Kannada Rajyotsava 2023 Highlights: ಕರ್ನಾಟಕ ಇಡೀ ವಿಶ್ವದಲ್ಲೇ ಹೆಸರು ಮಾಡಿದೆ: ಗೃಹ ಸಚಿವ ಜಿ ಪರಮೇಶ್ವರ್

ವಿವೇಕ ಬಿರಾದಾರ
| Updated By: ಗಂಗಾಧರ​ ಬ. ಸಾಬೋಜಿ

Updated on:Nov 01, 2023 | 11:00 PM

Karnataka Breaking Kannada News Highlights: 1956 ರ ನವೆಂಬರ್ 1 ರಂದು, ಮದ್ರಾಸ್, ಮುಂಬಯಿ, ಹೈದರಬಾದ್ ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳು ವಿಲೀನಗೊಂಡು ಮೈಸೂರು ರಾಜ್ಯ ಉದಯವಾಯಿತು. ನವೆಂಬರ್ 1, 1973 ರಂದು ಮೈಸೂರು ರಾಜ್ಯಕ್ಕೆ "ಕರ್ನಾಟಕ" ಎಂದು ನಾಮಕರಣ ಮಾಡಲಾಯಿತು. ಹೀಗಾಗಿ ಪ್ರತಿವರ್ಷ ನ.1 ರಂದು ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗುತ್ತದೆ. ಪ್ರತಿವರ್ಷ ರಾಜ್ಯ ಸರ್ಕಾರ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುತ್ತೆ.

Kannada Rajyotsava 2023 Highlights: ಕರ್ನಾಟಕ ಇಡೀ ವಿಶ್ವದಲ್ಲೇ ಹೆಸರು ಮಾಡಿದೆ: ಗೃಹ ಸಚಿವ ಜಿ ಪರಮೇಶ್ವರ್
ಗೃಹ ಸಚಿವ ಜಿ ಪರಮೇಶ್ವರ್

Karnataka Rajyotsava Celebration Highlights Updates: ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವವನ್ನು ಪ್ರತಿ ವರ್ಷದ ನವೆಂಬರ್ 1 ರಂದು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ 1956ರ ನವೆಂಬರ್ 1ರಂದು ಮೈಸೂರು ರಾಜ್ಯವೆಂದು ಘೋಷಣೆ ಮಾಡಲಾಯಿತು. ಮೈಸೂರು ರಾಜ್ಯ ನಿರ್ಮಾಣವಾದುದರ ಸಂಕೇತವಾಗಿ ಪ್ರತಿ ವರ್ಷ ನವೆಂಬರ್​ 1 ರಂದು ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ವಿಶ್ವದಾದ್ಯಂತ ನೆಲಸಿರುವ ಕನ್ನಡಿಗರು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಾರೆ. ಈ ದಿನದಂದು ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. 1956 ರ ನವೆಂಬರ್ 1 ರಂದು, ಮದ್ರಾಸ್, ಮುಂಬಯಿ, ಹೈದರಬಾದ್ ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳು ವಿಲೀನಗೊಂಡು ಮೈಸೂರು ರಾಜ್ಯ ಉದಯವಾಯಿತು. ಹಾಗೂ ಉತ್ತರ ಕರ್ನಾಟಕ, ಮಲೆನಾಡು ಮತ್ತು ಹಳೆಯ ಮೈಸೂರು ಎಂಬುದಾಗಿ ಹೊಸದಾಗಿ ರೂಪುಗೊಂಡ ಮೈಸೂರು ರಾಜ್ಯವನ್ನು ಮೂರು ಪ್ರದೇಶಗಳಲ್ಲಿ ಗುರುತಿಸಲಾಯಿತು. ನವೆಂಬರ್ 1, 1973 ರಂದು ಮೈಸೂರು ರಾಜ್ಯಕ್ಕೆ “ಕರ್ನಾಟಕ” ಎಂದು ನಾಮಕರಣ ಮಾಡಲಾಯಿತು. ಈ ವರ್ಷ ಕರ್ನಾಟಕವೆಂದು ನಾಮಕರಣ ಮಾಡಿ 50 ವರ್ಷವಾದ ಹಿನ್ನೆಲೆಯಲ್ಲಿ ಕರ್ನಾಟಕ-50 ಎಂಬ ಶಿರ್ಷಿಕೆ ಅಡಿಯಲ್ಲಿ ಸರ್ಕಾರ ವಿಶೇಷವಾಗಿ ರಾಜ್ಯೋತ್ಸವ ಆಚರಿಸಲು ನಿರ್ಧರಿಸಿದೆ. ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದೆ.

