ಸ್ಟಾರ್ಟಪ್​ನಲ್ಲಿ ದೇಶದಲ್ಲೇ ಕರ್ನಾಟಕಕ್ಕೆ ಎರಡನೇ ಸ್ಥಾನ

ದೇಶದಲ್ಲೇ ನವೋದ್ಯಮದಲ್ಲಿ (ಸ್ಟಾರ್ಟ್‌ಅಪ್) ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ ಮೊದಲ ಮತ್ತು ದೆಹಲಿ ಮೂರನೇ ಸ್ಥಾನದಲ್ಲಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ರಾಜ್ಯ ಸಚಿವ ಜಿತಿನ್ ಪ್ರಸಾದ್ ರಾಜ್ಯಸಭೆಗೆ ಮಾಹಿತಿ ನೀಡಿದರು.

ಸ್ಟಾರ್ಟಪ್​ನಲ್ಲಿ ದೇಶದಲ್ಲೇ ಕರ್ನಾಟಕಕ್ಕೆ ಎರಡನೇ ಸ್ಥಾನ
ಸಾಂದರ್ಭಿಕ ಚಿತ್ರ
Follow us
| Updated By: ವಿವೇಕ ಬಿರಾದಾರ

Updated on: Jul 27, 2024 | 2:31 PM

ಬೆಂಗಳೂರು, ಜುಲೈ 27: ದೇಶದಲ್ಲೇ ನವೋದ್ಯಮದಲ್ಲಿ (ಸ್ಟಾರ್ಟಪ್) ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ ಮೊದಲ ಮತ್ತು ದೆಹಲಿ ಮೂರನೇ ಸ್ಥಾನದಲ್ಲಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ರಾಜ್ಯ ಸಚಿವ ಜಿತಿನ್ ಪ್ರಸಾದ್ (Jitin Prasad) ರಾಜ್ಯಸಭೆಗೆ ಮಾಹಿತಿ ನೀಡಿದರು. ಕರ್ನಾಟಕದಲ್ಲಿ 15,019 ನವೋದ್ಯಮಗಳು (Startup) ನೋಂದಣಿ ಮಾಡಿಕೊಂಡಿವೆ. ಮಹಾರಾಷ್ಟ್ರದಲ್ಲಿ 25,044 ನವೋದ್ಯಮ ಸಂಸ್ಥೆಗಳು ಆರಂಭವಾಗಿವೆ. ದೆಹಲಿಯಲ್ಲಿ 14,734 ನವೋದ್ಯಮ ಕಂಪನಿಗಳು ನೋಂದಣಿ ಮಾಡಿಕೊಂಡಿವೆ. ಉತ್ತರ ಪ್ರದೇಶ 13,299, ಗುಜರಾತ್ 11,436 ನವೋದ್ಯಮಗಳೊಂದಿಗೆ ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನದಲ್ಲಿವೆ. ದೇಶದಲ್ಲಿ ನವೋದ್ಯಮಗಳ ನೋಂದಣಿ 1.4 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ನವೋದ್ಯಮಕ್ಕೆ ಉತ್ತೇಜನ

ಕಲ್ಯಾಣ ಕರ್ನಾಟಕ ಭಾಗದಲ್ಲಿ ನವೋದ್ಯಮಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮಾಹಿತಿ ತಂತ್ರಜ್ಞಾನ ಇಲಾಖೆಯ ಮೂಲಕ ಎಲಿವೇಟ್​ ಯೋಜನೆ ಆರಂಭಿಸಲಾಗಿದೆ. ನವೋದ್ಯಮಗಳನ್ನು ಆರಂಭಿಸುವ ಯುವಕ, ಯುವತಿಯರಿಗೆ ಈ ವರ್ಷ 4 ಕೋಟಿ ರೂ.ವರೆಗೆ ಧನಸಹಾಯ ನೀಡಲಾಗುತ್ತದೆ. ಈಗಾಗಲೆ 19 ನವೋದ್ಯಮಿಗಳಿಗೆ 2 ಕೋಟಿ ರೂ. ಧನಸಹಾಯ ಮಾಡಲಾಗಿದೆ ಎಂದು ಸಚಿವ ಪ್ರಿಯಾಂಕ್​ ಖರ್ಗೆ ತಿಳಿಸಿದರು.

ಇದನ್ನೂ ಓದಿ: ಬೆಂಗಳೂರಿನ ಸ್ಟಾರ್ಟಪ್ ಬ್ಲೂಲರ್ನ್ ಅಂತ್ಯ; ಹೂಡಿಕೆದಾರರಿಗೆ ಶೇ. 70 ಹಣ ಮರಳಿಸಿದ ಸಂಸ್ಥಾಪಕರು; ಕಂಪನಿ ಮುಚ್ಚಿದರೂ ಯುವಕರಿಗೆ ಕುಂದದ ಉತ್ಸಾಹ

ಕಲಬುರಗಿ ಜಿಲ್ಲೆಯ 11, ಬಳ್ಳಾರಿ ಜಿಲ್ಲೆಯ ಮೂರು, ಕೊಪ್ಪಳ ಹಾಗೂ ಬೀದರ್​ ತಲಾ ಎರಡು ಮತ್ತು ರಾಯಚೂರು ಜಿಲ್ಲೆಯ ಒಂದು ಸೇರಿದಂತೆ 19 ಸಂಸ್ಥೆಗಳನ್ನು ನವೋದ್ಯಮ ಸ್ಥಾಪನೆಗಾಗಿ ಗುರುತಿಸಲಾಗಿದೆ. ಆಯ್ಕೆಯಾಗಿರುವ 19 ಸಂಸ್ಥೆಗಳಲ್ಲಿ 7 ನವೋದ್ಯಮಗಳು ತಲಾ 25 ಲಕ್ಷ ರೂ. ಸಹಾಯಧನ ಮಂಜೂರಾತಿ ನೀಡಲಾಗಿದೆ. ಉಳಿದವಿಗಳಿಗೆ 20 ಲಕ್ಷ ರೂ.ಗಳಿಂದ 15 ಲಕ್ಷ ರೂ. ಸಹಾಯಧನ ಮಂಜೂರಾಗಿದೆ ಎಂದು ಹೇಳಿದರು.

2035ರ ವೇಳೆಗೆ ಬೆಂಗಳೂರಿನ ಜಿಡಿಪಿ ಶೇ 8.5 ರಷ್ಟು ಆಗಲಿದೆ. ನಮ್ಮ ರಾಜ್ಯದಲ್ಲಿ ಅತಿ ಹೆಚ್ಚು ಮಹಿಳಾ ಉದ್ಯೋಗಿಗಳಿದ್ದಾರೆ. ಬೆಂಗಳೂರು ನಗರದಲ್ಲಿ ಅತಿ ಹೆಚ್ಚು 1106 ಕಾಲೇಜುಗಳಿವೆ. 3600ಕ್ಕೂ ಹೆಚ್ಚು ನವೋದ್ಯಮಗಳು ಹೂಡಿಕೆ ಮಾಡಿವೆ. ಬೆಂಗಳೂರಿನಲ್ಲಿ 1100 ಮಹಿಳೆಯರು ನವೋದ್ಯಮಗಳನ್ನು ನಡೆಸುತ್ತಿದ್ದಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್