
ಬೆಂಗಳೂರು, ಜುಲೈ 23: ಕರ್ನಾಟಕದ ತಲಾ ಆದಾಯವು (Per Capita Income) ಈಗ 2 ಲಕ್ಷ ರೂಪಾಯಿ ದಾಟಿದ್ದು, 2,04,605 ರೂಪಾಯಿಗೆ ತಲುಪಿದೆ. ಇದು ಭಾರತದಲ್ಲಿಯೇ ಅತಿ ಹೆಚ್ಚಿನ ತಲಾ ಆದಾಯ. ಇದಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತವೇ ಕಾರಣ ಎಂದು ಕರ್ನಾಟಕ ಕಾಂಗ್ರೆಸ್ (congress) ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ (Randeep Singh Surjewala) ಪ್ರತಿಪಾದಿಸಿದ್ದಾರೆ. ಪತ್ರಿಕಾ ವರದಿಯನ್ನು ಉಲ್ಲೇಖಿಸಿ ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಸಂದೇಶ ಪ್ರಕಟಿಸಿರುವ ಅವರು, ಈ ಗಮನಾರ್ಹ ಸಾಧನೆಗೆ ಕಾಂಗ್ರೆಸ್ ಸರ್ಕಾರದ ದೂರದೃಷ್ಟಿಯ ಆರ್ಥಿಕ ನೀತಿಗಳು ಕಾರಣ. ಜತೆಗೆ ಸಾಮಾನ್ಯ ನಾಗರಿಕರ ಸಬಲೀಕರಣದ ಗುರಿಯನ್ನು ಹೊಂದಿರುವ ‘ಗ್ಯಾರಂಟಿ ಯೋಜನೆಗಳು’ ನೇರ ಪರಿಣಾಮ ಬೀರಿವೆ ಎಂದಿದ್ದಾರೆ.
ಗ್ಯಾರಂಟಿ ಯೋಜನೆಗಳು ರಾಜ್ಯವನ್ನು ದಿವಾಳಿ ಮಾಡುತ್ತವೆ ಎಂದು ಬಿಜೆಪಿ ನಾಯಕರು ಸುಳ್ಳು ಹೇಳುತ್ತಿದ್ದರು. ಆದರೆ, ಕೇಂದ್ರ ಹಣಕಾಸು ಸಚಿವಾಲಯದ ದತ್ತಾಂಶವೇ ಈಗ ಅವರ ಪ್ರತಿಪಾದನೆಯ ಪೊಳ್ಳುತನವನ್ನು ಬಹಿರಂಗಪಡಿಸಿದೆ ಎಂದು ಸುರ್ಜೇವಾಲ ಹೇಳಿದ್ದಾರೆ.
Karnataka’s per capita income has now crossed ₹2 lakh, reaching an impressive ₹2,04,605 — the highest in India. 📈
✅ This remarkable achievement is a direct result of the Congress government’s visionary economic policies and its transformative “Guarantee Schemes” aimed at… pic.twitter.com/pExeh2ywmg
— Randeep Singh Surjewala (@rssurjewala) July 23, 2025
ಕಾಂಗ್ರೆಸ್ ನಾಯಕತ್ವದಲ್ಲಿ ಕರ್ನಾಟಕವು ಸಮಗ್ರ ಅಭಿವೃದ್ಧಿಯ ಹಾದಿಯಲ್ಲಿ ಸ್ಥಿರವಾಗಿ ಮುಂದುವರಿಯುತ್ತಿದೆ. ಇಂದು, ರಾಜ್ಯದ ಗ್ಯಾರಂಟಿ ಯೋಜನೆಗಳ ಆಧಾರಿತ ಆಡಳಿತ ಮಾದರಿಯು ಕೋಟ್ಯಂತರ ಕನ್ನಡಿಗರಿಗೆ ನೆರವಾಗಿದ. ಗ್ಯಾರಂಟಿಗಳ ಮೂಲಕ ವಾರ್ಷಿಕವಾಗಿ 53,000 ಕೋಟಿ ರೂ. ಮೊತ್ತದ ಸೌಲಭ್ಯವನ್ನು ನಾಗರಿಕರಿಗೆ ನೀಡಲಾಗುತ್ತಿದ್ದು, ರಾಷ್ಟ್ರೀಯ ಮಾನದಂಡವಾಗಿ ಹೊರಹೊಮ್ಮಿದೆ ಎಂದು ಸುರ್ಜೇವಾಲ ಹೇಳಿದ್ದಾರೆ.
ಕಲ್ಯಾಣದಿಂದ ಬೆಳವಣಿಗೆಯವರೆಗೆ, ಕರ್ನಾಟಕವು ಹೊಸ ಎತ್ತರವನ್ನು ಏರುತ್ತಿದೆ. ಸಾಮಾಜಿಕ ನ್ಯಾಯ ಮತ್ತು ಆರ್ಥಿಕ ಪ್ರಗತಿಯನ್ನು ಜತೆಯಾಗಿ ಕೊಂಡೊಯ್ಯಬಹುದು ಎಂಬುದನ್ನು ಸಾಬೀತುಪಡಿಸುತ್ತಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಗ್ಯಾರಂಟಿಯಿಂದಾಗಿ ಸಮಸ್ಯೆ ಎಂದು ನಮ್ಮವರೇ ಕೆಲವರು ಹೇಳ್ತಾರೆ: ಮಲ್ಲಿಕಾರ್ಜುನ ಖರ್ಗೆ ಬೇಸರ
2024-25ನೇ ಹಣಕಾಸು ವರ್ಷದಲ್ಲಿ ಕರ್ನಾಟಕವು ದೇಶದಲ್ಲೇ ಅತಿ ಹೆಚ್ಚು ತಲಾ ಆದಾಯ ಹೊಂದಿರುವ ರಾಜ್ಯವಾಗಿ ಹೊರಹೊಮ್ಮಿದ್ದು, 2 ಲಕ್ಷ ರೂ.ಗಳ ಮಿತಿಯನ್ನು ದಾಟಿರುವುದು ಮಂಗಳವಾರ ಬೆಳಕಿಗೆ ಬಂದಿತ್ತು. ಕೇಂದ್ರ ಹಣಕಾಸು ಸಚಿವಾಲಯ ಲೋಕಸಭೆಯಲ್ಲಿ ಮಂಡಿಸಿದ ಅಂಕಿಅಂಶಗಳಿಂದ ಈ ವಿಚಾರ ಬೆಳಕಿಗೆ ಬಂದಿದೆ.
Published On - 11:34 am, Wed, 23 July 25