LIVE NEWS & UPDATES

The liveblog has ended.
  • 01 Nov 2023 10:59 PM (IST)

    Kannada Rajyotsava 2023 Live: 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗಿದೆ. 5 ಲಕ್ಷ ರೂ. ನಗದು, 25 ಗ್ರಾಂ ಚಿನ್ನ ಹಾಗೂ ಪ್ರಶಸ್ತಿಯನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಮಾಡಿದ್ದಾರೆ. ಇಸ್ರೋ ಮುಖ್ಯಸ್ಥ ಸೋಮನಾಥ್‌, ಡಿಂಗ್ರಿ ನಾಗರಾಜ್, ಬ್ಯಾಂಕ್ ಜನಾರ್ದನ್‌ ಸೇರಿದಂತೆ 68 ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

  • 01 Nov 2023 10:27 PM (IST)

    Kannada Rajyotsava 2023 Live: ನನಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದ್ದಕ್ಕೆ ಧನ್ಯವಾದಗಳು

    ರವೀಂದ್ರ ಕಲಾಕ್ಷೇತ್ರದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ನನಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದ್ದಕ್ಕೆ ಧನ್ಯವಾದಗಳು ಎಂದು ಇಸ್ರೋ ಮುಖ್ಯಸ್ಥ ಸೋಮನಾಥ್ ಹೇಳಿದ್ದಾರೆ.

  • 01 Nov 2023 09:36 PM (IST)

    Kannada Rajyotsava 2023 Live: ಕರ್ನಾಟಕ ನಾವೀಕರಣವಾಗಿ 50 ವರ್ಷ ಪೂರೈಸಿದೆ

    68 ಜನ ಸಾಧಕರಿಗೆ ಪ್ರಶ್ತಿಗಳನ್ನ ನೀಡಿದ್ಧೆವೆ. 10 ಸಂಘ ಸಂಸ್ಥೆಗಳಿಗೂ ನೀಡಿದ್ಧೆವೆ. ಕರ್ನಾಟಕ ನಾವೀಕರಣವಾಗಿ 50 ವರ್ಷ ಪೂರೈಸಿದೆ. ಹೀಗಾಗಿ ಸಂಘ ಸಂಸ್ಥೆಗಳಿಗೆ ಪ್ರಶಸ್ತಿ ನೀಡಿದ್ಧೆವೆ. ಈ ವರ್ಷ ಕರ್ನಾಟಕ ರಾಜ್ಯ 1956 ನೆವೆಂಬರ್ ಏಕೀಕರಣ ಆಯ್ತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

  • 01 Nov 2023 09:11 PM (IST)

    Kannada Rajyotsava 2023 Live: ಕರ್ನಾಟಕ ಇಡೀ ವಿಶ್ವದಲ್ಲೇ ಹೆಸರು ಮಾಡಿದೆ

    ಕರ್ನಾಟಕ ಇಡೀ ವಿಶ್ವದಲ್ಲೇ ಹೆಸರು ಮಾಡಿದೆ. ನಮ್ಮ ಸಾಧಕರು ವಿಶ್ವದಲ್ಲಿ ಸಾಧನೆ ಗೈದಿದ್ದಾರೆ. ಇವರಿಂದ ಮುಂದಿನ ಪೀಳಿಗೆಗೆ ಸಾಕಷ್ಟು ತಿಳುವಳಿಕೆ ಬರಲಿದೆ. ವಿಶ್ವದಾದ್ಯಂತ ನಮ್ಮ ಕನ್ನಡಿಗರು ಇದ್ದಾರೆ. ನಾವು ಸರ್ಕಾರಕ್ಕೆ ಬಂದ ನಂತರ ಹೇಳಿದ ಕೆಲಸಗಳನ್ನು ಮಾಡಿದ್ದೇವೆ. ನಾವು ಬಡವರ ಏಳಿಗೆಗೆ ಶ್ರಮಿಸುತ್ತೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.

  • 01 Nov 2023 08:32 PM (IST)

    Kannada Rajyotsava 2023 Live: ರಾಜಭವನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

    ರಾಜಭವನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಕನ್ನಡ ಗೀತ ಗಾಯನ, ಭರತನಾಟ್ಯ, ಯಕ್ಷಗಾನ, ಕೂಚುಪುಡಿ ನೃತ್ಯ, ಡೊಳ್ಳು ಕುಣಿತ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನ ಮಾಡಲಾಯಿತು.

  • 01 Nov 2023 07:34 PM (IST)

    Kannada Rajyotsava 2023 Live: 68ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ 68ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​​, ಗೃಹ ಸಚಿವ ಡಾ.ಪರಮೇಶ್ವರ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ, ಸಚಿವ ಭೈರತಿ ಸುರೇಶ್‌ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದಾರೆ.

  • 01 Nov 2023 07:08 PM (IST)

    Kannada Rajyotsava 2023 Live: ಸಾಗರಾಚೆಯಲ್ಲೂ ಕನ್ನಡಾಭಿಮಾನ ಮೆರೆದ ಕರುನಾಡಿನ ಯುವಕರು

    ಅರಬ್ ದೇಶ ಜೋರ್ಡಾನ್​ನಲ್ಲೂ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಕೇಕ್ ಕತ್ತರಿಸಿ ಕನ್ನಡ ಬಾವುಟ ಹಾರಿಸಿ ಕನ್ನಡಿಗರು ಸಂಭ್ರಮಿಸಿದ್ದಾರೆ. ಹಾಸನ ಜಿಲ್ಲೆ ಸೇರಿ ವಿವಿದೆಡೆಯಿಂದ ಕೆಲಸದ ನಿಮಿತ್ತ ಜೋರ್ಡಾನ್​ಗೆ ಕನ್ನಡಿಗರು ತೆರಳಿದ್ದಾರೆ. ದೂರದ ದೇಶದಲ್ಲಿದ್ದರು ಕನ್ನಡ ರಾಜ್ಯೋತ್ಸವ ಮೂಲಕ ಕನ್ನಡಾಭಿಮಾನ ಮೆರೆದಿದ್ದಾರೆ.

