್ದರೆ ಜೂ.18ರಂದು ಮತದಾನ ನಡೆಯಲಿದೆ. ವಿಧಾನಸಭೆಯಲ್ಲಿ ಪಕ್ಷಗಳ ಬಲಾಬಲ ಆಧರಿಸಿ ಕಾಂಗ್ರೆಸ್‌ನ ನಾಲ್ಕು ಹಾಗೂ ಬಿಜೆಪಿಯ ಇಬ್ಬರು ಅನಾಯಾಸವಾಗಿ ಗೆಲುವು ಸಾಧಿಸಬಹುದಾಗಿದೆ. ಬಾಕಿ ಒಂದು ಸ್ಥಾನಕ್ಕೆ ಕಾಂಗ್ರೆಸ್‌ನ ವಿನಯ್‌ ಕಾರ್ತಿಕ್‌ ಹಾಗೂ ಜೆಡಿಎಸ್‌ನ ಗೋವಿಂದರಾಜು ನಡುವೆ ಸ್ಪರ್ಧೆ ನಡೆಯಲಿದ್ದು, ಯಾರು ಗೆಲುವು ಸಾಧಿಸಲಿದ್ದಾರೆ ಎಂಬ ಕುತೂಹಲ ಮೂಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us