AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರವೇ ನಾರಾಯಣಗೌಡ ಸೇರಿ 29 ಕಾರ್ಯಕರ್ತರಿಗೆ ಇಂದೂ ಬಿಡುಗಡೆ ಭಾಗ್ಯವಿಲ್ಲ, ಕಾರಣವೇನು?

ಬೆಂಗಳೂರಿನಲ್ಲಿ ಕನ್ನಡ ನಾಮಫಲಕ ಅಳವಡಿಸುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆ ವೇಳೆ ಪೊಲೀಸರರು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ 29 ಕಾರ್ಯಕರ್ತರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಿದ್ದ ಪ್ರಕರಣದಲ್ಲಿ ನಾರಾಯಣಗೌಡ ಸೇರಿ 29 ಕಾರ್ಯಕರ್ತರಿಗೆ ಜಾಮೀನು ಸಿಕ್ಕಿದೆ. ಆದ್ರೆ, ಬಿಡುಗಡೆ ಭಾಗ್ಯವಿಲ್ಲ.

ಕರವೇ ನಾರಾಯಣಗೌಡ ಸೇರಿ 29 ಕಾರ್ಯಕರ್ತರಿಗೆ ಇಂದೂ ಬಿಡುಗಡೆ ಭಾಗ್ಯವಿಲ್ಲ, ಕಾರಣವೇನು?
ಕರವೇ ಅಧ್ಯಕ್ಷ ನಾರಾಯಣಗೌಡ
TV9 Web
| Edited By: |

Updated on:Jan 08, 2024 | 9:39 PM

Share

ಬೆಂಗಳೂರು, (ಜನವರಿ 08): ಕರ್ನಾಟಕ ರಕ್ಷಣಾ ವೇದಿಕೆ(ಕರವೇ)ಅಧ್ಯಕ್ಷ ಎ.ನಾರಾಯಣಗೌಡ ಸೇರಿದಂತೆ 29 ಕಾರ್ಯಕರ್ತರಿಗೆ ಜಾಮೀನು ಸಿಕ್ಕಿದೆ. ಆದ್ರೆ, ಜಾಮೀನು ಆದೇಶ ಪ್ರತಿ ಜೈಲಾಧಿಕಾರಿಗೆ ಸರಿಯಾದ ಸಮಯಕ್ಕೆ ತಲುಪಿಲ್ಲ. ಈ ಹಿನ್ನೆಲೆಯಲ್ಲಿ ಇಂದೂ ಸಹ ನಾರಾಯಣಗೌಡ ಸೇರಿದಂತೆ 29 ಕರವೇ ಕಾರ್ಯಕರ್ತರಿಗೆ ಬಿಡುಗಡೆ ಭಾಗ್ಯವಿಲ್ಲ.  ಜಾಮೀನು ಆದೇಶ ಪ್ರತಿ ತಲುಪಿಸುವುದು ವಿಳಂಬವಾಗಿದ್ದರಿಂದ ನಾಳೆ ಬಿಡುಗಡೆಯಾಗುವ ಸಾಧ್ಯತೆಗಳಿವೆ.

ನಾರಾಯಣಗೌಡ ಪರ ವಕೀಲ ಹೇಳಿದ್ದೇನು?

ಇನ್ನು ಈ ಬಗ್ಗೆ ನಾರಾಯಣಗೌಡ ಪರ ವಕೀಲ ಕುಮಾರ್ ಎಲ್‌.ಜಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಸಂಜೆ 6.45 ಕ್ಕೆ ಬೇಲ್ ಕಾಪಿ ಜೈಲಿಗೆ ತಲುಪಿದೆ. ಯಾವುದೇ ವಿಳಂಬ ಆಗದೆ ಬೇಲ್ ಕಾಪಿ ತಲುಪಿದೆ. ರಾತ್ರಿ 10:30ವರೆಗೂ ಹೊರಬಿಡುವ ಕಾಲಾವಕಾಶ ಇದೆ ಲಾ ಆ್ಯಂಡ್ ಆರ್ಡರ್ ಪ್ರಾಬ್ಲಮ್ ಆಗಬಹುದು ಎನ್ನುವ ಕಾರಣಕ್ಕೆ ವಿಳಂಬ ಮಾಡುತ್ತಿರಬಹುದು. ನಾಳೆ ಬೆಳಗ್ಗೆಯೂ ಕೂಡ ಅವರನ್ನು ಬಿಡಬಹುದು ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಕರವೇ ನಾರಾಯಣಗೌಡ ಬಿಡುಗಡೆ ಆಗುತ್ತಿದ್ದಂತೆ ವಶಕ್ಕೆ ಪಡೆಯಲು 2 ಠಾಣೆಯ ಪೊಲೀಸರ ತಯಾರಿ

ಇನ್ನು ಇದೇ ವೇಳೆ ನಾರಾಯಣಗೌಡ ಮತ್ತೆ ಬಂಧನ ಮಾಡುವ ವಿಚಾರದ ಬಗ್ಗೆ ಮಾತನಾಡಿ, ಹೊರಬಂದ ನಂತರ ಅವರನ್ನು ಬಾಡಿ ವಾರೆಂಟ್ ಮೇಲೆ ವಶಕ್ಕೆ ಪಡೆಯಬಹುದು. ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ಪ್ರಕರಣದಲ್ಲಿ ವಾರೆಂಟ್ ಇದೆ. ಹಲಸೂರು ಗೇಟ್ ಠಾಣೆಯಲ್ಲಿ ಯಾವುದೇ ವಾರೆಂಟ್ ಇಲ್ಲ. ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಜಾಮೀನು ರಹಿತ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆ ಅವರನ್ನು ವಶಕ್ಕೆ ಪಡೆಯಬಹುದು. ವಶಕ್ಕೆ ಪಡೆದರು ಸಹ ನಾವು ನಾಳೆಯೇ ಬೇಲ್ ಮೂಲಕ ಹೊರಗೆ ತರುತ್ತೇವೆ ಎಂದು ಹೇಳಿದರು.