  • 01 Nov 2023 06:33 PM (IST)

    Kannada Rajyotsava 2023 Live: ಕನ್ನಡ ಡಿಂಡಿಮವ ಬಾರಿಸಿ ಕುಣಿದು ಕುಪ್ಪಳಿಸಿದ ಪೂಜಾ ಗಾಂಧಿ

  • 01 Nov 2023 05:35 PM (IST)

    Kannada Rajyotsava 2023 Live: ಕನ್ನಡದ ಕಂಪು ಸಾರಿದ KSRTC ಬಸ್​

  • 01 Nov 2023 04:37 PM (IST)

    Kannada Rajyotsava 2023 Live: 68ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಸಿಎಂ ಸಂತೋಷ ಕೂಟ

    68ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಸಂಜೆ 4.30ಕ್ಕೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 168 ಸಾಧಕರ ಜೊತೆ ಸಿಎಂ ಸಿದ್ದರಾಮಯ್ಯ ಸಂತೋಷ ಕೂಟ ನಡೆಸಲಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್​ ಕೂಡ ಭಾಗಿಯಾಗಲಿದ್ದಾರೆ.

  • 01 Nov 2023 04:12 PM (IST)

    Kannada Rajyotsava 2023 Live: ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆ ಗಲಾಟೆ

    ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆ ಯುವಕರ 2 ಗುಂಪುಗಳ ನಡುವೆ ಗಲಾಟೆ ನಡೆದಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಚೆನ್ನಮ್ಮ ವೃತ್ತದಲ್ಲಿ ನಡೆದಿದೆ. ನೃತ್ಯ ಮಾಡುವ ವಿಚಾರಕ್ಕೆ ಯುವಕರು ಹೊಡೆದಾಡಿಕೊಂಡಿದ್ದಾರೆ. ಯುವಕರ ನಡುವೆ ಗಲಾಟೆ ನಡೆಯುತ್ತಿದ್ರೂ ಪೊಲೀಸರು ಸುಮ್ಮನಿದ್ದರು. ಕೆಲವರ ಮೇಲೆ ಹಲ್ಲೆ ನಡೆಸಿ ಸ್ಥಳದಿಂದ ಹೊರಹಾಕಿದ್ದಾರೆ.

  • 01 Nov 2023 03:13 PM (IST)

    Congress pressmeet Live: ಪಕ್ಷದ ಚೌಕಟ್ಟು ಮೀರಿ ಸಚಿವರು, ಶಾಸಕರು ಮಾತನಾಡುವಂತಿಲ್ಲ

    ಪಕ್ಷದ ಚೌಕಟ್ಟು ಮೀರಿ ಸಚಿವರು, ಶಾಸಕರು ಮಾತನಾಡುವಂತಿಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಎಚ್ಚರಿಕೆ ನೀಡಿದ್ದಾರೆ. ಪಕ್ಷ ಚೌಕಟ್ಟು ಮೀರಿ ಮಾತನಾಡಿದರೆ ಶಿಸ್ತು ಕ್ರಮ ಜರುಗಿಸುತ್ತೇವೆ. ಸಭೆಯಲ್ಲಿ ನಿಗಮ ಮಂಡಳಿ ನೇಮಕಾತಿ ಬಗ್ಗೆಯೂ ಚರ್ಚೆಯಾಗಿದೆ. ನಿಗಮ ಮಂಡಳಿ ನೇಮಕಾತಿ ಬಗ್ಗೆ ಮತ್ತಷ್ಟು ಚರ್ಚೆಯಾಗಬೇಕಿದೆ. ಮಧ್ಯಪ್ರದೇಶ ಚುನಾವಣೆ ಮುಗಿದ ಬಳಿಕ ಮತ್ತೆ ವಾಪಸ್ ಬರುತ್ತೇನೆ. 2-3 ಹಂತದ ಮಾತುಕತೆ ಆಗುವುದು ಬಾಕಿ ಇದೆ ಎಂದಿದ್ದಾರೆ.

  • 01 Nov 2023 02:37 PM (IST)

    Congress Leaders pressmeet Live: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ-ವೇಣುಗೋಪಾಲ್

    ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ. ಪ್ರಧಾನಮಂತ್ರಿಗೆ ಏನಾದ್ರೂ ಸಂದೇಶ ರವಾನಿಸುವುದು ಇದ್ದರೇ ಹೇಳಿ ನಾನು ಅವರಿಗೆ ತಿಳಿಸುತ್ತೇನೆ ವ್ಯಂಗ್ಯ ಮಾಡಿದ್ದಾರೆ.

  • 01 Nov 2023 02:22 PM (IST)

    DK Shivakumar pressmeet Live: ಡಿ.ಕೆ.ಶಿವಕುಮಾರ್​ ಸುದ್ದಿಗೋಷ್ಠಿ

    ವೇಣುಗೋಪಾಲ್, ಸುರ್ಜೇವಾಲ ಅನೇಕ ವಿಚಾರ ಚರ್ಚಿಸಿದ್ದಾರೆ. ಎಐಸಿಸಿ ನಾಯಕರು ಅನೇಕ‌ ಮಾರ್ಗದರ್ಶನ ಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ನಾವು ಕೂತು ಚರ್ಚೆ ಮಾಡಿದ್ದೇವೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ.

