ಮಹಾರಾಷ್ಟ್ರ ಸರ್ಕಾರದಿಂದ ಗಡಿ ವಿವಾದ ಕುರಿತು ಪುಸ್ತಕ ಬಿಡುಗಡೆ.. ಗೋಕಾಕ್‌ನಲ್ಲಿ ಕರವೇ ಪ್ರತಿಭಟನೆ
ಕರವೇ ಕಾರ್ಯಕರ್ತರು ಮಹಾರಾಷ್ಟ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿ, ಮಹಾರಾಷ್ಟ್ರ ಕರ್ನಾಟಕ ಸೀಮಾ ವಿವಾದ ಸಂಘರ್ಷ ಅನಿ ಸಂಕಲ್ಪ ಪುಸ್ತಕದ ಮುಖಪುಟ ದಹಿಸಿ ತೀವ್ರ ಆಕ್ರೋಶ ಹೊರ ಹಾಕುತ್ತಿದ್ದಾರೆ. ಡಾ.ದೀಪಕ್ ಕಮಲ್ ತಾನಾಜಿ ಪವಾರ್ ಸಂಪಾದಕತ್ವದಲ್ಲಿ ಮಹಾರಾಷ್ಟ್ರ ಸರ್ಕಾರ ಈ ಪುಸ್ತಕವನ್ನು ಪ್ರಕಟಿಸಿದೆ.
ಬೆಳಗಾವಿ: ಮಹಾರಾಷ್ಟ್ರ ಸರ್ಕಾರದ ವತಿಯಿಂದ ಗಡಿವಿವಾದ ಕುರಿತ ಪುಸ್ತಕ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿ ಪುಸ್ತಕ ಬಿಡುಗಡೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆಗೆ ಮುಂದಾಗಿದೆ. ಬೆಳಗಾವಿ ಜಿಲ್ಲೆ ಗೋಕಾಕ್‌ನ ವಾಲ್ಮಿಕಿ ವೃತ್ತದಲ್ಲಿ ಕರವೇ ಗೋಕಾಕ್ ತಾಲೂಕು ಅಧ್ಯಕ್ಷ ಬಸವರಾಜ ಖಾನಪ್ಪನವರ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ.
ಕರವೇ ಕಾರ್ಯಕರ್ತರು ಮಹಾರಾಷ್ಟ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿ, ಮಹಾರಾಷ್ಟ್ರ ಕರ್ನಾಟಕ ಸೀಮಾ ವಿವಾದ ಸಂಘರ್ಷ ಅನಿ ಸಂಕಲ್ಪ ಪುಸ್ತಕದ ಮುಖಪುಟ ದಹಿಸಿ ತೀವ್ರ ಆಕ್ರೋಶ ಹೊರ ಹಾಕುತ್ತಿದ್ದಾರೆ. ಡಾ.ದೀಪಕ್ ಕಮಲ್ ತಾನಾಜಿ ಪವಾರ್ ಸಂಪಾದಕತ್ವದಲ್ಲಿ ಮಹಾರಾಷ್ಟ್ರ ಸರ್ಕಾರ ಈ ಪುಸ್ತಕವನ್ನು ಪ್ರಕಟಿಸಿದೆ.
ಕರ್ನಾಟಕ ಸರ್ಕಾರ ಗಡಿ ವಿವಾದ ಗಂಭೀರವಾಗಿ ಪರಿಗಣಿಸಿಲ್ಲ ಸುಪ್ರೀಂ ಕೋರ್ಟ್‌ನಲ್ಲಿ ಕೇಸ್ ಇರುವಾಗ ಪುಸ್ತಕ ಬಿಡುಗಡೆ ನ್ಯಾಯಾಂಗ ನಿಂದನೆಯಾಗುತ್ತೆ. ಪುಸ್ತಕ ಬಿಡುಗಡೆಯಾಗುತ್ತಿದ್ದಂತೆ ಕರ್ನಾಟಕ ಸರ್ಕಾರ ಪುಸ್ತಕ ತರ್ಸಿ ಪರಿಶೀಲನೆ ನಡೆಸಬೇಕು. ನಂತರ ಪುಸ್ತಕವನ್ನೇ ದಾಖಲೆಯಾಗಿಟ್ಟುಕೊಂಡು ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಬೇಕು ಎಂದು ಬೆಳಗಾವಿಯಲ್ಲಿ ಕನ್ನಡಪರ ಹೋರಾಟಗಾರ ಅಶೋಕ್ ಚಂದರಗಿ ತಿಳಿಸಿದ್ದಾರೆ.
ಗಡಿ ವಿಚಾರ ಸಂಬಂಧ ಇಂದು ಮಹಾರಾಷ್ಟ್ರ ಸರ್ಕಾರ ಉನ್ನತ ಮಟ್ಟದ ಸಭೆ ನಡೆಸುತ್ತಿದೆ. ಬಳಿಕ ಮಧ್ಯಾಹ್ನ ಗಡಿ ವಿವಾದ ಬಗ್ಗೆ ಪುಸ್ತಕ ರಿಲೀಸ್ ಮಾಡ್ತಿದೆ. ಮಹಾರಾಷ್ಟ್ರ ಸರ್ಕಾರ ಗಡಿ ವಿವಾದ ಗಂಭೀರವಾಗಿ ಪರಿಗಣಿಸಿದೆ. ಅಲ್ಲದೆ ಗಡಿ ಉಸ್ತುವಾರಿ ಸಚಿವರನ್ನಾಗಿ ಇಬ್ಬರನ್ನು ನೇಮಕ ಮಾಡಲಾಗಿದೆ. ಆದರೆ ಕರ್ನಾಟಕ ಸರ್ಕಾರ ಗಡಿ ವಿವಾದ ಗಂಭೀರವಾಗಿ ಪರಿಗಣಿಸಿಲ್ಲ. ಗಡಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು ಮಹಾರಾಷ್ಟ್ರ ಸುತ್ತಾಡುತ್ತಿದ್ದಾರೆ. ಗಡಿ ಸಂರಕ್ಷಣಾ ಆಯೋಗ ಅಧ್ಯಕ್ಷರು ಎಂ.ಎಸ್. ಬಿಲ್ಡಿಂಗ್‌ನಲ್ಲಿರುತ್ತಾರೆ. ಗಡಿ ವಿವಾದ ಸಂಬಂಧ 2014ರಲ್ಲಿ ಸಭೆ ನಡೆಸಿದ ಬಳಿಕ ಮತ್ತೆ ಯಾವ ಸಭೆಯನ್ನೂ ನಡೆಸಿಲ್ಲ ಎಂದು ರಾಜ್ಯ ಸರ್ಕಾರದ ನಡೆಗೆ ಅಶೋಕ್ ಚಂದರಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗಡಿ ವಿವಾದ ಕುರಿತು ಮಹಾರಾಷ್ಟ್ರ ಸರ್ಕಾರದಿಂದ ಪುಸ್ತಕ ಬಿಡುಗಡೆ.. ಫಡ್ನವೀಸ್ ಸಹ ಭಾಗಿ: ತಾರಕಕ್ಕೇರುತ್ತ ಅಸಮಾಧಾನ?