ನಾರಾಯಣಗೌಡ ಅವರನ್ನು ಹತ್ತಿಕ್ಕುವ ಕೆಲಸ ಆಗುತ್ತಿದೆ. ಈ ಸಂದರ್ಭದಲ್ಲಿ ಏಳು ವರ್ಷದ ಹಳೆಯ ಪ್ರಕರಣದಲ್ಲಿ ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಇದುವರೆಗೆ ಪೊಲೀಸರು ಯಾಕೆ ಸುಮ್ಮನಿದ್ದರು. ಸಮನ್ಸ್ ಯಾಕೆ ಜಾರಿ ಮಾಡಿರಲಿಲ್ಲ ಎಂದು ಪ್ರಶ್ನಿಸಿದ ಅವರು, ಸರ್ಕಾರ ನಾರಾಯಣ ಗೌಡ ಸೇರಿ ಕರವೇ ಕಾರ್ಯಕರ್ತರನ್ನು ಹತ್ತಿಕ್ಕುತ್ತಿದ್ದಾರೆ ಎಂದರು.

ಕನ್ನಡ ನಾಮಫಲಕ ಅಳವಡಿಸುವಂತೆ ಒತ್ತಾಯಿಸಿ ಡಿಸೆಂಬರ್‌ 27ರಂದು ಪ್ರತಿಭಟನೆ ವೇಳೆ ಪೊಲೀಸರು ಕರವೇ ನಾರಾಯಣ ಗೌಡ ಸೇರಿ ಹಲವರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಆದ್ರೆ, ಮೊನ್ನೆ ಶನಿವಾರವೇ 29ಜನರಿಗೆ ಜಾಮೀನು ಮಂಜೂರಾಗಿತ್ತು. ಆದ್ರೆ, ನಿನ್ನೆ ಭಾನುವಾರ ಆಗಿದ್ದರಿಂದ‌ ಜಾಮೀನು ಪ್ರತಿ ಪರೀಶಿಲನೆ ಸಾಧ್ಯವಾಗಿರಲಿಲ್ಲ. ಇದರಿಂದ ಇಂದು(ಜನವರಿ 08) ನಾರಾಯಣಗೌಡ ಸೇರಿದಂತೆ 29 ಕಾರ್ಯಕರ್ತರು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ಎನ್ನಲಾಗಿತ್ತು. ಈ ಹಿನ್ನೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪರಪ್ಪನ ಅಗ್ರಹಾರ ಬಳಿ ಪೊಲೀಸರು ಬಿಗಿ ಬಂದೋಬಸ್ತ್​ ಕೈಗೊಂಡಿದ್ದರು. ಆದ್ರೆ, ಆದೇಶ ಪ್ರತಿ ಜೈಲಿನ ಅಧಿಕಾರಿಗಳಿಗೆ ತಲುಪಿಸುವಲ್ಲಿ ವಿಳಂಬವಾದ ಹಿನ್ನೆಲೆಯಲ್ಲಿ ಬಿಡುಗಡೆ ಭಾಗ್ಯ ಸಿಕ್ಕಿಲ್ಲ.

ನಾರಾಯಣಗೌಡ ಜೈಲು ಸೇರಿದ್ದೇಕೆ

ಕಳೆದ ವರ್ಷ ಡಿಸೆಂಬರ್ 27 ರಂದು ಮಾಲ್, ಹೋಟೆಲ್‌ಗಳೂ ಸೇರಿದಂತೆ ವಾಣಿಜ್ಯ ಕಟ್ಟಡಗಳ ನಾಮಲಕಗಳಲ್ಲಿ ಕನ್ನಡ ಕಡ್ಡಾಯ ಬಳಕೆಗೆ ಆಗ್ರಹಿಸಿ ಕರವೇ ಕಾರ್ಯಕರ್ತರು ನಗರದಾದ್ಯಂತ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಕಾರ್ಯಕರ್ತರು ಮಾಲ್, ಹೋಟೆಲ್‌ಗಳ ಮೇಲೆ ಕಲ್ಲು ಹಾಗೂ ಚಪ್ಪಲಿ ತೂರಿ, ಒಳ ನುಗ್ಗಲು ಯತ್ನಿಸಿದ್ದರು. ಅಲ್ಲದೆ, ಅನ್ಯ ಭಾಷೆಯ ನಾಮಲಕಗಳು, ಫ್ಲೆಕ್ಸ್​, ಬ್ಯಾನರ್, ಹೋರ್ಡಿಂಗ್‌ಗಳನ್ನು ಕಿತ್ತೆಸೆದಿದ್ದರು. ಈ ಸಂಬಂಧ ನಗರದ ಹಲವು ಠಾಣೆಗಳಲ್ಲಿ ನಾರಾಯಣಗೌಡ ಮತ್ತು ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದ್ದವು.

ಪೊಲೀಸರ ಮೇಲೆ ಹಲ್ಲೆ, ಕರ್ತವ್ಯ ನಿರ್ವಹಣೆಗೆ ಅಡ್ಡಿ, ಸಾರ್ವಜನಿಕ ಆಸ್ತಿಗೆ ಹಾನಿ, ದೊಂಬಿ, ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ ಆರೋಪದಡಿ ಪೊಲೀಸರು ನಾರಾಯಣಗೌಡ ಹಾಗೂ ಕಾರ್ಯಕರ್ತರನ್ನು ಬಂಧಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:37 pm, Mon, 8 January 24

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?