  • 01 Nov 2023 01:19 PM (IST)

    Kannada Rajyotsava 2023 Live: ಕೋಲಾರದಲ್ಲಿ ಕನ್ನಡ ಬಾವುಟ ಧ್ವಜಾರೋಹಣ ವೇಳೆ ಅಚಾತುರ್ಯ

    ಕೋಲಾರ: ಕನ್ನಡ ಬಾವುಟ ಧ್ವಜಾರೋಹಣ ವೇಳೆ ಅಚಾತುರ್ಯ ನಡೆದಿದೆ. ಧ್ವಜಾರೋಹಣ ವೇಳೆ ಕರ್ನಾಟಕ ಬಾವುಟ ಕಂಬದಿಂದ ಕೆಳಗೆ ಬಿದ್ದಿದೆ. ಕೋಲಾರ ನಗರದ ಎಂ.ಜಿ.ರಸ್ತೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವಘಡ ನಡೆದಿದೆ. ನಂತರ ಓರ್ವ ಯುವಕ ಕಂಬ ಹತ್ತಿ ಕನ್ನಡ ಧ್ವಜ ಕಟ್ಟಿದರು.  ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಅಕ್ರಂ‌ಪಾಷಾ ಶಾಸಕ, ಸಂಸದರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

  • 01 Nov 2023 12:37 PM (IST)

    Kannada Rajyotsava 2023 Live: ಸಮುದ್ರದಲ್ಲಿ ಕನ್ನಡ ಬಾವುಟದ ಮೆರವಣಿಗೆ

    ಉತ್ತರಕನ್ನಡ: ಜಿಲ್ಲೆಯ ಮುರ್ಡೇಶ್ವರ ಕಡಲತೀರದಲ್ಲಿ ಕನ್ನಡ ಬಾವುಟ ಹಾರಾಡಿದೆ. ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ಒಶಿಯನ್ ಅಡ್ವೆಂಚರ್ ಬೋಟಿನಿಂದ ಸಂಭ್ರಮ ಮುಗಿಲು ಮುಟ್ಟಿದೆ. ಸಮುದ್ರದಲ್ಲಿ ಕನ್ನಡ ಬಾವುಟದ ಮೆರವಣಿಗೆ ಮಾಡಲಾಯಿತು.

  • 01 Nov 2023 12:17 PM (IST)

    Kannada Rajyotsava 2023 Live: ಕನ್ನಡ ರಾಜ್ಯೋತ್ಸವದ ವೇಳೆ ಯಡವಟ್ಟು ಮಾಡಿಕೊಂಡ ಡಿ ಸುಧಾಕರ್

    ಚಿತ್ರದುರ್ಗ: ಕನ್ನಡ ರಾಜ್ಯೋತ್ಸವದ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಯಡವಟ್ಟು ಮಾಡಿಕೊಂಡಿದ್ದಾರೆ.  ಚಿತ್ರದುರ್ಗದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಷಣದ ವೇಳೆ ಸಿರಿಗನ್ನಡಂ ಗೆಲ್ಗೆ ಬದಲು ಸಿರಿಗನ್ನಡಂ ಗಲ್ಗೆ ಎಂದಿದ್ದಾರೆ.

  • 01 Nov 2023 11:49 AM (IST)

    Kannada Rajyotsava 2023 Live: ಬೆಳಗಾವಿಯಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ

    ಬೆಳಗಾವಿ: ನಗರದಲ್ಲಿ ಅದ್ದೂರಿಯಾಗಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ ಬಳಿಕ ಧ್ವಜಾರೋಹಣ ನೆರವೇರಿಸಿದರು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ 25 ಜನ ಸಾಧಕರಿಗೆ ಸನ್ಮಾನ ಮಾಡಿದರು. ಪೆರೇಡ್ ಪರಿವೀಕ್ಷಣೆ, ಅತ್ಯಾಕರ್ಷಕ ಪಂಥ ಸಂಚಲನ ನಡೆಯಿತು. ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಡಿಸಿ ನಿತೇಶ್ ಪಾಟೀಲ್, ಬಿಜೆಪಿ ಶಾಸಕ ಅಭಯ್ ಪಾಟೀಲ್, ಎಸ್​ಪಿ ಭೀಮಾಶಂಕರ ಗುಳೇದ, ಜಿ.ಪಂ.​​ಸಿಇಒ ಹರ್ಚಲ್​​ ಸೇರಿದಂತೆ ಹಲವರು ಭಾಗಿಯಾಗಿದ್ದರು.

  • 01 Nov 2023 11:17 AM (IST)

    Kannada Rajyotsava 2023 Live: ಆಪ್ ಕಚೇರಿಯಲ್ಲಿ​ ಕನ್ನಡ ರಾಜ್ಯೋತ್ಸವ ಸಂಭ್ರಮ

    ಬೆಂಗಳೂರು: ನಗರದ ಕುಮಾರಪಾರ್ಕ್ ರಸ್ತೆಯಲ್ಲಿರುವ ಆಮ್​ ಆದ್ಮಿ ಪಕ್ಷದ ರಾಜ್ಯ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗಿಯಾಗಿದ್ದರು.

  • 01 Nov 2023 11:01 AM (IST)

    Kannada Rajyotsava 2023 Live: ವಿವಿಧ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

    ಬೆಂಗಳೂರು: ಚಿಕ್ಕಮಗಳೂರಿನಲ್ಲಿ ಸಚಿವ ಕೆ.ಜೆ.ಜಾರ್ಜ್​, ಮಂಡ್ಯದಲ್ಲಿ ಸಚಿವ ಎನ್.ಚಲುವರಾಯಸ್ವಾಮಿ, ಕಲಬುರಗಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ, ತುಮಕೂರಿನಲ್ಲಿ ಸಚಿವ ಡಾ.ಜಿ.ಪರಮೇಶ್ವರ್, ಮೈಸೂರಿನಲ್ಲಿ  ಸಚಿವ ಮಹದೇವಪ್ಪ, ಹಾವೇರಿಯಲ್ಲಿ ಸಚಿವ ಶಿವಾನಂದ ಪಾಟೀಲ್​, ಬಾಗಲಕೋಟೆಯಲ್ಲಿ ಸಚಿವ ತಿಮ್ಮಾಪುರ, ರಾಯಚೂರಿನಲ್ಲಿ ಸಚಿವ ಡಾ.ಶರಣ ಪ್ರಕಾಶ್​, ಕೊಪ್ಪಳದಲ್ಲಿ ಸಚಿವ ಶಿವರಾಜ್ ತಂಗಡಗಿ ಧ್ವಜಾರೋಹಣ ನೆರವೇರಿಸಿದರು.

  • 01 Nov 2023 10:31 AM (IST)

    Kannada Rajyotsava 2023 Live: ಪ್ರತಿಯೊಬ್ಬ ಕನ್ನಡಿಗನು ತಾಯಿನಾಡಿನ ಋಣ ತಿರಸಿಬೇಕು: ಸಿದ್ದರಾಮಯ್ಯ ಕರೆ

    ಬೆಂಗಳೂರು: ಕರ್ನಾಟಕ‌ವೆಂದು ನಾಮಕರಣ ಇವತ್ತಿಗೆ 50 ವರ್ಷ ತುಂಬಿದೆ. ಇದರ ಸವಿನೆನಪಿಗಾಗಿ ರಾಜ್ಯದಲ್ಲಿ ಒಂದು ವರ್ಷ ಕರ್ನಾಟಕ ಸಂಭ್ರಮ 50 ಅಂತ ಕರಿಬೇಕು ಎಂದು ಜನರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿಕೊಂಡರು. ಕನ್ನಡದ ಇತಿಹಾಸ, ಸಂಸ್ಕೃತಿ, ಭಾಷೆ, ಕಲೆ, ಸಂಗೀತ, ಜಾನಪದ, ಸಂಪ್ರದಾಯಯವನ್ನ ರಾಜ್ಯದ ಜನರಿಗೆ ತಿಳಿಸುವ ಕೆಲಸ ಮಾಡುತ್ತಿದ್ದೇವೆ. ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಎಂದು ಘೋಷ ವಾಕ್ಯ ಕೊಟ್ಟಿದ್ದೇವೆ. ಇಡೀ ರಾಜ್ಯದಲ್ಲಿ ಈ ಘೋಷ ವಾಕ್ಯದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಈ ವರ್ಷವೇ 50 ವರ್ಷ ಮುಗಿಯಬೇಕಿತ್ತು, ಆದರೆ ಹಿಂದಿ ನ‌ಸರ್ಕಾರ ಮಾಡಲಿಲ್ಲ. ಬಾನು ಬಜೆಟ್​ನಲ್ಲಿ ಘೊಷಣೆ ಮಾಡಿದ್ದೆ ನ. 1,2023- ನ.1, 2024ರವರೆಗೆ ಈ ಉತ್ಸವ ಮಾಡಲು ಘೋಷಣೆ ಮಾಡಿದ್ದೇನೆ. ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇನೆ. ಪ್ರತಿಯೊಬ್ಬ ಕನ್ನಡಿಗನು ಕೂಡಾ ತಾಯಿನಾಡಿಗೆ ಋಣ ತಿರಸಿಬೇಕಿದೆ ಎಂದರು.

  • 01 Nov 2023 10:07 AM (IST)

    Kannada Rajyotsava 2023 Live: ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಪಿಸಿ ಮೋಹನ್ ಧ್ವಜಾರೋಹಣ

    ಬೆಂಗಳೂರು: ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಂಸದ ಪಿ.ಸಿ.ಮೋಹನ್ ಧ್ವಜಾರೋಹಣ ನೆರವೇರಿಸಿದರು. ಎಂಎಲ್​ಸಿ ಎನ್.ರವಿಕುಮಾರ್, ಪ್ರತಾಪ್ ಸಿಂಹ ನಾಯಕ್ ಭಾಗಿಯಾಗಿದ್ದರು.

  • 01 Nov 2023 10:04 AM (IST)

    Kannada Rajyotsava 2023 Live: ನವದೆಹಲಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಕಾಶ್​ ಹುಕ್ಕೇರಿ

    ನವದೆಹಲಿಯಲ್ಲೂ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ನವದೆಹಲಿಯಲ್ಲಿನ ಕರ್ನಾಟಕ ಭವನದಲ್ಲಿ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ್ ಹುಕ್ಕೇರಿ ಅವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ನೂರಾರು ಕನ್ನಡಿಗರು ನೆರೆದಿದ್ದಾರೆ.

  • 01 Nov 2023 10:01 AM (IST)

    Kannada Rajyotsava 2023 Live: ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಿ ಮೋದಿ

    ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ ಸತತ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ. ಕರ್ನಾಟಕ ಮತ್ತಷ್ಟು ಪ್ರವರ್ಧಮಾನಕ್ಕೆ ಬರಲಿ, ಇನ್ನಷ್ಟು ನಾವೀನ್ಯತೆಯೊಂದಿಗೆ ಎಲ್ಲರಿಗೂ ಸ್ಫೂರ್ತಿಯಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿಯವರು ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದರು.

  • 01 Nov 2023 09:51 AM (IST)

    Kannada Rajyotsava 2023 Live: ಯಾದಗಿರಿ ಹೊರತುಪಡಿಸಿ, ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

    ಬೆಂಗಳೂರು: ರಾಜ್ಯಾದ್ಯಂತ ಇಂದು 68ನೇ ಕನ್ನಡ ರಾಜ್ಯೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ, ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿದರು. ಹಾಸನದಲ್ಲಿ ಸಚಿವ ಕೆ.ಎನ್.ರಾಜಣ್ಣ, ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್, ಯಾದಗಿರಿಯಲ್ಲಿ ಡಿಸಿ ಡಾ.ಸುಶೀಲಾ. ರಾಮನಗರದಲ್ಲಿ ಸಚಿವ ರಾಮಲಿಂಗಾರೆಡ್ಡಿ, ಉಡುಪಿಯಲ್ಲಿ ಧ್ವಜಾರೋಹಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಚಿತ್ರದುರ್ಗದಲ್ಲಿ ಸಚಿವ ಡಿ.ಸುಧಾಕರ್, ಬೀದರ್​ನಲ್ಲಿ ಸಚಿವ ಈಶ್ವರ ಖಂಡ್ರೆ, ಗದಗಿನಲ್ಲಿ ಸಚಿವ ಹೆಚ್​.ಕೆ.ಪಾಟೀಲ್, ಬೆಂಗಳೂರು ಗ್ರಾಮಾಂತರ ಜಿಲ್ಲೆದೇವನಹಳ್ಳಿಯಲ್ಲಿ ಸಚಿವ ಕೆ.ಹೆಚ್.ಮುನಿಯಪ್ಪ, ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್‌ ಅವರು ಧ್ವಜಾರೋಹಣ ನೆರವೇರಿಸಿದರು.

  • 01 Nov 2023 09:37 AM (IST)

    Kannada Rajyotsava 2023 Live: ಮಂಡ್ಯದಲ್ಲಿ ಸಚಿವ ಎನ್​​ ಚಲುವರಾಯಸ್ವಾಮಿ ಧ್ವಜಾರೋಹಣ

    ಮಂಡ್ಯ: ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಡ್ಯದಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಧ್ವಜಾರೋಹಣ ನೆರವೇರಿಸಿದರು. ಡಿಸಿ ಡಾ.ಕುಮಾರ್, ಸಿಇಒ ಶೇಖ್ ತನ್ವೀರ್, ಎಸ್​ಪಿ ಯತೀಶ್ ಭಾಗಿಯಾಗಿದ್ದಾರೆ. ಪೊಲೀಸ್ ಇಲಾಖೆ ಸೇರಿದಂತೆ ಹಲವು ತಂಡಗಳಿಂದ ಪಥಸಂಚಲನ ನಡೆಯಿತು.

  • 01 Nov 2023 09:23 AM (IST)

    Kannada Rajyotsava 2023 Live: ಧಾರವಾಡದಲ್ಲಿ ಸಚಿವ ಸಂತೋಷ್​ ಲಾಡ್​ ಧ್ವಜಾರೋಹಣ

    ಧಾರವಾಡ: ಧಾರವಾಡದ ಆರ್ ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್‌ ಧ್ವಜಾರೋಹಣ ನೆರವೇರಿಸಿದರು. ಸಚಿವ ಲಾಡ್, ಡಿಸಿ ಗುರುದತ್ ಹೆಗಡೆ ಹಾಗೂ ಪೊಲೀಸ್ ಆಯುಕ್ತೆ ರೇಣುಕಾ ನಾಡದೇವಿಗೆ ಪುಷ್ಪ ಸಲ್ಲಿಸಿದರು. ಜಿಲಾ ಉಸ್ತುವಾರಿ ಸಚಿವ ಲಾಡ್‌ ಗೌರವ ವಂದನೆ ಸ್ವೀಕರಿಸಿದರು.

  • 01 Nov 2023 09:22 AM (IST)

    Kannada Rajyotsava 2023 Live: ಹಾಸನದಲ್ಲಿ ಸಚಿವ ಕೆಎನ್​ರಾಜಣ್ಣರಿಂದ ಧ್ವಜಾರೋಹಣ

    ಹಾಸನ: ಹಾಸನ ನಗರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಪ್ಪಾರ್ಚನೆ ಮಾಡಿ ಧ್ವಜಾರೋಹಣ ನೆರವೇರಿಸಿದರು. ಶಾಸಕ ಸ್ವರೂಪ್‌ಪ್ರಕಾಶ್, ಜಿಲ್ಲಾಧಿಕಾರಿ ಸಿ.ಸತ್ಯಭಾಮ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮದ್ ಸುಜೀತಾ ಹಾಗೂ ಜಿಲ್ಲಾಡಳಿತ ಅಧಿಕಾರಿಗಳು ಭಾಗಿಯಾಗಿದ್ದರು. ವಿವಿಧ ರಕ್ಷಣಾ ಪಡೆಗಳಿಂದ ಸಚಿವ ಕೆ.ಎನ್.ರಾಜಣ್ಣ ಧ್ವಜ ವಂದನೆ ಸ್ವೀಕರಿಸಿದರು. ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆದಿದೆ.

  • 01 Nov 2023 09:19 AM (IST)

    Kannada Rajyotsava 2023 Live: ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ

    ಬೆಂಗಳೂರು: ರಾಜ್ಯಾದ್ಯಂತ 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದರು. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರಾದ ಮಧು ಬಂಗಾರಪ್ಪ, ಎನ್​.ಚಲುವರಾಯಸ್ವಾಮಿ, ಶಾಸಕ ರಿಜ್ವಾನ್ ಅರ್ಷದ್, ಆರ್​. ವಿ.ದೇಶಪಾಂಡೆ​ ಸೇರಿದಂತೆ ಹಲವರು ಉಪಸ್ಥಿತರಿದ್ದರು.  ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ.

  • 01 Nov 2023 09:09 AM (IST)

    Kannada Rajyotsava 2023 Live: ಕನ್ನಡದ ಹಬ್ಬಕ್ಕೆ ಶೃಂಗಾರಗೊಂಡ ಕುಂದಾನಗರಿ, ಬೃಹತ್ ಮೆರವಣಿಗೆ

    ಬೆಳಗಾವಿ: ಕುಂದಾನಗರಿಯಲ್ಲಿ ಇಂದು ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತದೆ. ನಗರದ ಚನ್ನಮ್ಮ ವೃತ್ತ ಕನ್ನಡಮಯವಾಗಿದೆ. ನಗರದ ಪ್ರತಿಯೊಂದು ಬೀದಿಯಲ್ಲಿ ಕನ್ನಡದ ಬಾವುಟಗಳ ರಾರಾಜಿಸುತ್ತಿವೆ. ಇದೇ ಮೊದಲ ಬಾರಿಗೆ ಚನ್ನಮ್ಮ ವೃತ್ತದಲ್ಲಿ ವಿದ್ಯುತ್​ ದೀಪಾಲಂಕಾರ ಮಾಡಲಾಗಿದೆ. ರಾಜ್ಯೋತ್ಸವ ಮೆರವಣಿಗೆ ಬೆಳಗ್ಗೆ 10 ಗಂಟೆಗೆ ಆರಂಭವಾಗಲಿದೆ. ಸಂಜೆ ವರೆಗೂ ಮೆರವಣಿಗೆಯಲ್ಲಿ ಐದು ಲಕ್ಷ ಜನರು ಭಾಗಿಯಾಗುವ ಸಾಧ್ಯತೆ ಇದೆ. ಬೃಹತ್ ಮೆರವಣಿಗೆಯಲ್ಲಿ ನೂರಕ್ಕೂ ಅಧಿಕ ರೂಪಕಗಳು ಭಾಗಿಯಾಗಲಿವೆ. ಚನ್ನಮ್ಮ ವೃತ್ತದಿಂದ ಶನಿವಾರ ಕೂಟದವರೆಗೆ ಮೆರವಣಿಗೆ ನಡೆಯಲಿದೆ.

  • 01 Nov 2023 09:02 AM (IST)

    Kannada Rajyotsava 2023 Live: ರಾಜ್ಯೋತ್ಸವ ಸಂಭ್ರಮ, ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಸರ್ಕಾರದಿಂದ ಅದ್ಧೂರಿ ಕಾರ್ಯಕ್ರಮ

    ಬೆಂಗಳೂರು: ರಾಜ್ಯಾದ್ಯಂತ 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸುತ್ತಾರೆ. ಕಾರ್ಯಕ್ರಮದಲ್ಲಿ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗುತ್ತಾರೆ.

  • 01 Nov 2023 08:19 AM (IST)

    Kannada Rajyotsava 2023 Live: ಮೈಸೂರು, ಭುವನೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಮೈಸೂರು: ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ಮೈಸೂರಿನಲ್ಲಿ ಸಡಗರ ಮನೆ ಮಾಡಿದೆ. ಅರಮನೆಯ ಆವರಣದಲ್ಲಿರುವ ಜೈ ಭುವನೇಶ್ವರಿ ದೇವಸ್ಥಾನದಲ್ಲಿ‌ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌ ಸಿ ಮಹದೇವಪ್ಪ ಅವರಿಂದ ಪೂಜೆ ನೆರವೇರಿತು. ಅರಮನೆಯ ಬಲರಾಮ ದ್ವಾರದಿಂದ ಓವಲ್ ಮೈದಾನದವರೆಗೆ ಜೈಭುವನೇಶ್ವರಿ ಪ್ರತಿಮೆ ಮೆರವಣಿಗೆ ಮಾಡಲಾಗುತ್ತಿದೆ.

  • 01 Nov 2023 08:15 AM (IST)

    Kannada Rajyotsava 2023 Live: ರಾಜ್ಯದ ಜನತೆಗೆ ಕನ್ನಡ ರಾಜ್ಯೋತ್ಸವ ಶುಭಾಶಯ ಕೋರಿದ ಸಿದ್ದರಾಮಯ್ಯ

    ಪ್ರೀತಿಯ ನಾಡಬಾಂಧವರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.  ಈ ದಿನ ಕನ್ನಡಿಗರ ಪಾಲಿಗೆ ವಿಶೇಷ ದಿನ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ನಾವೆಲ್ಲರೂ ಗೌರವದಿಂದ ಸ್ಮರಿಸೋಣ. 1973 ರ ನವೆಂಬರ್ 1 ರಂದು ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿ ಇಂದಿಗೆ ೫೦ ವಸಂತಗಳು ಸಂದಿವೆ. ಕರ್ನಾಟಕದ ಸುವರ್ಣ ಮಹೋತ್ಸವದ ಈ ಸಂದರ್ಭದಲ್ಲಿ ಕನ್ನಡ ನಾಡಭಾಷೆಯಷ್ಟೇ ಆಗದೆ ನಾಡಿನ ಪ್ರತಿ ಮನೆಯ ಆಡು ಭಾಷೆಯಾಗಲಿ, ಈ ದಿನ ಕನ್ನಡಿಗರ ಪಾಲಿನ ನಿತ್ಯೋತ್ಸವವಾಗಲಿ ಎಂದು ಹಾರೈಸುತ್ತೇನೆ. ಮತ್ತೊಮ್ಮೆ ತಮ್ಮೆಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

  • 01 Nov 2023 08:00 AM (IST)

    Kannada Rajyotsava 2023 Live: ಕನ್ನಡ ರಾಜ್ಯೋತ್ಸವ ಶುಭಾಶಯ ತಿಳಿಸಿದ ಬಿಎಸ್​ ಯಡಿಯೂರಪ್ಪ

    ನಾಡಿನ ಏಕೀಕರಣಕ್ಕೆ ಹೋರಾಡಿದ ಎಲ್ಲ ಮಹನೀಯರ ಸಂಸ್ಮರಣೆಗಳ ಜೊತೆಗೆ ಕನ್ನಡ ಉಳಿಸುವ, ಬೆಳೆಸುವ ದೃಢಸಂಕಲ್ಪ ಸದಾ ನಮ್ಮದಾಗಿರಲಿ. ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಅಭಿಮಾನಪೂರ್ವಕ ಶುಭಾಶಯಗಳು.

  • 01 Nov 2023 07:48 AM (IST)

    Kannada Rajyotsava 2023 Live: ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ ಹೆಚ್​ಡಿ ಕುಮಾರಸ್ವಾಮಿ

    ಕರ್ನಾಟಕ ಎಂದು ಹೆಸರಾಗಿ ಇಂದಿಗೆ 50 ವರ್ಷವಾಗಿದೆ. ಸಾಧಿಸಿದ್ದು ಸಾಕಷ್ಟು, ಸಾಧಿಸಬೇಕಾದದ್ದು ಬಹಳಷ್ಟು. ಕನಸು ನನಸುಗಳ ಈ ಮಹಾಯಾನದಲ್ಲಿ ಸಾರ್ಥಕ ಹೆಜ್ಜೆ ಇಡುತ್ತಾ ಕನ್ನಡಾಂಬೆಯ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸೋಣ. ಪ್ರತಿ ಹೊಸಿಲಿನಲ್ಲಿಯೂ ಕನ್ನಡದ ನಂದಾದೀಪ ಬೆಳಗಲಿ, ಆ ಹೊನಲು ಜಗವೆಲ್ಲಾ ತುಂಬಿಕೊಳ್ಳಲಿ ಎಂದು ಆಶಿಸುತ್ತೇನೆ ಜೈ ಕರ್ನಾಟಕ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ.

  • 01 Nov 2023 07:26 AM (IST)

    Kannada Rajyotsava 2023 Live: 1956 ನವೆಂಬರ್​ 1 ರಂದು ಮೈಸೂರು ರಾಜ್ಯ ಉದಯ

    ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವವನ್ನು ಪ್ರತಿ ವರ್ಷದ ನವೆಂಬರ್ 1 ರಂದು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ 1956ರ ನವೆಂಬರ್ 1ರಂದು ಮೈಸೂರು ರಾಜ್ಯವೆಂದು ಘೋಷಣೆ ಮಾಡಲಾಯಿತು.

  • Published On - Nov 01,2023 7:24 AM

    Follow us
    ಬಸ್‌ ಪ್ರಯಾಣ ದರ ಹೆಚ್ಚಿಸಿದ್ದಕ್ಕೆ ಸಂಸದ ಯದುವೀರ್ ಗರಂ
    ಬಸ್‌ ಪ್ರಯಾಣ ದರ ಹೆಚ್ಚಿಸಿದ್ದಕ್ಕೆ ಸಂಸದ ಯದುವೀರ್ ಗರಂ
    ‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
    ‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
    ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
    ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
    ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
    ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
    ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
    ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
    ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
    ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
    ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
    ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
    ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
    ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
    ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
    ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
    ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
    ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